Homeಮುಖಪುಟಕೇರಳ ವಿಧಾನಸಭೆಯಲ್ಲಿ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಮಂಡನೆ

ಕೇರಳ ವಿಧಾನಸಭೆಯಲ್ಲಿ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಮಂಡನೆ

ಸಂಸತ್ತಿನಲ್ಲಿ ಅಂಗೀಕಾರವಾದ ಕಾಯ್ದೆಗಳು ಕೇವಲ ರೈತ ವಿರೋಧಿಯಷ್ಟೇ ಅಲ್ಲ, ಅವು ಕಾರ್ಪೋರೇಟ್ ಪರ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಪಾದಿಸಿದ್ದಾರೆ.

- Advertisement -
- Advertisement -

ಗುರುವಾರ ಕೇರಳ ವಿಧಾನಸಭೆಯಲ್ಲಿ ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯ ಮಂಡಿಸಿದರು. ಕಳೆದ 36 ದಿನಗಳಿಂದ ದೇಶದ ರಾಜಧಾನಿಯ ಗಡಿಗಳಲ್ಲಿ ಲಕ್ಷಾಂತರ ರೈತರು ಈ ಕಾಯ್ದೆಗಳ ರದ್ಧತಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತರ ಸಮಸ್ಯೆಗಳನ್ನು ಚರ್ಚಿಸಲು ಮತ್ತು ರೈತರನ್ನು ಬೆಂಬಲಿಸಲು, ಹೋರಾಟಕ್ಕೆ ಸಹಮತ ವ್ಯಕ್ತಪಡಿಸಲು ಕರೆದ ಒಂದು ತಾಸಿನ ವಿಶೇಷ ಅಧಿವೇಶನದಲ್ಲಿ ನಿರ್ಣಯ ಮಂಡಿಸಿ ಅವರು ಮಾತನಾಡಿದರು. ಮೂರು ಕಾಯ್ದೆಗಳನ್ನು ಹಿಂಪಡೆಯಬೇಕೆಂದು ನಿರ್ಣಯ ಮಂಡಿಸಿ ಮಾತನಾಡಿದ ಪಿಣರಾಯಿ, ದೇಶವು ಈ ಅಪ್ರತಿಮ ರೈತ ಪ್ರತಿಭಟನೆಗೆ ಸಾಕ್ಷಿಯಾಗಿದೆ. ಸಂಸತ್ತಿನಲ್ಲಿ ಅಂಗೀಕಾರವಾದ ಕಾಯ್ದೆಗಳು ಕೇವಲ ರೈತ ವಿರೋಧಿಯಷ್ಟೇ ಅಲ್ಲ, ಅವು ಕಾರ್ಪೋರೇಟ್ ಪರವಾಗಿವೆ. ಈಗಾಗಲೇ ಪ್ರತಿಭಟನಾ ನಿರತ 32 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಕೇರಳ: ಪುರಸಭೆ ಕಚೇರಿಯಲ್ಲಿ ’ಜೈಶ್ರೀರಾಮ್’ ಬ್ಯಾನರ್‌ ವಿರುದ್ದ ರಾಷ್ಟ್ರಧ್ವಜ ಹಾರಿಸಿದ ಡಿವೈಎಫ್‌ಐ!

ತಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ನಿರ್ದಿಷ್ಟ ಕಾನೂನುಗಳ ಬಗ್ಗೆ ಜನರಿಗೆ ಆತಂಕಗಳಿದ್ದಾಗ, ಶಾಸನಸಭೆಗಳು ಈ ಕುರಿತು ಗಂಭಿರ ದೃಷ್ಟಿಕೋನ ಹೊಂದಬೇಕಾದ ನೈತಿಕ ಜವಾಬ್ದಾರಿಯನ್ನು ಪ್ರದರ್ಶಿಸಬೇಕು ಎಂದ ಅವರು, “ಕೃಷಿ ಈ ದೇಶದ ಸಂಸ್ಕೃತಿಯ ಭಾಗವಾಗಿತ್ತು. ರೈತರು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರವು ಈ ಕಾಯ್ದೆಗಳನ್ನು ಜಾರಿ ಮಾಡಿದೆ. ಇದರ ಪರಿಣಾಮ ಈಗ ಸಿಗುತ್ತಿರುವ ಬೆಂಬಲ ಬೆಲೆಯನ್ನೂ ಕಳೆದುಕೊಳ್ಳುವ ಆತಂಕದಲ್ಲಿ ರೈತರಿದ್ದಾರೆ” ಎಂದು ವಿಜಯನ್ ಹೇಳಿದರು.

ಇದನ್ನೂ ಓದಿ: ಕೇಂದ್ರದ ಕೃಷಿ ಕಾನೂನಿನ ವಿರುದ್ದ ವಿಶೇಷ ಅಧಿವೇಶನ ಕರೆಯಲಿರುವ ಕೇರಳ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...