Homeಮುಖಪುಟನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

- Advertisement -
- Advertisement -

ಹೊಸ ವರ್ಷದ ದಿನದಂದು ಭಾರತದಲ್ಲಿ 67,385 ಶಿಶುಗಳು ಜನಿಸಿದ್ದು, ವಿಶ್ವದಲ್ಲೇ ಇದು ಅಧಿಕ. ಆದರೆ, ಇದೇ ಹೊತ್ತಿನಲ್ಲಿ ರಾಜಸ್ತಾನದ ಕೋಟಾದ ಜೆಕೆ ಲೊನ್ ಸರ್ಕಾರಿ ಆಸ್ಪತ್ರೆಯಲ್ಲಿ ಡಿಸೆಂಬರ್ ತಿಂಗಳೊಂದರಲ್ಲೇ 100ಕ್ಕೂ ಹೆಚ್ಚು ಶಿಶುಗಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಅದಕ್ಕಿಂತ ಆಘಾತಕಾರಿಯಾದದ್ದು, ಈ ವಿಷಯ ಎತ್ತಿಕೊಂಡು ರಾಜಕೀಯ ಮಾಡುತ್ತಿರುವುದು.

ರಾಜಸ್ತಾನದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನವಜಾತ ಶಿಶುಗಳ ಸಾವಿನ ಪ್ರಮಾಣ ಇನ್ನೂ ಹೆಚ್ಚಿತ್ತು ಎಂದು ಹೇಳಿದ್ದಾರೆ. ಇಲ್ಲಿ ಆಸ್ಪತ್ರೆಗಳ ಸುಧಾರಣೆಗೆ ತುರ್ತು ಯೋಜನೆ ರೂಪಿಸುವ ಬದಲು ರಾಜಕೀಯ ಮೇಲುಗೈ ಪಡೆಯುವ ಕೀಳು ಪೈಪೋಟಿ ಶುರುವಾದಂತಿದೆ.

ಬಿಜೆಪಿ ಆಡಳಿತದ ಅವಧಿಯಲ್ಲೂ ಅಲ್ಲಿ ನವಜಾತ ಶಿಶುಗಳ ಪ್ರಮಾಣ ಜಾಸ್ತಿಯೇ ಇತ್ತು ಎಂಬುದೂ ಸತ್ಯ. ಆದರೆ ಈಗ ಪರಸ್ಪರ ದೋಷಾರೂಪಣೆ ಮಾಡುತ್ತ ಕೂಡುವ ಬದಲು ಕೇಂದ್ರದ ನೆರವಿನೊಂದಿಗೆ ನವಜಾತ ಶಿಶುಗಳ ರಕ್ಷಣೆಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಅಲ್ಲಿ ಇನ್‌ಕ್ಯುಬೇಟರ್ ಮತ್ತು ಐಸಿಯು ಘಟಕಗಳ ಕೊರತೆಯಿದೆ, ಇರುವ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವರದಿಯಾಗಿದೆ.

ಕಳೆದ ವರ್ಷ ಉತ್ತರಪ್ರದೇಶದಲ್ಲಿ ಒಂದೇ ಆಸ್ಪತ್ರೆಯಲ್ಲಿ ವಾರದೊಪ್ಪತ್ತಿನಲ್ಲಿ ಹಲವಾರು ನವಜಾತ ಶಿಶುಗಳು ಸಾವನ್ನಪ್ಪಿದ್ದವು ಎಂಬುದನ್ನು ಇಲ್ಲಿ ನೆನೆಯಬಹುದು. ದಕ್ಷಿಣದ ರಾಜ್ಯಗಳಿಗೆ ಹೋಲಿಸಿದರೆ ಉತ್ತರದ ರಾಜ್ಯಗಳಲ್ಲಿ ಅದರಲ್ಲೂ ಭಿಮಾರು ರಾಜ್ಯಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ ಎಂಬುದೂ ಇಲ್ಲಿ ಉಲ್ಲೇಖಾರ್ಹ.

ನವಜಾತ ಶಿಶುಗಳ ರಕ್ಷಣೆಗಾಗಿ ವಿಶ್ವಸಂಸ್ಥೆ ಹಲವು ಕಾರ್ಯಕ್ರಮ ರೂಪಿಸಿದೆ, ಧನ ಸಹಾಯವನ್ನೂ ನೀಡುತ್ತಿದೆ. ಆದರೆ, ವಿಶ್ವದಾದ್ಯಂತ ನಿರೀಕ್ಷಿತ ಗುರಿ ಮುಟ್ಟುವುದಕ್ಕೆ ಸ್ಥಳೀಯ ಆಡಳಿತಗಳಿಂದ ಸಾಧ್ಯವಾಗಿಲ್ಲ.
ಕಡಿಮೆ ತೂಕ, ಅವಧಿಪೂರ್ವ ಜನನ, ಸುಸೂತ್ರವಾಗದ ಹೆರಿಗೆಗಳು ಮತ್ತು ಸಿಫ್ರಸ್‌ನಂತಹ ಕಾಯಿಲೆಗಳು ನವಜಾತ ಶಿಶುಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಶುದ್ಧ ನೀರು, ಸ್ವಚ್ಛತೆ ಮತ್ತು ಪೌಷ್ಟಿಕಾಂಶಗಳ ಕೊರತೆ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳ ಅಲಭ್ಯತೆ ಅಥವಾ ಕೊರತೆಯೇ ಇದಕ್ಕೆಲ್ಲ ಮೂಲ ಕಾರಣ. ಈ ಸೌಲಭ್ಯಗಳನ್ನು ಒದಗಿಸುವತ್ತ ನಮ್ಮ ಸರ್ಕಾರಗಳು ತುರ್ತ ಗಮನ ನೀಡಬೇಕಾಗಿದೆ.

ಇಡೀ ವಿಶ್ವದಲ್ಲೇ ನವಜಾತ ಶಿಶುಗಳ ಸಾವಿನ ಪ್ರಮಾಣದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂಬುದು ನಾಚಿಕೆಯ ಮತ್ತು ಕಳವಳದ ಸಂಗತಿ.

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...