Homeಮುಖಪುಟರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

- Advertisement -
- Advertisement -

ಶ್ರಮಿಕ್ ವಿಶೇಷ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವುಗಳು ಸಣ್ಣ ಹಾಗೂ ಪ್ರತ್ಯೇಕ ಘಟನೆ, ಇದಕ್ಕಾಗಿ ರೈಲ್ವೇ ಇಲಾಖೆಯನ್ನು ನಿಂದಿಸುವುದು ಸರಿಯಲ್ಲ ಎಂದು ಪಶ್ಚಿಮ ಬಂಗಾಳ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಸೋಮವಾರದಿಂದ ತೀವ್ರ ಉಷ್ಣಾಂಶ ಹಾಗೂ ಹಸಿವೆಯಿಂದ ತಮ್ಮ ರಾಜ್ಯಗಳಿಗೆ ಹೊರಟಿದ್ದ ಒಟ್ಟು ಒಂಬತ್ತು ವಲಸೆ ಕಾರ್ಮಿಕರು ಶ್ರಮಿಕ್ ವಿಶೇಷ ರೈಲುಗಳಲ್ಲಿ ಮೃತಪಟ್ಟಿದ್ದಾರೆ.

“ಕೆಲವು ದುರದೃಷ್ಟಕರ ಘಟನೆಗಳು ನಡೆದಿವೆ, ಇದಕ್ಕಾಗಿ ರೈಲ್ವೆ ಇಲಾಖೆಯನ್ನು ದೂಷಿಸುವುದು ಸರಿಯಲ್ಲ. ವಲಸಿಗರನ್ನು ಅವರ ಊರಿಗೆ ತಲುಪಿಸುವ ಉತ್ತಮ ಕೆಲಸ ಮಾಡುತ್ತಿದೆ. ಕೆಲವು ಸಾವುಗಳು ನಡೆದಿವೆ, ಆದರೆ ಇವು ಪ್ರತ್ಯೇಕ ಘಟನೆಗಳು. ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಅತ್ಯುತ್ತಮವಾಗಿ ಪ್ರಯತ್ನಿಸಿದೆ ಎಂಬುದಕ್ಕೆ ನಮ್ಮಲ್ಲಿ ಉದಾಹರಣೆಗಳಿವೆ. ಕೆಲವು ಸಣ್ಣ ಘಟನೆಗಳು ನಡೆದಿವೆ, ಇದಕ್ಕಾಗಿ ರೈಲ್ವೆಗಳನ್ನು ಮುಚ್ಚಿ ಬಿಡಬೇಕು ಎನ್ನುವುದಲ್ಲ” ಸಂಸದರೂ ಆಗಿರುವ ಪಶ್ಚಿಮ ಬಂಗಾಳದ ಮುಖ್ಯಸ್ಥರಾಗಿರುವ ದಿಲೀಪ್ ಘೋಷ್ ಹೇಳಿದ್ದಾರೆ.

ಬಿಹಾರದ ಮುಜಾಫರ್ಪುರ್ ರೈಲ್ವೆ ನಿಲ್ದಾಣದಲ್ಲಿ ಮೃತ ತಾಯಿಯನ್ನು ಎಚ್ಚರಗೊಳಿಸಲು ಯತ್ನಿಸುತ್ತಿರುವ ಮಗುವಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆ ಹಲವಾರು ಜನರು ವ್ಯಾಪಕವಾಗಿ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ದಿಲೀಪ್ ಘೋಷ್ ಹೇಳಿಕೆಯನ್ನು ಪಶ್ಚಿಮ ಬಂಗಾಳದ ವಿಪಕ್ಷ ಸಿಪಿಐ(ಎಂ) ಹಾಗೂ ಆಡಳಿತ ಪಕ್ಷ ಟಿಸಿಎಂ ಖಂಡಿಸಿ, ವಲಸೆ ಕಾರ್ಮಿಕರ ದುಸ್ಥಿತಿಗೆ ಸೂಕ್ಷ್ಮವಾಗಿ ವರ್ತಿಸುವಂತೆ ಹೇಳಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪೊಲಿಟ್‌ಬ್ಯುರೊ ಸದಸ್ಯ ಮೊಹಮ್ಮದ್ ಸಲೀಂ ಮಾತನಾಡಿ, “ಬಿಜೆಪಿಯ ಆಡಳಿತದಲ್ಲಿ ಎಲ್ಲವೂ ಒಳ್ಳೆಯದಕ್ಕಾಗಿ ನಡೆಯುತ್ತದೆ ಎಂದು ಹೇಳುವ ಬಿಜೆಪಿಯ ಜಗತ್ತಿನಲ್ಲಿ ಉಳಿಯಲು ಘೋಷ್‌ರಂತಹ ನಾಯಕರು ಬಯಸುತ್ತಾರೆ. ವಲಸೆ ಕಾರ್ಮಿಕರ ಸಮಸ್ಯೆಯೂ ಮೋದಿ ಸರ್ಕಾರಕ್ಕೆ ಮಾನವ ಜೀವಗಳನ್ನು ಉಳಿಸಲು ಸಾಧ್ಯವಿಲ್ಲ ಎಂದು ಸಾಬೀತು ಮಾಡಿದೆ, ಬಿಜೆಪಿ ನಾಯಕರು ಹಾಗೂ ಕೇಂದ್ರ ಸರ್ಕಾರ ಬಿಕ್ಕಟ್ಟನ್ನು ತಪ್ಪಾಗಿ ನಿರ್ವಹಿಸಿದ ಬಗ್ಗೆ ನಾಚಿಕೆಪಡಬೇಕು” ಎಂದು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕ ಹಾಗೂ ಸಂಸದರೂ ಆಗಿರುವ ಸೌಗತಾ ರಾಯ್ “ಈ ಸಮಸ್ಯೆಯು ಕೇಂದ್ರವು ಕೊರೊನಾ ಬಿಕ್ಕಟ್ಟನ್ನು ಮತ್ತು ಲಾಕ್ ಡೌನ್ ಅನ್ನು ತಪ್ಪಾಗಿ ನಿರ್ವಹಿಸಿದ ಪರಿಣಾಮವಾಗಿದೆ. ಎಷ್ಟೋ ಜನರು ಸಾಯುತ್ತಿದ್ದಾರೆ ಆದರೆ ಏನೂ ಆಗಿಲ್ಲ ಎಂಬಂತೆ ಬಿಜೆಪಿ ನಾಯಕರು ಸೊಕ್ಕಿನಿಂದ ವರ್ತಿಸುತ್ತಿದ್ದಾರೆ. ನಮ್ಮತ್ತ ಬೆರಳು ತೋರಿಸುವ ಮೊದಲು ದಿಲೀಪ್ ಘೋಷ್ ಸೂಕ್ಷ್ಮವಾಗಿ ವರ್ತಿಸಬೇಕು ಹಾಗೂ ಮಾತನಾಡಬೇಕು.” ಎಂಧು ಹೇಳಿದ್ದಾರೆ.


ಓದಿ: ಶ್ರಮಿಕ್ ವಿಶೇಷ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...