Homeಮುಖಪುಟಕೇರಳ: ಸರಣಿ ಸ್ಫೋಟದಲ್ಲಿ ಗಾಯಗೊಂಡ ಬಾಲಕಿ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಕೇರಳ: ಸರಣಿ ಸ್ಫೋಟದಲ್ಲಿ ಗಾಯಗೊಂಡ ಬಾಲಕಿ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

- Advertisement -
- Advertisement -

ಕೇರಳದ ಕಲಮಸ್ಸೆರಿಯ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಗಾಯಗೊಂಡ 50 ಜನರ ಪೈಕಿ 12 ವರ್ಷದ ಬಾಲಕಿ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರಿಂದಾಗಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾದಂತಾಗಿದೆ.

ಎರ್ನಾಕುಲಂ ಜಿಲ್ಲೆಯ ಮಲಯತ್ತೂರ್‌ನ ಲಿಬಿನಾ ಎಂದು ಗುರುತಿಸಲಾದ 12 ವರ್ಷದ ಬಾಲಕಿ ಇಂದು ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಆಸ್ಪತ್ರೆಯ ವೈದ್ಯಕೀಯ ಮಂಡಳಿಯು ಈ ಕುರಿತು ಹೇಳಿಕೆ ಹೊರಡಿಸಿದ್ದು, ಬಾಲಕಿಯನ್ನು ದೇಹದ ಶೇಕಡಾ 95ರಷ್ಟು ತೀವ್ರ ಸುಟ್ಟಗಾಯಗಳೊಂದಿಗೆ ಭಾನುವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ನಲ್ಲಿ ಬಾಲಕಿಯ ಆರೋಗ್ಯ ಸ್ಥಿತಿಯು ಕ್ಷೀಣಿಸುತ್ತಲೇ ಇತ್ತು. ರಾತ್ರಿ 12.40ಕ್ಕೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಕೊಚ್ಚಿಯ ಕಲಾಮಸ್ರಿಯಲ್ಲಿರುವ ಜಮ್ರಾ ಕನ್ವೆನ್ಷನ್ ಮತ್ತು ಎಕ್ಸಿಬಿಷನ್ ಸೆಂಟರ್‌ನಲ್ಲಿ ಕ್ರಿಶ್ಚಿಯನ್‌ ಧಾರ್ಮಿಕ ಪ್ರಾರ್ಥನೆ ವೇಳೆ ಸರಣಿ ಸ್ಪೋಟಗಳು ಸಂಭವಿಸಿದ್ದವು. ಸ್ಪೋಟದಲ್ಲಿ ನಿನ್ನೆ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು.

ಘಟನೆ ಕುರಿತು ಪ್ರಾಥಮಿಕ ತನಿಖೆಯಲ್ಲಿ ಸ್ಪೋಟಕ್ಕೆ ಐಇಡಿ ಸಾಧನವನ್ನು ಬಳಸಿರುವುದು ಪತ್ತೆಯಾಗಿದೆ. ಈ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲಾಗುವುದು ಎಂದು ಕೇರಳದ ಡಿಜಿಪಿ ಶೇಕ್ ದರ್ವೇಶ್ ಸಾಹೇಬ್ ಹೇಳಿದ್ದರು.

ಟಿಫಿನ್ ಬಾಕ್ಸ್‌ನಲ್ಲಿ ಇರಿಸಲಾಗಿದ್ದ ಐಇಡಿ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಬ್ಲಾಸ್ಟ್‌ ನಡೆಯುವ ಸ್ವಲ್ಪ ಮೊದಲು ಕನ್ವೆನ್ಷನ್ ಸೆಂಟರ್‌ನಿಂದ ವೇಗವಾಗಿ ಕಾರು ತೆರಳುತ್ತಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿತ್ತು. ಸ್ಪೋಟಕ ಇಟ್ಟ ವ್ಯಕ್ತಿ ಕಾರಿನಲ್ಲಿ ತೆರಳಿರುವ ಶಂಕೆ ವ್ಯಕ್ತವಾಗಿತ್ತು.

ಇದಾದ ಕೆಲವೇ ಗಂಟೆಗಳಲ್ಲಿ 48 ವರ್ಷದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಾಗಿದ್ದಾನೆ. ನಾನೇ ಸ್ಪೋಟವನ್ನು ನಡೆಸಿರುವುದು ಎಂದು ವಿಡಿಯೋ ಹೇಳಿಕೆಯನ್ನು ಕೂಡ ರಿಲೀಸ್ ಮಾಡಿದ್ದ. ಯಹೋವನ ಸಾಕ್ಷಿಗಳ ನಿಲುವಿನ ವಿರುದ್ಧ ಆಕ್ಷೇಪವನ್ನು ವ್ಯಕ್ತಪಡಿಸಿ ಬಹಳ ಯೋಚಿಸಿ ಬಾಂಬ್ ಇಡುವ ತೀರ್ಮಾನ ಮಾಡಿದೆ ಎಂದು ವಿಡಿಯೋದಲ್ಲಿ ಹೇಳಿದ್ದ. ಈ ಬಗ್ಗೆ ಪೊಲೀಸರು  ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನು ಓದಿ: ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...