Homeಕರ್ನಾಟಕಬಿಜೆಪಿ ಕಾರ್ಯಕರ್ತನ ಸಾವು; ಈಶ್ವರಪ್ಪ ವಿರುದ್ದ ಮರ್ಡರ್‌ ಕೇಸ್‌ ಹಾಕಿ ಅರೆಸ್ಟ್‌ ಮಾಡಿ: ಸಿದ್ದರಾಮಯ್ಯ ಆಗ್ರಹ

ಬಿಜೆಪಿ ಕಾರ್ಯಕರ್ತನ ಸಾವು; ಈಶ್ವರಪ್ಪ ವಿರುದ್ದ ಮರ್ಡರ್‌ ಕೇಸ್‌ ಹಾಕಿ ಅರೆಸ್ಟ್‌ ಮಾಡಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಸಚಿವ ಈಶ್ವರಪ್ಪ ವಿರುದ್ದ ಲಂಚದ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಸಾವಿನ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಆತ್ಮಹತ್ಯೆ ಮಾಡಿಕೊಂಡವರು ತನ್ನ ಸಾವಿಗೆ ಈಶ್ವರಪ್ಪ ನೇರ ಕಾರಣ ಎಂದು ಹೇಳಿಕೊಂಡಿದ್ದಾರೆ. ಇದಕ್ಕಿಂತ ಹೆಚ್ಚಿನ ಸಾಕ್ಷಿ ಏನು ಬೇಕು. ಸಚಿವ ಈಶ್ವರಪ್ಪ ವಿರುದ್ದ ಮರ್ಡರ್‌ ಪ್ರಕರಣ ದಾಖಲಿಸಿ ಅವರನ್ನು ಅರೆಸ್ಟ್‌ ಮಾಡಿ ಸಚಿವ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್  ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್‌‌‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದೀಗ ಸಂತೋಷ್‌ ಅವರು ಉಡುಪಿಯ ಲಾಡ್ಜ್‌ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದ್ದು, ನಿನ್ನೆ ತಡರಾತ್ರಿಯೆ ಅವರು ಆತ್ಮಹತ್ಯೆ ನೋಟ್ ಬರೆದು ಅದನ್ನು ಮಾಧ್ಯಮ ಪತ್ರಿನಿಧಿಗಳಿಗೆ ಕಳುಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಮಾಧ್ಯಮಗಳ ಜೊತೆಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, “ಆತ್ಮಹತ್ಯೆ ಮಾಡಿಕೊಂಡವರು ತನ್ನ ಸಾವಿಗೆ ಈಶ್ವರಪ್ಪ ನೇರ ಕಾರಣ ಎಂದು ಹೇಳಿಕೊಂಡಿದ್ದಾರೆ. ಇದಕ್ಕಿಂತ ಹೆಚ್ಚಿನ ಸಾಕ್ಷಿ ಏನು ಬೇಕು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ

“ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ತನ್ನ ಸಾವಿಗೆ ಯಾರು ಕಾರಣ ಎಂದು ಹೇಳಿ ಸತ್ತಿದ್ದಾರೆ. ಈಶ್ವರಪ್ಪ ಅವರು ಅವರ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದ ಬೇರೆ ವಿಚಾರ. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಈಗ ಸಾವಿಗೆ ಕಾರಣ ಮಿಸ್ಟರ್‌ ಈಶ್ವರಪ್ಪ ಕಾರಣ, ತಾನು ಅವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ. ಹೀಗಾಗಿ ಅವರ ವಿರುದ್ದ ಸೆಕ್ಷನ್ 302 ಅಡಿಯಲ್ಲಿ ಮರ್ಡರ್‌ ಕೇಸ್‌ ದಾಖಲಿಸಿ ಅರೆಸ್ಟ್‌ ಮಾಡಿ, ಸಚಿವ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸಂತೋಷ್‌ ಪಾಟಿಲ್‌‌ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಡೆತ್‌ನೋಟ್‌‌‌‌ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅವರಲ್ಲಿ ಅವರು, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆದಿದ್ದಾರೆ.

“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...