Homeಚಳವಳಿಡಿಸೆಂಬರ್ 6 ರಂದು ಶಂಭು ಗಡಿಯಿಂದ ದೆಹಲಿಗೆ ರ‍್ಯಾಲಿ ನಡೆಸಲಿರುವ ಪಂಜಾಬ್ ರೈತರು

ಡಿಸೆಂಬರ್ 6 ರಂದು ಶಂಭು ಗಡಿಯಿಂದ ದೆಹಲಿಗೆ ರ‍್ಯಾಲಿ ನಡೆಸಲಿರುವ ಪಂಜಾಬ್ ರೈತರು

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ಇತರ ಪ್ರಮುಖ ಸಮಸ್ಯೆಗಳ ಕಾನೂನು ಗ್ಯಾರೆಂಟಿ ಸೇರಿದಂತೆ ತಮ್ಮ ಬೇಡಿಕೆಗಳಿಗೆ ಸ್ಪಂದಿಸಲು ಕೇಂದ್ರ ಸರ್ಕಾರ ನಿರಾಕರಿಸಿದರೆ ಡಿಸೆಂಬರ್ 6 ರಂದು ಶಂಭು ಗಡಿಯಿಂದ (ಪಂಜಾಬ್-ಹರಿಯಾಣ ಗಡಿ) ದೆಹಲಿ ಕಡೆಗೆ ಮೆರವಣಿಗೆ ನಡೆಸುವುದಾಗಿ ಪಂಜಾಬ್ ರೈತರು ಘೋಷಿಸಿದ್ದಾರೆ.

ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ರೈತರು ತಮ್ಮ ವಿವಿಧ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಡಿಸೆಂಬರ್ 6 ರಂದು ಶಂಭು ಗಡಿಯಿಂದ ಬ್ಯಾಚ್‌ಗಳಲ್ಲಿ ದೆಹಲಿಯತ್ತ ಮೆರವಣಿಗೆ ನಡೆಸಲಿದ್ದಾರೆ ಎಂದು ಘೋಷಿಸಿದ್ದಾರೆ. ಡಿಸೆಂಬರ್ 6

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರೈತರ ಬೇಡಿಕೆಗಳ ಬಗ್ಗೆ ಚರ್ಚಿಸಲು ರೈತರೊಂದಿಗೆ ಯಾವುದೇ ಮಾತುಕತೆ ನಡೆಸದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಿಸಾನ್ ಮಜ್ದೂರ್ ಮೋರ್ಚಾದ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಸುದೀರ್ಘ ಕಾಯುವಿಕೆಯ ನಂತರ ದೆಹಲಿಯತ್ತ ತೆರಳಲು ನಿರ್ಧರಿಸಿದ್ದಾಗಿ ಹೇಳಿದ್ದಾರೆ.

“ನಾವು ಡಿಸೆಂಬರ್ 6 ರಂದು ದೆಹಲಿಯ ಕಡೆಗೆ ಹೋಗುತ್ತೇವೆ. ನಮಗೆ ಬೇರೆ ಯಾವುದೇ ಆಯ್ಕೆಗಳಿಲ್ಲ. ನಾವು ಒಂಬತ್ತು ತಿಂಗಳ ಕಾಲ ಸರ್ಕಾರದ ನಡೆಗಾಗಿ ಶಾಂತಿಯುತವಾಗಿ ಕಾಯುತ್ತಿದ್ದೆವು. ಆದರೆ ನಾವು ಈಗ ನಾವು ದೆಹಲಿಯ ಕಡೆಗೆ ಹೋಗುತ್ತೇವೆ” ಎಂದು ಅವರು ಹೇಳಿದ್ದಾರೆ. “ನಾವು 280 ದಿನಗಳಿಂದ ದೆಹಲಿಯ ಎರಡು ಗಡಿಗಳಲ್ಲಿ ಕೇಂದ್ರದಲ್ಲಿ ಬಿಡಾರ ಹೂಡಿದ್ದಾರೆ. ಫೆಬ್ರವರಿ 18 ರಿಂದ ಕೇಂದ್ರ ಸರ್ಕಾರವು ಅವರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ” ಎಂದು ಭಾರತೀಯ ಕಿಸಾನ್ ಯೂನಿಯನ್‌ನ ತೇಜ್ವೀರ್ ಸಿಂಗ್ ಅವರು ಹೇಳಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನಾತ್ಮಕ ಖಾತರಿಯ ಜೊತೆಗೆ, ರೈತರ ಕೃಷಿ ಸಾಲ ಮನ್ನಾ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಏರಿಕೆ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021 ರ ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಸೇರಿದಂತೆ ಹಲವು ಬೇಡಿಕೆಗಳನ್ನು ರೈತ ಸಂಘಟನೆಗಳು ಮುಂದಿಟ್ಟಿವೆ.

ಕ್ಯಾನ್ಸರ್ ರೋಗಿಯಾಗಿರುವ ಎಸ್‌ಕೆಎಂ (ರಾಜಕೀಯೇತರ) ಸಂಯೋಜಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಪಂಜಾಬ್ ಮತ್ತು ಹರಿಯಾಣದ ಗಡಿಯಲ್ಲಿರುವ ಸಂಗ್ರೂರ್‌ನ ಖಾನೌರಿಯಲ್ಲಿ ನವೆಂಬರ್ 26 ರಿಂದ ಆಮರಣಾಂತ ಉಪವಾಸ ಪ್ರತಿಭಟನೆ ನಡೆಸುವುದಾಗಿ ಈ ಹಿಂದೆ ಘೋಷಿಸಿದ್ದರು. ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಎರಡನೇ ವ್ಯಕ್ತಿ ಸುಖಜಿತ್ ಸಿಂಗ್ ಹರ್ದೋಜಾಂಡೆ ಎಂದು ದಲ್ಲೆವಾಲ್ ಹೇಳಿದ್ದಾರೆ.

ಪ್ರತಿಭಟನಾ ನಿರತ ರೈತರು ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಗಳ ಕೇಂದ್ರದಲ್ಲಿ ಮೊಕ್ಕಾಂ ಹೂಡಿದ್ದಾರೆ. SKM ಮತ್ತು KMM ನೇತೃತ್ವದ ‘ದೆಹಲಿ ಚಲೋ’ ಮೆರವಣಿಗೆಯನ್ನು  ಭದ್ರತಾ ಪಡೆಗಳು ಅಂದು ತಡೆದಿದ್ದವು.

ಇದನ್ನೂ ಓದಿ: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧದಿಂದ ಯಾವುದೇ ಅಕ್ರಮ ಇಲ್ಲ: ಹೈಕೋರ್ಟ್

ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧದಿಂದ ಯಾವುದೇ ಅಕ್ರಮ ಇಲ್ಲ: ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...