Homeಕರ್ನಾಟಕಕರ್ನಾಟಕ ಹೈಕೋರ್ಟ್‌ನ 6 ನ್ಯಾಯಾಧೀಶರಿಗೆ ಕೊಲೆ ಬೆದರಿಕೆ

ಕರ್ನಾಟಕ ಹೈಕೋರ್ಟ್‌ನ 6 ನ್ಯಾಯಾಧೀಶರಿಗೆ ಕೊಲೆ ಬೆದರಿಕೆ

- Advertisement -
- Advertisement -

ಕರ್ನಾಟಕ ಹೈಕೋರ್ಟ್‌ನ ಆರು ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆಯೊಡ್ಡಿ, 50 ಲಕ್ಷ ರೂಗಳಿಗೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ.

ಹೈಕೋರ್ಟ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಒ) ಕೆ ಮುರಳೀಧರ್‌ ಅವರ ಅಧಿಕೃತ ವಾಟ್ಸ್‌ಆಪ್‌ ಸಂಖ್ಯೆಗೆ ಸಂದೇಶ ಕಳಿಸುವ ಮೂಲಕ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅವರು ನೀಡಿದ ದೂರು ಆಧರಿಸಿ ಕೇಂದ್ರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಾಕಿಸ್ತಾನದ ಅಲೈಡ್‌ ಬ್ಯಾಂಕ್‌ ಲಿಮಿಟೆಡ್‌ನಲ್ಲಿರುವ ಬ್ಯಾಂಕ್‌ ಖಾತೆಗೆ 50 ಲಕ್ಷ ರೂ. ಅನ್ನು ಜಮೆ ಮಾಡುವಂತೆ ವಾಟ್ಸ್‌ಆಪ್‌ಗೆ ಸಂದೇಶದಲ್ಲಿ ಬೇಡಿಕೆ ಇಟ್ಟಿದ್ದಾನೆ. ಜುಲೈ 12 ರಂದು ಹೈಕೋರ್ಟ್ ಪಿಆರ್‌ಒಗೆ ಕೊಲೆ ಬೆದರಿಕೆ ಸಂದೇಶ ಬಂದಿದ್ದು, ಜುಲೈ 14 ರಂದು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುಬೈ ಗ್ಯಾಂಗ್ ಮೂಲಕ ತಮ್ಮನ್ನು ಸೇರಿ ಆರು ಹೈಕೋರ್ಟ್‌ ನ್ಯಾಯಾಧೀಶರನ್ನು ಕೊಲ್ಲುವುದಾಗಿ ವಾಟ್ಸ್‌ಆಪ್‌ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಮುರಳೀಧರ್‌ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಮೊಹಮ್ಮದ್‌ ನವಾಜ್‌, ಎಚ್‌ಟಿ ನರೇಂದ್ರ ಪ್ರಸಾದ್‌, ಅಶೋಕ್‌ ಜಿ ನಿಜಗಣ್ಣವರ್‌, ಎಚ್‌ಪಿ ಸಂದೇಶ್‌, ಕೆ ನಟರಾಜನ್‌ ಹಾಗೂ ಬಿ ವೀರಪ್ಪ ಅವರ ಹೆಸರನ್ನು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

50 ಲಕ್ಷ ರೂ. ಅನ್ನು ಪಾಕಿಸ್ತಾನದ ಬ್ಯಾಂಕ್‌ ಅಕೌಂಟ್‌ಗೆ ಹಾಕಿ ಎಂದು ಹೇಳಿರುವುದನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ; ಚಂದ್ರಯಾನ-3 ಉಡಾವಣೆ ಮತ್ತು ಬಾಹ್ಯಾಕಾಶಯಾನ ಇತಿಹಾಸದ ಪಕ್ಷಿನೋಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...