ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ಇತರ ಪ್ರಮುಖ ಸಮಸ್ಯೆಗಳ ಕಾನೂನು ಗ್ಯಾರೆಂಟಿ ಸೇರಿದಂತೆ ತಮ್ಮ ಬೇಡಿಕೆಗಳಿಗೆ ಸ್ಪಂದಿಸಲು ಕೇಂದ್ರ ಸರ್ಕಾರ ನಿರಾಕರಿಸಿದರೆ ಡಿಸೆಂಬರ್ 6 ರಂದು ಶಂಭು ಗಡಿಯಿಂದ (ಪಂಜಾಬ್-ಹರಿಯಾಣ ಗಡಿ) ದೆಹಲಿ ಕಡೆಗೆ ಮೆರವಣಿಗೆ ನಡೆಸುವುದಾಗಿ ಪಂಜಾಬ್ ರೈತರು ಘೋಷಿಸಿದ್ದಾರೆ.
ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ರೈತರು ತಮ್ಮ ವಿವಿಧ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಡಿಸೆಂಬರ್ 6 ರಂದು ಶಂಭು ಗಡಿಯಿಂದ ಬ್ಯಾಚ್‌ಗಳಲ್ಲಿ ದೆಹಲಿಯತ್ತ ಮೆರವಣಿಗೆ ನಡೆಸಲಿದ್ದಾರೆ ಎಂದು ಘೋಷಿಸಿದ್ದಾರೆ. ಡಿಸೆಂಬರ್ 6
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ರೈತರ ಬೇಡಿಕೆಗಳ ಬಗ್ಗೆ ಚರ್ಚಿಸಲು ರೈತರೊಂದಿಗೆ ಯಾವುದೇ ಮಾತುಕತೆ ನಡೆಸದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಿಸಾನ್ ಮಜ್ದೂರ್ ಮೋರ್ಚಾದ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಸುದೀರ್ಘ ಕಾಯುವಿಕೆಯ ನಂತರ ದೆಹಲಿಯತ್ತ ತೆರಳಲು ನಿರ್ಧರಿಸಿದ್ದಾಗಿ ಹೇಳಿದ್ದಾರೆ.
“ನಾವು ಡಿಸೆಂಬರ್ 6 ರಂದು ದೆಹಲಿಯ ಕಡೆಗೆ ಹೋಗುತ್ತೇವೆ. ನಮಗೆ ಬೇರೆ ಯಾವುದೇ ಆಯ್ಕೆಗಳಿಲ್ಲ. ನಾವು ಒಂಬತ್ತು ತಿಂಗಳ ಕಾಲ ಸರ್ಕಾರದ ನಡೆಗಾಗಿ ಶಾಂತಿಯುತವಾಗಿ ಕಾಯುತ್ತಿದ್ದೆವು. ಆದರೆ ನಾವು ಈಗ ನಾವು ದೆಹಲಿಯ ಕಡೆಗೆ ಹೋಗುತ್ತೇವೆ” ಎಂದು ಅವರು ಹೇಳಿದ್ದಾರೆ. “ನಾವು 280 ದಿನಗಳಿಂದ ದೆಹಲಿಯ ಎರಡು ಗಡಿಗಳಲ್ಲಿ ಕೇಂದ್ರದಲ್ಲಿ ಬಿಡಾರ ಹೂಡಿದ್ದಾರೆ. ಫೆಬ್ರವರಿ 18 ರಿಂದ ಕೇಂದ್ರ ಸರ್ಕಾರವು ಅವರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ” ಎಂದು ಭಾರತೀಯ ಕಿಸಾನ್ ಯೂನಿಯನ್‌ನ ತೇಜ್ವೀರ್ ಸಿಂಗ್ ಅವರು ಹೇಳಿದ್ದಾರೆ.
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನಾತ್ಮಕ ಖಾತರಿಯ ಜೊತೆಗೆ, ರೈತರ ಕೃಷಿ ಸಾಲ ಮನ್ನಾ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಏರಿಕೆ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021 ರ ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಸೇರಿದಂತೆ ಹಲವು ಬೇಡಿಕೆಗಳನ್ನು ರೈತ ಸಂಘಟನೆಗಳು ಮುಂದಿಟ್ಟಿವೆ.
ಕ್ಯಾನ್ಸರ್ ರೋಗಿಯಾಗಿರುವ ಎಸ್‌ಕೆಎಂ (ರಾಜಕೀಯೇತರ) ಸಂಯೋಜಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಪಂಜಾಬ್ ಮತ್ತು ಹರಿಯಾಣದ ಗಡಿಯಲ್ಲಿರುವ ಸಂಗ್ರೂರ್‌ನ ಖಾನೌರಿಯಲ್ಲಿ ನವೆಂಬರ್ 26 ರಿಂದ ಆಮರಣಾಂತ ಉಪವಾಸ ಪ್ರತಿಭಟನೆ ನಡೆಸುವುದಾಗಿ ಈ ಹಿಂದೆ ಘೋಷಿಸಿದ್ದರು. ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಎರಡನೇ ವ್ಯಕ್ತಿ ಸುಖಜಿತ್ ಸಿಂಗ್ ಹರ್ದೋಜಾಂಡೆ ಎಂದು ದಲ್ಲೆವಾಲ್ ಹೇಳಿದ್ದಾರೆ.
ಪ್ರತಿಭಟನಾ ನಿರತ ರೈತರು ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಗಳ ಕೇಂದ್ರದಲ್ಲಿ ಮೊಕ್ಕಾಂ ಹೂಡಿದ್ದಾರೆ. SKM ಮತ್ತು KMM ನೇತೃತ್ವದ ‘ದೆಹಲಿ ಚಲೋ’ ಮೆರವಣಿಗೆಯನ್ನು ಭದ್ರತಾ ಪಡೆಗಳು ಅಂದು ತಡೆದಿದ್ದವು.
ಇದನ್ನೂ ಓದಿ: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧದಿಂದ ಯಾವುದೇ ಅಕ್ರಮ ಇಲ್ಲ: ಹೈಕೋರ್ಟ್
ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧದಿಂದ ಯಾವುದೇ ಅಕ್ರಮ ಇಲ್ಲ: ಹೈಕೋರ್ಟ್


