Homeಮುಖಪುಟದಲಿತ ವಿದ್ಯಾರ್ಥಿ ಸಾಹಿಲ್ ವಾಕೋಡೆ ಸಾವು : ಐಐಟಿ ಬಾಂಬೆ ಬಳಿಯ ಪ್ರತಿಭಟನಾ ಸ್ಥಳ ತೆರವು;...

ದಲಿತ ವಿದ್ಯಾರ್ಥಿ ಸಾಹಿಲ್ ವಾಕೋಡೆ ಸಾವು : ಐಐಟಿ ಬಾಂಬೆ ಬಳಿಯ ಪ್ರತಿಭಟನಾ ಸ್ಥಳ ತೆರವು; ಪೋಷಕರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಐಐಟಿ ಬಾಂಬೆ ಬಳಿಯ ಪ್ರತಿಭಟನಾ ಸ್ಥಳವನ್ನು ಪೊಲೀಸರು ಭಾನುವಾರ (ಅ.18) ಧ್ವಂಸಗೊಳಿಸಿದ್ದಾರೆ ಮತ್ತು ಅದೇ ಸಂಸ್ಥೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಪೋಷಕರು ಮತ್ತು ಹಲವಾರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಈ ದಬ್ಬಾಳಿಕೆ ಮತ್ತು ಕ್ರೌರ್ಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಹಲವು ಪೋಸ್ಟ್‌ಗಳು ಬೆಟ್ಟು ಮಾಡಿ ತೋರಿಸಿವೆ ಎಂದು thewire.in ಸೋಮವಾರ (ಅ.19) ವರದಿ ಮಾಡಿದೆ.

ಸಾಹಿಲ್ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರನ್ನು ಪೊಲೀಸರು ಎಳೆದಾಡಿದ್ದಾರೆ, ಅವರ ಖಾಸಗಿ ಅಂಗಗಳನ್ನು ಮುಟ್ಟಿದ್ದಾರೆ ಮತ್ತು ಅವರಿಗೆ ಥಳಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾಗಿ ವರದಿ ಉಲ್ಲೇಖಿಸಿದೆ.

ಅಕ್ಟೋಬರ್ 18ಕ್ಕೆ ಸಾಹಿಲ್‌ ಸಾವಿಗೀಡಾಗಿ ಒಂದು ತಿಂಗಳಾಗಿದೆ.

‘ದಿ ಹಿಂದೂ’ ಪತ್ರಿಕೆಯ ವರದಿಯ ಪ್ರಕಾರ, ಭಾನುವಾರ ಪೊಲೀಸರು ಆರಂಭದಲ್ಲಿ 10 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದರು. ತದನಂತರ ಸಾಹಿಲ್ ಅವರ ಪೋಷಕರಾದ ರವೀಂದ್ರ ಮತ್ತು ಸೋನಾಲಿ ವಾಕೋಡೆ ಅವರು ಸಂಸ್ಥೆಯನ್ನು ತಲುಪಿ, ರಿಜಿಸ್ಟ್ರಾರ್‌ಗೆ ಪತ್ರವೊಂದನ್ನು ಸಲ್ಲಿಸಿದ್ದಾರೆ ಮತ್ತು ಕಾಂಗ್ರೆಸ್ ಸಂಸದೆ ವರ್ಷಾ ಗಾಯಕ್ವಾಡ್ ಅವರನ್ನು ಭೇಟಿಯಾಗಿದ್ದಾರೆ. ವರ್ಷಾ ಗಾಯಕ್ವಾಡ್ ಅವರು ಅಲ್ಲಿಂದ ಹೊರಟ ನಂತರ, ವಾಕೋಡೆ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದು ಆಝಾದ್ ಮೈದಾನ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಹಿಂದೂ ಪತ್ರಿಕೆಯ ಪ್ರಕಾರ, ಆಗ ಹದಿನಾರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿತ್ತು. ‘ಕ್ಯಾರವಾನ್’ ಈ ಸಂಖ್ಯೆ 22 ಎಂದು ತಿಳಿಸಿದೆ. ಸಂಜೆ 6 ಗಂಟೆಯ ನಂತರ ಅವರೆಲ್ಲರನ್ನೂ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಯವತ್ಮಾಲ್‌ನ ದಲಿತ (ಪರಿಶಿಷ್ಟ ಜಾತಿ) ಸಮುದಾಯಕ್ಕೆ ಸೇರಿದ ಸಾಹಿಲ್, ಸೆಪ್ಟೆಂಬರ್ 18ರಂದು ತಮ್ಮ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದರು.

‘ದಿ ವೈರ್’ ವರದಿ ಮಾಡಿರುವಂತೆ, ಸಾಹಿಲ್ ಅವರು ಮಧ್ಯಾವಧಿ ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸುತ್ತಿರುವುದು ಕಂಡುಬಂದಿತ್ತು ಮತ್ತು ಅವರ ವಿರುದ್ಧ ಯಾವುದೇ ಶಿಸ್ತು ಕ್ರಮ ಕೈಗೊಂಡಿರಲಿಲ್ಲ ಎಂದು ಐಐಟಿ ಬಾಂಬೆ ಆರಂಭದಲ್ಲಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. ಆದರೆ, “ಸಾಹಿಲ್ ನಿಜವಾಗಿಯೂ ನಕಲು ಮಾಡುತ್ತಿದ್ದರೇ ಎಂಬುದನ್ನು ಖಚಿತಪಡಿಸಿಕೊಳ್ಳದೆ ನಾವು ಈ ಹೇಳಿಕೆಯನ್ನು ನೀಡಿದ್ದೆವು” ಎಂದು ಒಪ್ಪಿಕೊಂಡಿರುವ ಸಂಸ್ಥೆ, ನಂತರ ಈ ಕುರಿತು ಕ್ಷಮೆಯಾಚಿಸಿದೆ. ಸಂಸ್ಥೆಯು ಸಾಹಿಲ್ ಅವರಿಗೆ ಜಾತಿ ಆಧಾರಿತ ತಾರತಮ್ಯ ಎಸಗಿದೆ ಮತ್ತು ಅವರನ್ನು ತೀವ್ರವಾಗಿ ಅವಮಾನಿಸಿದೆ, ಅದೇ ಅವರ ಸಾವಿಗೆ ಕಾರಣವಾಗಿದೆ ಎಂದು ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. 

ಸಂಸ್ಥೆಯು ಹೊಣೆಗಾರಿಕೆಯನ್ನು ಹೊರಬೇಕು ಮತ್ತು ಈ ಘಟನೆಯ ಕೇಂದ್ರಬಿಂದುವಾಗಿರುವ ಹಾಗೂ ಜಾತಿ ತಾರತಮ್ಯ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಪ್ರೊಫೆಸರ್ ಸೂರ್ಯನಾರಾಯಣ ದೂಲ್ಲಾ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ವಿದ್ಯಾರ್ಥಿಗಳು ಮತ್ತು ಹೋರಾಟಗಾರರು ಒಂದು ತಿಂಗಳಿನಿಂದ ಈ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
















ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನನ್ನ ಮೇಲೆ 45 ಮಾನನಷ್ಟ ಕೇಸ್ ಇವೆ, ಆದರೆ ವೋಟ್ ಚೋರಿ ಆರೋಪಕ್ಕೆ ಕೇಸ್ ಹಾಕಲ್ಲ” ನರೇಂದ್ರ ಮೋದಿ ಹಾಗೂ ಚುನಾವಣಾ ಆಯೋಗದ ವಿರುದ್ಧ ರಾಹುಲ್ ವಾಗ್ದಾಳಿ

"ನನ್ನ ವಿರುದ್ಧ ದೇಶಾದ್ಯಂತ ಮಾನನಷ್ಟ ಪ್ರಕರಣಗಳು ಸೇರಿದಂತೆ 45ಕ್ಕೂ ಹೆಚ್ಚು ಕೇಸ್‌ಗಳಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಂಬಂಧಿಸಿದ ವಿಷಯಗಳ ಮೇಲೂ ಮೊಕದ್ದಮೆಗಳಿವೆ. ಆದರೆ,...

‘ತಪ್ಪು ಮಾಡಿದ್ದಕ್ಕಾಗಿ ನಮಗೆ ಪಶ್ಚಾತಾಪವಿದೆ’ : 2023ರ ಚುನಾವಣಾ ಆಯುಕ್ತರ ಕಾಯ್ದೆ ಬೆಂಬಲಿಸಿದ್ದಕ್ಕೆ ಜಗನ್ ವಿಷಾದ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು...

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...