Homeಮುಖಪುಟನೈಜ ಸಮಸ್ಯೆಗಳ ಚರ್ಚೆಗೆ ಬನ್ನಿ: ಬಿಜೆಪಿಗೆ ಸಿದ್ದರಾಮಯ್ಯ ಆಹ್ವಾನ

ನೈಜ ಸಮಸ್ಯೆಗಳ ಚರ್ಚೆಗೆ ಬನ್ನಿ: ಬಿಜೆಪಿಗೆ ಸಿದ್ದರಾಮಯ್ಯ ಆಹ್ವಾನ

- Advertisement -
- Advertisement -

ಸನ್ಮಾನ್ಯ ಬಿಜೆಪಿ ನಾಯಕರೇ, ಮಹಾರಾಷ್ಟ್ರ ಚುನಾವಣೆ ಮುಗಿಯಿತಲ್ಲಾ, ಮುಂದಿನ ಚುನಾವಣೆ ಕಾಲಕ್ಕೆ ಸಾವರ್ಕರ್ ಬಗ್ಗೆ ಮಾತಾಡೋಣ.
ಈಗ ತುರ್ತಾಗಿ ನಿರುದ್ಯೋಗ, ಬೆಲೆ ಏರಿಕೆ, ದಿವಾಳಿಯಾಗುತ್ತಿರುವ ಬ್ಯಾಂಕ್‌ಗಳು, ರೈತರ ಕಷ್ಟಗಳು, ನೆರೆ-ಬರದ ಬಗ್ಗೆ ಚರ್ಚೆ ಮಾಡೋಣ. #DebateOnRealissues ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೈಜ ಸಮಸ್ಯೆಗಳ ಚರ್ಚೆಗೆ ಬನ್ನಿ ಎಂದು ಬಿಜೆಪಿಗೆ ಆಹ್ವಾನ ನೀಡಿದ್ದಾರೆ.

ಚುನಾವಣಾ ಸಮಯದಲ್ಲಿ ಮಾತ್ರ ಬಿಜೆಪಿಗೆ ಸಾವರ್ಕರ್, ಹಿಂದೂ ಧರ್ಮ ನೆನಪಾಗುತ್ತದೆ ಹಾಗಾಗಿ ಈಗ ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆಗಳು ಮುಗಿದವಲ್ಲಾ ಈಗಲಾದರೂ ಜನರ ನೈಜ ಸಮಸ್ಯೆಗಳ ಚರ್ಚೆಗೆ ಬನ್ನಿ ಎಂದು ತಮ್ಮ ಫೇಸ್‌ಬುಕ್‌ ನಲ್ಲಿ ಪರೋಕ್ಷವಾಗಿ ಬಿಜೆಪಿಯನ್ನು ಟೀಕಿಸಿದ್ದಾರೆ.

ಆರ್ಥಿಕತೆ ಕುಸಿಯುತ್ತಿರುವ ಪರಿಣಾಮ ದಿನಬಳಕೆ ವಸ್ತುಗಳ ಬೆಲೆ ಏರುತ್ತಿದ್ದು ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ ಅವುಗಳ ಕುರಿತು ಚರ್ಚೆಗೆ ಬನ್ನಿ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ನೈಜ ಸಮಸ್ಯೆಗಳ ಬಗ್ಗೆ ಗಮನಹರಿಸಲು ಬಿಜೆಪಿಗೆ ಇಷ್ಟವಿಲ್ಲ. ಏಕೆಂದರೆ, ನಿಜವಾದ ಸಮಸ್ಯೆಗಳನ್ನು ಬಗೆಹರಿಸಲು ಶ್ರಮ ಪಡುವುದಕ್ಕಿಂತಲೂ, ಕಪೋಲಕಲ್ಪಿತವಾದ, ಜನರಲ್ಲಿ ಭ್ರಮೆಗಳನ್ನು ಉಂಟುಮಾಡಬಹುದಾದ, ಭಾವನಾತ್ಮಕವಾದ ವಿಚಾರಗಳನ್ನು ಚುನಾವಣಾ ಸಮಯದಲ್ಲಿ ಮುನ್ನೆಲೆಗೆ ತಂದು ಚುನಾವಣೆಯಲ್ಲಿ ಗೆಲ್ಲುವುದಷ್ಟೇ ಬಿಜೆಪಿಗೆ ಮುಖ್ಯವಾಗಿದೆ.

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...