Homeಮುಖಪುಟಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ: ಸದನಸಲ್ಲಿಂದು ಮತ್ತೆ ಗದ್ದಲ ಸಾಧ್ಯತೆ

ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ: ಸದನಸಲ್ಲಿಂದು ಮತ್ತೆ ಗದ್ದಲ ಸಾಧ್ಯತೆ

- Advertisement -
- Advertisement -

ಮೋದಿ ಸರ್ಕಾರದ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯ, ದೆಹಲಿ ಸೇವೆಗಳ ನಿಯಂತ್ರಣ ಮಸೂದೆ, ಮಣಿಪುರ ಹಿಂಸಾಚಾರ ಕುರಿತ ಚರ್ಚೆಗೆ ಸಂಬಂಧಿಸಿ ಉಂಟಾಗಿರುವ ಬಿಕ್ಕಟ್ಟು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸ್ಥಾನ ಮರುಸ್ಥಾಪನೆ ವಿಚಾರಗಳು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸೋಮವಾರ ಗದ್ದಲ ಸೃಷ್ಟಿಸುವ ಸಾಧ್ಯತೆ ಇದೆ.

ಇಂದು ರಾಜ್ಯಸಭೆಯಲ್ಲಿ ದೆಹಲಿ ಸೇವೆಗಳ ನಿಯಂತ್ರಣ ಮಸೂದೆ ಮಂಡನೆಯಾಗಲಿದೆ. ಈ ವೇಳೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಸಂಘರ್ಷಕ್ಕೆ ಕಾರಣವಾಗಬಹುದು. ಅವಿಶ್ವಾಸ ನಿರ್ಣಯದ ಮೇಲಿನ ಮೂರು ದಿನಗಳ ಚರ್ಚೆಯು ಮಂಗಳವಾರ ಆರಂಭವಾಗಲಿದೆ.

ರಾಹುಲ್ ಗಾಂಧಿ ಅವರು ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಿತಸ್ಥ ಎಂದು ಸೂರತ್‌ ನ್ಯಾಯಾಲಯ ನೀಡಿದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಕಾರಣ, ಲೋಕಸಭಾ ಕಾರ್ಯಾಲಯ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಕಾಂಗ್ರೆಸ್‌ ಹಾಗೂ ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳು ಕಾಯುತ್ತಿವೆ.

ಈ ಬಗ್ಗೆ ಟಿಎಂಸಿ ಸಂಸದೆ ಹೇಳಿಕೆ ನೀಡಿದ್ದು, ”ಲೋಕಸಭಾ ಕಾಯಾಲಯವು ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡಬೇಕು. ಈ ವಿಷಯದಲ್ಲಿನ ಯಾವುದೇ ವಿಳಂಬ ಸುಪ್ರೀಂ ಕೋರ್ಟ್‌ ಆದೇಶದ ಉಲ್ಲಂಘನೆ” ಆಗುತ್ತದೆ ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಿದ್ದನ್ನು ತೆರವುಗೊಳಿಸಿದಲ್ಲಿ ಅವರು ಕಲಾಪಕ್ಕೆ ಹಾಜರಾಗಬಹುದು ಕೇಂದ್ರ ಸರ್ಕಾರದ ಮೇಲಿನ ಅವಿಶ್ವಾಸ ನಿರ್ಣಯದ ಚರ್ಚೆಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ರಾಹುಲ್ ಅವರಿಗೆ ವಹಿಸುವ ಮೂಲಕ ಸಂಸತಿಗೆ ಅವರು ಭರ್ಜರಿಯಾಗಿ ಮರುಪ್ರವೇಶಿಸುವಂತೆ ಮಾಡುವುದು ಕಾಂಗ್ರೆಸ್‌ನ ಯೋಜನೆಯಾಗಿದೆ.

ಈ ವಿಚಾರವಾಗಿ ಲೋಕಸಭಾ ಕಾರ್ಯಾಲಯ ತೀರ್ಮಾನ ಕೈಗೊಳ್ಳುವುದನ್ನು ವಿಳಂಬ ಮಾಡಿದಲ್ಲಿ ಅದು ಲೋಕಸಭೆಯಲ್ಲಿ ಭಾರೀ ಗದ್ದಲಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ ಕಲಾಪ ಸಲಹಾ ಸಮಿತಿಯ 12 ಗಂಟೆಗಳಷ್ಟು ಕಾಲಾವಕಾಶ ನಿಗದಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉತ್ತರ ನೀಡುವ ನಿರೀಕ್ಷೆ ಇದೆ.

ಮಣಿಪುರ ಪರಿಸ್ಥಿತಿ ಕುರಿತು ಸಂಸತ್‌ನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕು ಎಂಬ ವಿವಿಧ ಪಕ್ಷಗಳ ಬೇಡಿಕೆಯನ್ನು ಸರ್ಕಾದ ತಿರಸ್ಕರಿಸಿತ್ತು. ಹೀಗಾಗಿ ಮೋದಿ ಅವರು ಈ ವಿಷಯವಾಗಿ ಸಂಸತ್‌ ನಲ್ಲಿ ಮಾತನಾಡುವುದನ್ನು ಖಾತರಿಪಡಿಸಲು ವಿಪಕ್ಷಗಳು ಅವಿಶ್ವಾಸ ನಿರ್ಣಯದ ತಂತ್ರಗಾರಿಕೆಯ ಮೊರೆ ಹೋಗಿವೆ.

ಇದನ್ನೂ ಓದಿ: ಅನರ್ಹಗೊಳಿಸಿದ ವೇಗದಲ್ಲೇ ರಾಹುಲ್ ಗಾಂಧಿರನ್ನ ಮತ್ತೆ ಸಂಸದರನ್ನಾಗಿ ಮಾಡಿ: ಚೌಧರಿ ಒತ್ತಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಾಯುವ ಮುನ್ನ ‘ಹೇ ರಾಮ್’ ಎಂದ ಮಹಾತ್ಮಾ ಗಾಂಧಿಯನ್ನು ಅನುಸರಿಸುತ್ತೇವೆ: ಪ್ರಿಯಾಂಕಾ ಗಾಂಧಿ

0
"ನಮ್ಮ ಪಕ್ಷವು ಮಹಾತ್ಮ ಗಾಂಧಿಯವರ ಆದರ್ಶಗಳನ್ನು ಅನುಸರಿಸುತ್ತದೆ; ಅವರು ಸಾಯುವ ಮೊದಲು 'ಹೇ ರಾಮ್' ಎಂದು ಉಚ್ಚರಿಸಿದರು. ಆದರೆ, ಕಾಂಗ್ರೆಸ್ ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮ ವಿರೋಧಿ ಎಂದು ಆರೋಪಿಸುವುದು...