Homeಕರ್ನಾಟಕರಸ್ತೆ ಅಪಘಾತದಲ್ಲಿ ಪತಿ ಸಾವು: ಹಸುಗೂಸನ್ನು ಹತ್ಯೆ ಮಾಡಿ ಜೀವ ಕಳೆದುಕೊಂಡ ಮಹಿಳೆ

ರಸ್ತೆ ಅಪಘಾತದಲ್ಲಿ ಪತಿ ಸಾವು: ಹಸುಗೂಸನ್ನು ಹತ್ಯೆ ಮಾಡಿ ಜೀವ ಕಳೆದುಕೊಂಡ ಮಹಿಳೆ

- Advertisement -
- Advertisement -

ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುದ್ದಿ ತಿಳಿದು, ತನ್ನ ಆರು ತಿಂಗಳ ಹಸುಗೂಸನ್ನು ಹತ್ಯೆ ಮಾಡಿ, ತಾನೂ ಜೀವ ಕಳೆದುಕೊಂಡ ಘಟನೆ ನಡೆದಿರುವುದು ವರದಿಯಾಗಿದೆ.

36 ವರ್ಷದ ಗಂಗಾಧರ ಬಿ. ಕಮ್ಮಾರ ಅವರು ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸುತಿದ್ದರು. ಅವರು ಶನಿವಾರ ರಾತ್ರಿ ಕೆಲಸದಿಂದ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳೂರಿನ ಕುಂಟಿಕಾನ ಬಳಿ ರಸ್ತೆ ದಾಟುವಾಗ ಬೆಂಗಳೂರಿಂದ ಕುಂದಾಪುರಕ್ಕೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಹೋಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಗಾಧರ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ಬಗ್ಗೆ ಮಂಗಳೂರು ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ಪತಿ ಸಾವಿನ ಸುದ್ದಿ ತಿಳಿದು ಪತ್ನಿ ಆತ್ಮಹತ್ಯೆ:

ಗಂಗಾಧರ್‌ ಅವರ ಪತ್ನಿ ಶೃತಿ ಅವರು ರಾಯಚೂರು ಜಿಲ್ಲೆಯಲ್ಲಿರುವ ತಮ್ಮ ತವರು ಮನೆಗೆ ತೆರಳಿದ್ದರು. ಈ ವೇಳೆ, ಗಂಗಾಧರ್‌ ಸಾವನ್ನಪ್ಪಿದ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ತಮ್ಮ 6 ತಿಂಗಳ ಮಗು ಅಭಿರಾಮನನ್ನು ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾರರ ಹೆಸರು ಕೈಬಿಟ್ಟ ಹಗರಣ; ಬಿಜೆಪಿ ಪಕ್ಷದ ಕೈವಾಡದ ಆರೋಪ

0
ಭಾರತದ ಪ್ರಜಾಪ್ರಭುತ್ವದಲ್ಲಿ ಗ್ರಾಮ ಪಂಚಾಯ್ತಿಯಿಂದ ಹಿಡಿದು ಸಂಸತ್‌ವರೆಗೆ ಹಲವು ಹಂತಗಳ ಚುನಾವಣೆಗಳಲ್ಲಿ ಮತ ಚಲಾಯಿಸುವ ಮೂಲಕ ಜನಪ್ರತಿನಿಧಿಗಳನ್ನು ಮತದಾರರು ಆರಿಸುವುದಲ್ಲದೆ, ಆಳುವ ಸರ್ಕಾರಗಳನ್ನು ನಿರ್ಧರಿಸುತ್ತಾರೆ. ಈ ಚುನಾವಣಾ ವ್ಯವಸ್ಥೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿರಬೇಕಾದದ್ದು...