Homeಮುಖಪುಟಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ: ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿ

ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ: ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿ

- Advertisement -
- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದವರ ಕೊಲೆಗೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಸಂಚು ನಡೆಸಿದ್ದಾರೆ ಎನ್ನಲಾದ ಆಡಿಯೋ ಕುರಿತಂತೆ ಪ್ರಕರಣ ದಾಖಲಿಸುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಣಿಕಂಠ ರಾಠೋಡ್ ಮಾತಾಡಿದ ಫೋನ್‌ ಧ್ವನಿ ಮುದ್ರಿಕೆ ವಿಚಾರದಲ್ಲಿ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ. ಧ್ವನಿ ಮುದ್ರಿಕೆ ವಿಚಾರದಲ್ಲಿ ಅನುಮಾನವಿದೆ. ಅದನ್ನು ತಿರುಚಲಾಗಿದೆಯೋ ಏನು ಎಂಬುವುದನ್ನು ನೋಡಬೇಕು. ಆ ಬಳಿಕ ಇದರ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

“ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲು ಕಾಣುತ್ತಿದೆ ಮತ್ತು ನಿಧಾನವಾಗಿ ಅದರ ಮುಖವಾಡ ಕಳಚಿ ಬೀಳುತ್ತಿದೆ. ಕರ್ನಾಟಕದ ಪುತ್ರ, ಎಐಸಿಸಿ ಅಧ್ಯಕ್ಷ ಖರ್ಗೆ ಕುಟುಂಬವನ್ನು ಅಳಿಸಿ ಹಾಕಲು ಬಿಜೆಪಿ ನಾಯಕರೊಬ್ಬರು ಸಂಚು ರೂಪಿಸಿ ಸಿಕ್ಕಿಬಿದ್ದಿರುವುದು ಆಡಿಯೋ ರೆಕಾರ್ಡಿಂಗ್‌ನಲ್ಲಿದೆ. ಇದು ತೀವ್ರ ಕಳವಳಕಾರಿ ಮತ್ತು ಸಮಸ್ಯಾತ್ಮಕವಾಗಿದೆ. ಈ ಭಯಾನಕ ಬೆದರಿಕೆಯ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಅಥವಾ ಚುನಾವಣಾ ಆಯೋಗ ಧೈರ್ಯ ಮಾಡುತ್ತದೆಯೇ?” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಖರ್ಗೆಯವರ ಕೊಲೆ ಬೆದರಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷ ಕಿಡಿಕಾರಿದೆ. “ದಲಿತ ಸಮುದಾಯದ ಉನ್ನತ ನಾಯಕ, ದೇಶದ ಹಿರಿಯ ಹಾಗೂ ಮುತ್ಸದ್ದಿ ನಾಯಕ ಎಐಸಿಸಿ ಅಧ್ಯಕ್ಷರಾದ ಖರ್ಗೆ ಅವರ ಇಡೀ ಕುಟುಂಬವನ್ನು ಹತ್ಯೆ ಮಾಡುವ ಬಿಜೆಪಿಯ ಸಂಚು ಮಣಿಕಂಠ ರಾಥೋಡನ ಬಾಯಲ್ಲಿ ಹೊರಬಂದಿದೆ. ಖರ್ಗೆ ಕುಟುಂಬದ ಹತ್ಯೆಗೆ ನೀಡಿದ ಸುಪಾರಿಗಾಗಿಯೇ ರೌಡಿ ಶೀಟರ್‌ಗೆ ಟಿಕೆಟ್ ನೀಲಾಗಿದೆಯೇ ನರೇಂದ್ರ ಮೋದಿಯವರೆ? ಖರ್ಗೆ ಪ್ರಶ್ನಿಸುತ್ತಾರೆ ಎಂಬ ಒಂದೇ ಕಾರಣಕ್ಕೆ ಈ ಪರಿ ದ್ವೇಷವೇ ಮೋದಿಯವರೇ?” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ವೈರಲ್ ಆಡಿಯೋದಲ್ಲಿ ರವಿ ಎಂಬ ಬಿಜೆಪಿ ಕಾರ್ಯಕರ್ತನೊಬ್ಬ ಮಣಿಕಂಠ ರಾಥೋಡ್‌ರವರಿಗೆ ಫೋನ್ ಮಾಡಿ ನಿಮ್ಮ ಮೇಲೆ 40  ಕೇಸುಗಳಿವೆ ಅನ್ನುತ್ತಾರೆ. ಈ ಕುರಿತು ಖರ್ಗೆಯವರನ್ನು ಪ್ರಶ್ನೆ ಮಾಡ್ತೀನಿ ಅವರ ನಂಬರ್ ಕೊಡಿ ಅಣ್ಣ ಎಂದು ಕೇಳುತ್ತಾನೆ. ಇದಕ್ಕೆ ಉತ್ತರಿಸುವ ಮಣಿಕಂಠ ರಾಥೋಡ್‌, “ನನ್ನ ಬಳಿ ಅವರ ಫೋನ್ ನಂಬರ್ ಇದ್ರೆ ಅವರ ಹೆಂಡ್ರು ಮಕ್ಕಳು ಎಲ್ಲರನ್ನು ಸಾಫ್ ಮಾಡ್ತೀನಿ. ಅದಕ್ಕೆ ನನ್ನ ಬಳಿ ನಂಬರ್ ಇಲ್ಲ” ಎನ್ನುವುದು ದಾಖಲಾಗಿದೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...