Homeಕರ್ನಾಟಕಬಿಜೆಪಿ ಕಾರ್ಯಕರ್ತ‌ ಸಂತೋಷ್‌ ಸಾವು: ಎಫ್‌ಐಆರ್‌‌ ದಾಖಲು; ಸಚಿವ ಈಶ್ವರಪ್ಪ ಆರೋಪಿ ನಂ. 1

ಬಿಜೆಪಿ ಕಾರ್ಯಕರ್ತ‌ ಸಂತೋಷ್‌ ಸಾವು: ಎಫ್‌ಐಆರ್‌‌ ದಾಖಲು; ಸಚಿವ ಈಶ್ವರಪ್ಪ ಆರೋಪಿ ನಂ. 1

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ದ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಸಂತೋಷ್‌ ಅವರ ಸಹೋದರ ಪ್ರಶಾಂತ್‌ ಪಾಟೀಲ್ ನೀಡಿದ ದೂರಿನ ಪ್ರಕಾರ ಪೊಲೀಸರು ಈಶ್ವರಪ್ಪ ಸೇರಿದಂತೆ ಅವರ ಆಪ್ತರಿಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಗಾಗಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್‌‌‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದರ ನಂತರ ಮಂಗಳವಾರದಂದು ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೂ ಮುಂಚೆ ಮಾಧ್ಯಮಗಳಿಗೆ ಕಳುಹಿಸಿದ ಡೆತ್‌ ನೋಟ್‌ನಲ್ಲಿ ಅವರು, ‘‘ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ” ಎಂದು ನೇರವಾಗಿ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಡುಪಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಒಂದನೇ ಆರೋಪಿಯಾಗಿ ಸಚಿವ ಕೆ.ಎಸ್. ಈಶ್ವರಪ್ಪ, ಎರಡನೇ ಆರೋಪಿಯಾಗಿ ಅವರ ಆಪ್ತ ಬಸವರಾಜ ಮತ್ತು ಮೂರನೇ ಆರೋಪಿಯಾಗಿ ಅವರ ಮತ್ತೊಬ್ಬ ಆಪ್ತ ರಮೇಶ್‌ ಸೇರಿದಂತೆ ಇತರರನ್ನು ಹೆಸರಿಸಲಾಗಿದೆ.

ಇದನ್ನೂ ಓದಿ:ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ತಾವು ಕೈಗೊಂಡಿರುವ 4 ಕೋಟಿ ರೂ.ಗಳ ಕಾಮಗಾರಿಯಲ್ಲಿ 40% ದಷ್ಟು ಕಮಿಷನ್ ನೀಡುವಂತೆ ಸಚಿವರ ಸಂಗಡಿಗರು ಒತ್ತಾಯಿಸಿದ್ದಾರೆ ಎಂದು ಪ್ರಶಾಂತ್‌ ಪಾಟೀಲ್‌ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಸಚಿವ ಈಶ್ವರಪ್ಪ ಅವರು, ಸಂತೋಷ್‌ ಯಾರೆಂದು ತನಗೆ ಗೊತ್ತಿಲ್ಲ ಎಂದು ನಿನ್ನೆಯೆ ಹೇಳಿದ್ದಾರೆ. ಜೊತೆಗೆ ಅವರ ಸಾವಿನ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಕೋರಿದ್ದ ಪ್ರತಿಪಕ್ಷ ಕಾಂಗ್ರೆಸ್‌‌ನ ಬೇಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ.

ಸಂತೋಷ್‌ ಪಾಟಿಲ್‌‌ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಪತ್ರದಲ್ಲಿ, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆಯಲಾಗಿದೆ.

“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ:ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸಲ್ಲ: ಮೃತ ಸಂತೋಷ್‌ ಸಹೋದರ ಪ್ರತಿಜ್ಞೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...