Homeಕರ್ನಾಟಕಪಿಂಚಣಿಗಾಗಿ ಮುಷ್ಕರ ನಿರತ ಇಬ್ಬರು ಶಿಕ್ಷಕರ ಸಾವು: ಸರ್ಕಾರಿ ಕೊಲೆಗಳು ಎಂದ ಸಿದ್ದರಾಮಯ್ಯ

ಪಿಂಚಣಿಗಾಗಿ ಮುಷ್ಕರ ನಿರತ ಇಬ್ಬರು ಶಿಕ್ಷಕರ ಸಾವು: ಸರ್ಕಾರಿ ಕೊಲೆಗಳು ಎಂದ ಸಿದ್ದರಾಮಯ್ಯ

- Advertisement -
- Advertisement -

ಅನುದಾನಿತ ಶಾಲಾ ಶಿಕ್ಷಕರು ಪಿಂಚಣಿಗಾಗಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರು ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾರೆ. ಇದು ಸರ್ಕಾರವೇ ನಡೆಸಿರುವ ಕೊಲೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿದಾಯ್ದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಬಸವರಾಜ ಬೊಮ್ಮಾಯಿಯವರೆ? ಎಂದು ಪ್ರಶ್ನಿಸಿದ್ದಾರೆ.

ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ. ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ಬಿಜೆಪಿ ಸರ್ಕಾರಕ್ಕೆ ಬೇಡವೇ? ಬೊಮ್ಮಾಯಿಯವರು ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು ಎಂದು ಕಿಡಿಕಾರಿದದಾರೆ.

ಅನುದಾನಿತ ಶಾಲಾ ಶಿಕ್ಷಕರು ಪ್ರತಿಭಟನೆ ಆರಂಭಿಸಿ 141 ದಿನಗಳು ಕಳೆದರೂ ಇನ್ನು ಈ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಇಷ್ಟು ದಿನ ಕೋಮಾದಲ್ಲಿತ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಿದೆ. ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ? ಎಂದಿದ್ದಾರೆ.

ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆಯೊಳಗೆ ಹೆಣದ ಸುತ್ತ ನೊಣದಂತೆ ಹೋಗಿ ಕೂರುವ ಬಿಜೆಪಿ ಸರ್ಕಾರಕ್ಕೆ, ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಗಳು ಅಮೂಲ್ಯ ಅನ್ನಿಸುವುದಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು ಬಿಜೆಪಿ ಸರ್ಕಾರ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಕೆಲಸ ಮಾಡಬೇಕು ಮತ್ತು ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ; 512ಕೆಜಿ ಈರುಳ್ಳಿಗೆ ಕೇವಲ 2ರೂ. ಲಾಭ ಪಡೆದ ರೈತ!; 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...