Homeಕರ್ನಾಟಕಬರಹಗಾರರಿಗೆ ಕೊಲೆ ಬೆದರಿಕೆ: ತನಿಖೆಗೆ ಎಸ್‌ಪಿ ಶ್ರೇಣಿಯ ಅಧಿಕಾರಿ ನೇಮಕ

ಬರಹಗಾರರಿಗೆ ಕೊಲೆ ಬೆದರಿಕೆ: ತನಿಖೆಗೆ ಎಸ್‌ಪಿ ಶ್ರೇಣಿಯ ಅಧಿಕಾರಿ ನೇಮಕ

- Advertisement -
- Advertisement -

ಏಪ್ರಿಲ್‌‌ ತಿಂಗಳಿನಿಂದಲೂ ಏಳು ಬರಹಗಾರರು ಸ್ವೀಕರಿಸಿರುವ ಕನಿಷ್ಠ 19 ಕೊಲೆ ಬೆದರಿಕೆ ಪತ್ರಗಳ ತನಿಖೆಗೆ ಪೊಲೀಸ್ ಅಧೀಕ್ಷಕ (ಎಸ್‌ಪಿ) ಶ್ರೇಣಿಯ ಅಧಿಕಾರಿಯನ್ನು ಕರ್ನಾಟಕ ಪೊಲೀಸ್‌ ಇಲಾಖೆ ನೇಮಿಸಿದೆ.

ಕೊಲೆ ಬೆದರಿಕೆಗಳು ಬಂದರೂ ಎಫ್‌ಐಆರ್‌ಗಳು ದಾಖಲಾಗಿಲ್ಲ, ಪೋಲೀಸರ ನಿಷ್ಕ್ರಿಯರಾಗಿದ್ದಾರೆ ಎಂದು ಲೇಖಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.

“ಒಬ್ಬನೇ ವ್ಯಕ್ತಿ ಎಲ್ಲಾ ಬರಹಗಾರರಿಗೆ ಈ ಬೆದರಿಕೆ ಪತ್ರಗಳನ್ನು ಬರೆಯುತ್ತಿರುವುದು ಸ್ಪಷ್ಟವಾಗಿದೆ. ಕೆಲವು ಲೋಪಗಳಾಗಿವೆ, ಆದರೂ ತನಿಖೆಗಳು ಈಗಾಗಲೇ ನಡೆಯುತ್ತಿವೆ. ಈಗ ತನಿಖೆಯನ್ನು ಹೆಚ್ಚು ಸಂಘಟಿತ ರೀತಿಯಲ್ಲಿ ಮಾಡಲಾಗುತ್ತದೆ ” ಎಂದು ಹೆಸರು ಹೇಳಲಿಚ್ಛಿಸದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ‘ದಿ ಹಿಂದೂ’ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸಹಿಷ್ಣು ಹಿಂದೂ’ಎಂದು ಸಹಿ ಹಾಕಿರುವ ವ್ಯಕ್ತಿಯು ಏಳು ಬರಹಗಾರರಿಗೆ 19 ಕೊಲೆ ಬೆದರಿಕೆ ಪತ್ರಗಳನ್ನು ಬರೆದಿದ್ದಾನೆ. ಈ ಬರಹಗಾರರ ನಿಲುವುಗಳನ್ನು “ಹಿಂದೂ ವಿರೋಧಿ” ಎಂದು ಕರೆದಿದ್ದಾನೆ. ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ ಆರು ಪತ್ರ, ಚಿಂತಕ ಬಂಜಗೆರೆ ಜಯಪ್ರಕಾಶ್ ಅವರಿಗೆ ಐದು ಪತ್ರ ಬಂದಿವೆ.  ಹಿಜಾಬ್ ವಿವಾದದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದ 61 ಬರಹಗಾರರನ್ನು ಪಟ್ಟಿ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಮತ್ತು ಬಿ.ಕೆ. ಹರಿಪ್ರಸಾದ್ ಅವರನ್ನೂ ಟಾರ್ಗೆಟ್ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿಫಲರಾಗಿದ್ದಾರೆ. ರಾಜ್ಯ ಪೊಲೀಸರು ಎಫ್‌ಐಆರ್‌ಗಳನ್ನು ದಾಖಲಿಸುವಲ್ಲಿ ಎಡವಿದ್ದಾರೆ ಎಂದು ಆರೋಪಗಳು ಬಂದಿದ್ದವು. ಲೇಖಕಿ ವಸುಂಧರಾ ಭೂಪತಿ ಅವರು ಬುಧವಾರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡು ಬಸವೇಶ್ವರನಗರದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜುಲೈ 2ರಂದು ತಮ್ಮ ನಿವಾಸಕ್ಕೆ ಕೊಲೆ ಬೆದರಿಕೆ ಪತ್ರ ಬಂದಿದ್ದ ಕುರಿತು ಎಂ.ಎಸ್.ಭೂಪತಿ ಅವರು ಬಸವೇಶ್ವರನಗರ ಪೊಲೀಸರಿಗೆ ದೂರು ನೀಡಿದ್ದರು, ಆದರೆ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದರು.

“ಬುಧವಾರ ಬೆಳಿಗ್ಗೆ, ನನ್ನ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ನನ್ನ ಫೋನ್‌ಗೆ ಸಂದೇಶ ಬಂದಿತು. ಸ್ವಲ್ಪ ಸಮಯದ ನಂತರ, ಇಬ್ಬರು ಪೊಲೀಸರು ನನ್ನ ಮನೆಗೆ ಬಂದು ನನ್ನ ನಿವಾಸದಲ್ಲಿ ಪೊಲೀಸ್ ಬೀಟ್ ಪಾಯಿಂಟ್ ಹಾಕಿದರು. ಭದ್ರತೆಯ ಭರವಸೆ ನೀಡಿದರು” ಎಂದು ಅವರು ತಿಳಿಸಿದ್ದಾರೆ.

‘ಪ್ರಕರಣ ದಾಖಲಿಸಲಾಗಿದೆ’

ಅನಾಮಧೇಯ ಪತ್ರ ಬರೆದಿರುವ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507 (ಅನಾಮಧೇಯ ಸಂವಹನದ ಮೂಲಕ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಾಜಿ ಸಚಿವರಾದ ಬಿ.ಟಿ.ಲಲಿತಾ ನಾಯಕ್‌ ಅವರ ದೂರು ಆಧರಿಸಿ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎರಡು ಎಫ್‌ಐಆರ್ ದಾಖಲಾಗಿದೆ. ಆದಾಗ್ಯೂ, ರಾಜ್ಯದ ಇತರ ಬರಹಗಾರರಿಗೆ ಇದೇ ರೀತಿಯ ಬೆದರಿಕೆ ಪತ್ರಗಳು ಬಂದಿರುವ ಕುರಿತು ಯಾವುದೇ ಎಫ್‌ಐಆರ್‌ಗಳು ದಾಖಲಾಗಿಲ್ಲ.

ಇದನ್ನೂ ಓದಿರಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

“ಒಬ್ಬನೇ ವ್ಯಕ್ತಿ ಎಲ್ಲಾ ಪತ್ರಗಳನ್ನು ಬರೆಯುತ್ತಿರುವುದು ಸ್ಪಷ್ಟವಾಗಿದೆ. ತನಿಖೆಯನ್ನು ಚುರುಕುಗೊಳಿಸಲಾಗಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸುವ ವಿಶ್ವಾಸವಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಸಿದ್ದರಾಮಯ್ಯ ಆಕ್ರೋಶ

ಕೊಲೆ ಬೆದರಿಕೆ ಬಂದಿರುವ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. “ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ. ಇವರುಗಳೆಲ್ಲ ಪ್ರಜಾತಾಂತ್ರಿಕ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ” ಎಂದು ತಿಳಿಸಿದ್ದರು.

“ನನಗೂ ಹಲವು ಬೆದರಿಕೆ ಪತ್ರಗಳು ಬಂದಿವೆ. ಸ್ವತಃ ಡಿಜಿಯವರಿಗೆ ನಾನು ಈ ಕುರಿತು ಮಾತನಾಡಿದ್ದೆ. ಇತ್ತೀಚೆಗೆ ಟಿವಿಯೊಂದರಲ್ಲಿ ವೀರೇಶ್ ಎಂಬಾತ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ನನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದ. ಈ ಬೆದರಿಕೆಯ ಹೇಳಿಕೆ ಹಾಗೂ ಪತ್ರಗಳ ಕುರಿತು ದೂರು ದಾಖಲಿಸಲಾಗಿದೆ. ಆದರೂ ಇದುವರೆಗೆ ಸರ್ಕಾರ ಎಫ್‍ಐಆರ್ ದಾಖಲಿಸಿಲ್ಲ. ಇದೇ ವಿಷಯಕ್ಕೆ ಹಲವು ಬಾರಿ ದೂರು ದಾಖಲಿಸಿದರೂ ಎಫ್‍ಐಆರ್ ಮಾಡಿ ತನಿಖೆ ನಡೆಸದಿರುವುದು ಸರ್ಕಾರದ ಬೇಜವಾಬ್ಧಾರಿಯುತವಾದ ನಡವಳಿಕೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಗರ ನಕ್ಸಲರಿಗೆಲ್ಲಾ ಸಾರ್ವಜನಿಕರ ಹಣದಲ್ಲಿ ಭದ್ರತೆ ಯಾಕೆ,ಭದ್ರತೆಯ ವೆಚ್ಚವನ್ನ ಈ ದ್ರೋಹಿಗಳ ಮೂಲಕವೇ ವಸೂಲಿ ಮಾಡಬೇಕಿದೆ

LEAVE A REPLY

Please enter your comment!
Please enter your name here

- Advertisment -

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....