HomeUncategorizedಕೇರಳ: ಸಿಎಂ ಪಿಣರಾಯ್‌ ವಿಜಯನ್‌ಗೆ ಬೆದರಿಕೆ ಕರೆ

ಕೇರಳ: ಸಿಎಂ ಪಿಣರಾಯ್‌ ವಿಜಯನ್‌ಗೆ ಬೆದರಿಕೆ ಕರೆ

- Advertisement -
- Advertisement -

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ರಾಜ್ಯ ಪೊಲೀಸ್‌ ಪ್ರಧಾನ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬುಧವಾರ ಸಂಜೆ ಪೊಲೀಸ್ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಗೆ ದೂರವಾಣಿ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ. ವರದಿಯ ಪ್ರಕಾರ ಸಿಎಂಗೆ ಅಪ್ರಾಪ್ತ ಬಾಲಕನೋರ್ವ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 118 (ಬಿ) ಮತ್ತು 120 (ಒ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಬಾಲಕನ ಮನೆಗೆ ಭೇಟಿ ನೀಡಿ ಪಾಲಕರನ್ನು ವಿಚಾರಿಸಿದ್ದಾರೆ. ತಮ್ಮ ಮಗನಿಗೆ ಏನೂ ತಿಳಿದಿಲ್ಲ. ಮೊಬೈಲ್‌ ಫೋನ್‌ ಬಳಸುತ್ತಿದ್ದಾಗ ಆಕಸ್ಮಿಕವಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಹೋಗಿದೆ ಎಂದಿದ್ದಾರೆ.

ಈ ಬಗ್ಗೆ ಪಾಲಕರ ಹೇಳಿಕೆ ತೃಪ್ತಿದಾಯಕವಾಗಿಲ್ಲ, ಹೀಗಾಗಿ ತನಿಖೆಯನ್ನು ಎಲ್ಲಾ ಆಯಾಮಗಳಿಂದ  ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಸಂಜೆಯ ವೇಳೆ ಬೆದರಿಕೆ ಕರೆ ಬಂದಿದ್ದು, ಕೇರಳ ಸಿಎಂಗೆ ಕೊಲೆ ಬೆದರಿಕೆ ಹಾಕಿದ ಬಾಲಕ ಕೊಚ್ಚಿಯಲ್ಲಿ 7ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಬಾಲಕನಿಗೆ ಕೌನ್ಸಿಲಿಂಗ್‌ ನಡೆಸಲಾಗುತ್ತಿದೆ. ಬಾಲಕ ಬೆದರಿಕೆ ಕರೆ ಮಾಡಲು ಪ್ರೇರಣೆ ಏನು ಎಂಬ ಬಗ್ಗೆ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನು ಓದಿ: ಅಬಕಾರಿ ನೀತಿ ಪ್ರಕರಣ: ಸಮನ್ಸ್ ಹಿಂಪಡೆಯುವಂತೆ EDಗೆ ಕೇಜ್ರಿವಾಲ್ ಪತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

0
ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರಾಮಕೃಷ್ಣ ಅಲಿಯಾಸ್...