Homeಕರೋನಾ ತಲ್ಲಣದೇಶದಲ್ಲಿ ಕೊರೊನಾದಿಂದ ಸುಮಾರು 4.9 ದಶಲಕ್ಷದಷ್ಟು ಸಾವುಗಳು: ವರದಿ

ದೇಶದಲ್ಲಿ ಕೊರೊನಾದಿಂದ ಸುಮಾರು 4.9 ದಶಲಕ್ಷದಷ್ಟು ಸಾವುಗಳು: ವರದಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ದೇಶದಲ್ಲಿ 4.9 ದಶಲಕ್ಷದಷ್ಟು ಸಾವುಗಳು ಸಂಭವಿಸಿರಬಹುದು ಎಂದು ಹೊಸ ಅಧ್ಯಯನವೊಂದು ವರದಿ ಮಾಡಿದೆ. ಈ ವರದಿಯು ಸರ್ಕಾರದ ಅಧಿಕೃತ ಅಂಕಿ-ಅಂಶಗಳ ಪ್ರಮಾಣಕ್ಕಿಂತಲೂ ಲಕ್ಷಾಂತರ ಜನರು ವೈರಸ್‌ನಿಂದ ಸಾವನ್ನಪ್ಪಿರಬಹುದು ಎಂಬ ಊಹೆಗಳಿಗೆ ಹೆಚ್ಚಿನ ಪುರಾವೆಗಳನ್ನು ಒದಗಿಸಿದೆ.

ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಅವರು ಸಹ-ಲೇಖಕರಾಗಿರುವ, ವಾಷಿಂಗ್ಟನ್ ಮೂಲದ ಸೆಂಟರ್ ಫಾರ್ ಗ್ಲೋಬಲ್ ಡೆವಲಪ್‌ಮೆಂಟ್‌ನ ವರದಿಯಲ್ಲಿ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಈ ವರ್ಷದ ಜೂನ್ ವರೆಗೆ ದಾಖಲಾಗಿರುವ ಎಲ್ಲಾ ರೀತಿಯ ಸಾವುಗಳ ಪ್ರಮಾಣ ದಾಖಲು ಮಾಡಲಾಗಿದೆ.

ಸರ್ಕಾರದ ಅಧಿಕೃತ ಅಂಕಿ-ಅಂಶದ ಪ್ರಕಾರ 4,14,000 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಇದರ ಪ್ರಕಾರ ಯುನೈಟೆಡ್ ಸ್ಟೇಟ್ಸ್ ಮತ್ತು ಬ್ರೆಜಿಲ್ ನಂತರ ವಿಶ್ವದಲ್ಲಿ ಅತಿ ಹೆಚ್ಚು ಸಾವುಗಳನ್ನು ದಾಖಲಿಸಿದ ಮೂರನೇ  ದೇಶ ಭಾರತವಾಗಿದೆ. ಆದರೆ ಈ ಅಧ್ಯಯನವು ದೇಶಾದ್ಯಂತದ ಮಾರಣಾಂತಿಕ ಕಾಯಿಲೆಗೆ ಸಾವನ್ನಪ್ಪಿದವರ ಬಗ್ಗೆ ತಜ್ಞರಿಂದ ಹೆಚ್ಚು ಮಾಹಿತಿಯನ್ನು ಕಲೆ ಹಾಕಿದೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೊರೊನಾ ಸೋಂಕಿನ ಏರಿಕೆ ಹೆಚ್ಚಾಗಿ, ಸಾಂಕ್ರಾಮಿಕ ರೋಗ ಮತ್ತು ಅಪಾಯಕಾರಿ ಡೆಲ್ಟಾ ಪ್ಲಸ್ ರೂಪಾಂತರಿಯಿಂದ ಮೇ ತಿಂಗಳಲ್ಲಿ ಕನಿಷ್ಠ 1,70,000 ಜನರು ಬಲಿಯಾಗಿದ್ದಾರೆ ಎಂದು ಅಧಿಕೃತ ದತ್ತಾಂಶಗಳು ದೃಢಪಡಿಸಿವೆ.

ಇದನ್ನೂ ಓದಿ: ಟೋಕಿಯೋ ಒಲಂಪಿಕ್ಸ್: ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

“ದುಃಖಕರ ಸಂಗತಿಯೆಂದರೆ, ಸಾವಿರಕ್ಕಿಂತಲೂ ಲಕ್ಷಗಳಲ್ಲಿ ಹಲವಾರು ಜನರು ಸಾವನ್ನಪ್ಪಿರಬಹುದು” ಎಂದು ವರದಿ ಹೇಳಿದೆ. ಸಾಂಕ್ರಾಮಿಕ ಸಮಯದಲ್ಲಿ 3.4 ಮಿಲಿಯನ್ ಮತ್ತು 4.9 ಮಿಲಿಯನ್ ಹೆಚ್ಚುವರಿ ಸಾವುಗಳು ಸಂಭವಿಸಿವೆ ಎಂದು ಅಂದಾಜಿಸಲಾಗಿದೆ. ಆದರೆ, ಎಲ್ಲಾ ಹೆಚ್ಚುವರಿ ಸಾವುಗಳಿಗೂ ಕೊರೊನಾ ರೋಗವೇ ಕಾರಣ ಎಂದು ವರದಿಯಲ್ಲಿ ಹೇಳಲಾಗಿಲ್ಲ.

ಕೊರೊನಾದಿಂದ ಸಾವನ್ನಪ್ಪಿದವರ ನಿಜವಾದ ಸಂಖ್ಯೆಯನ್ನು ಅಳೆಯಲು ಈ ಸಮಯದಲ್ಲಿ ಉಂಟಾಗಿರುವ ಹೆಚ್ಚುವರಿ ಸಾವುಗಳು ಉತ್ತಮ ಮಾರ್ಗವೆಂದು ಹಲವು ತಜ್ಞರು ಹೇಳಿದ್ದಾರೆ.

ಭಾರತದಲ್ಲಿ ಕೊರೊನಾ ಪರಿಸ್ಥಿತಿಯು ಅತೀ ಕೆಟ್ಟದಾಗಿದೆ ಮತ್ತು ಸಾವುಗಳು ಅಂದಾಜು 6,00,000 ಎಂದು ನ್ಯೂಯಾರ್ಕ್ ಟೈಮ್ಸ್ ಹೇಳಿದೆ. ಆದರೆ, ನ್ಯೂಯಾರ್ಕ್ ಟೈಮ್ಸ್ ಅಂಕಿಅಂಶಗಳನ್ನು ಒಕ್ಕೂಟ ಸರ್ಕಾರ ತಳ್ಳಿಹಾಕಿದೆ.

ಭಾರತದ ಜನಸಂಖ್ಯೆಯ ಮೂರನೇ ಎರಡರಷ್ಟು ಜನಸಂಖ್ಯೆಯು ಸುಮಾರು 1.4 ಶತಕೋಟಿ ಜನರು ಕೊರೊನಾ ಪರೀಕ್ಷೆಗೆ ಒಳಗಾಗದೆ ಮನೆಯಲ್ಲಿ ಅನೇಕ ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ತಜ್ಞರು ದೂಷಿಸಿದ್ದಾರೆ.

ಇತ್ತ, ಈ ವರ್ಷದ ಏಪ್ರಿಲ್ ಆರಂಭದಲ್ಲಿ ಅಪ್ಪಳಿಸಿದ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಸಿಗದೇ ಜನರು ಒದ್ದಾಡುತ್ತಿರುವ, ಪ್ರಾಣ ಬಿಟ್ಟ ಸಾವಿರಾರು ಪ್ರಕರಣಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದವು. ಆದರೆ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ವಾದಿಸಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...