Homeಕರ್ನಾಟಕಹಿಜಾಬ್‌ ತೀರ್ಪು ನೀಡಿದ ನ್ಯಾಯಮೂರ್ತಿಗೆ ಕೊಲೆ ಬೆದರಿಕೆ ಆರೋಪ; ಪ್ರಕರಣ ದಾಖಲು

ಹಿಜಾಬ್‌ ತೀರ್ಪು ನೀಡಿದ ನ್ಯಾಯಮೂರ್ತಿಗೆ ಕೊಲೆ ಬೆದರಿಕೆ ಆರೋಪ; ಪ್ರಕರಣ ದಾಖಲು

ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಲ್ಲಿಯೂ ದೂರು ನೀಡಲಾಗಿದೆ. ಬೆಂಗಳೂರಿನ ಕಬ್ಬನ್‌ ಪಾರ್ಕ್, ತಮಿಳುನಾಡಿನ ಮಧುರೈ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದಿರುವ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ಇತರರಿಗೆ ವ್ಯಕ್ತಿಯೊಬ್ಬರು ಕೊಲೆ ಬೆದರಿಕೆ ಹಾಕಿದ್ದಾರೆಂಬ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌‌ ಆಗಿದ್ದು ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವಿಡಿಯೊ ಸಂಬಂಧ ವಕೀಲ ಉಮಾಪತಿ ಎಸ್ ಅವರು ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಶನಿವಾರ ದೂರು ಸಲ್ಲಿಸಿದ್ದಾರೆ.

ತನಗೆ ವಾಟ್ಸಾಪ್‌ನಲ್ಲಿ ವೀಡಿಯೋ ಬಂದಿದ್ದು, ಜಾರ್ಖಂಡ್ ನ್ಯಾಯಾಧೀಶರೊಬ್ಬರನ್ನು ಹತ್ಯೆಗೈದಿದ್ದನ್ನು ಭಾಷಣಕಾರ ಉಲ್ಲೇಖಿಸಿದ್ದಾರೆ. ಜಾರ್ಖಂಡ್‌ನ ಧನ್‌ಬಾದ್ ನ್ಯಾಯಾಧೀಶ ಉತ್ತಮ್ ಆನಂದ್ ಅವರು ಕೊಲೆಯಾಗಿದ್ದರು. ಕಳೆದ ವರ್ಷ ವಾಹನವನ್ನು ಹರಿಸಿ ಅವರನ್ನು ಕೊಲ್ಲಲಾಗಿತ್ತು ಎಂದು ದೂರುದಾರರು ತಿಳಿಸಿದ್ದಾರೆ.

“ಕರ್ನಾಟಕದ ಮುಖ್ಯ ನ್ಯಾಯಾಧೀಶರು ಎಲ್ಲಿಗೆ ವಾಕಿಂಗ್ ಹೋಗುತ್ತಾರೆ ಎಂಬುದು ಜನರಿಗೆ ತಿಳಿದಿದೆ ಎಂದು ಹೇಳುವ ಮೂಲಕ ಭಾಷಣಕಾರರು ಕೊಲೆ ಬೆದರಿಕೆ ಹಾಕಿದ್ದಾರೆ. ನ್ಯಾಯಮೂರ್ತಿಯು ಕುಟುಂಬ ಸದಸ್ಯರೊಂದಿಗೆ ಉಡುಪಿ ಮಠಕ್ಕೆ ಭೇಟಿ ನೀಡುವುದರ ಬಗ್ಗೆ ಉಲ್ಲೇಖವನ್ನು ಮಾಡಿದ್ದಾರೆ. ಅಲ್ಲದೆ ನ್ಯಾಯಾಲಯದ ತೀರ್ಪಿನ ಬಗ್ಗೆ ತುಂಬಾ ಅಸಭ್ಯ ಭಾಷೆಯಲ್ಲಿ ಮಾತನಾಡಿದ್ದಾರೆ” ಎಂದು ದೂರಲಾಗಿದೆ. ಬಹುಶಃ ತಮಿಳುನಾಡಿನ ಮಧುರೈನಲ್ಲಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ಮತ್ತೋರ್ವ ವಕೀಲೆ ಸುಧಾ ಕಟ್ವಾ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 506 (1), 505 (2), 505 (1) (ಸಿ), 505 (1) (ಬಿ), 153 ಎ, 109, 504 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಮತ್ತು ಖಾಝಿ ಎಂ ಜೈಬುನ್ನಿಸಾ ಅವರನ್ನೊಳಗೊಂಡ ಹೈಕೋರ್ಟ್‌ನ ತ್ರಿಸದಸ್ಯ ಪೀಠವು ತರಗತಿಯಲ್ಲಿ ಹಿಜಾಬ್ ಧರಿಸದಿರುವುದನ್ನು ಎತ್ತಿ ಹಿಡಿದಿತ್ತು.

ತಮಿಳುನಾಡಿನಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ತಮಿಳುನಾಡಿನಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡು ತೌಹೀದ್ ಜಮಾತ್‌ನ (ಟಿಎನ್‌ಟಿಜೆ) ಮೂವರು ಕಾರ್ಯಕರ್ತರು ನ್ಯಾಯಮೂರ್ತಿಯವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ.

ಶುಕ್ರವಾರ, ತೀರ್ಪಿನ ವಿರುದ್ಧ ಪ್ರತಿಭಟಿಸಲು ಕೋರಿಪಾಳ್ಯಂ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನು ತೌಹೀದ್ ಜಮಾತ್ ಆಯೋಜಿಸಿದ್ದು, ಈ ಸಂದರ್ಭದಲ್ಲಿ ಸಂಘಟಕರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ಸಂಘಟಕರು ಜೀವ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ.

ಮೂವರು ಟಿಎನ್‌ಟಿಜೆ ಪದಾಧಿಕಾರಿಗಳ ವಿರುದ್ಧ ಸೆಕ್ಷನ್ 153 (ಎ) (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 505 (1) (ಸಿ) (ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶ), 505 (2), 506 (1) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಮಧುರೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠವು ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದನ್ನು ಖುರಾನ್ ಕಡ್ಡಾಯಗೊಳಿಸುವುದಿಲ್ಲ ಎಂದು ಹೇಳಿದೆ.


ಇದನ್ನೂ ಓದಿರಿ: ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...