HomeUncategorizedರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ಈ ಕುರಿತು ಈಗಾಗಲೇ ಅವಿಶ್ವಾಸ ನಿರ್ಣಯ ಪ್ರಸ್ತಾವದ ನೋಟಿಸ್‌ ಅನ್ನು ವಿಧಾನಸಭಾ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಸಲ್ಲಿಕೆ ಮಾಡಲಾಗಿದೆ.

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಹೀಗಾಗಿ, ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಲಾಗಿದೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಸಕಾಂಗ ಪಕ್ಷದ ಸಭೆ ನಡೆಸಿ ನಂತರ ಅವಿಶ್ವಾಸ ನಿರ್ಣಯ ಮಂಡಿಸಲಾಗುವುದು. ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ಮೆಡಿಕಲ್, ಲ್ಯಾಪ್‌ಟಾಪ್ ಹಂಚಿಕೆ, ವರ್ಗಾವಣೆ, ಅನುದಾನ ವಿಚಾರದಲ್ಲಿಯೂ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ. ಅಭಿವೃದ್ಧಿ ಕೆಲಸ ಕುಂಠಿತವಾಗಿದೆ. ಹಣಕಾಸು ಪರಿಸ್ಥಿತಿ ಅಧೋಗತಿಯಲ್ಲಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ರೈತರನ್ನು ಅಧೋಗತಿಗೆ ಇಳಿಸುವ ಕಾನೂನುಗಳನ್ನು ಜಾರಿಗೆ ತರುತ್ತಿದೆ. ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜನವಿರೋಧಿ, ರೈತವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದೆ. ಇದರಿಂದ ಸರ್ಕಾರದ ವಿಶ್ವಾಸ ಕಳೆದುಕೊಂಡಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಈಗಾಗಲೇ ಅವಿಶ್ವಾಸ ನಿರ್ಣಯ ಪ್ರಸ್ತಾವದ ನೋಟಿಸ್‌ ಅನ್ನು ವಿಧಾನಸಭಾ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಸಲ್ಲಿಕೆ ಮಾಡಲಾಗಿದೆ.

ನಿನ್ನೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು ಎಂದು ಅವರು ಒತ್ತಾಯಿಸಿದ್ದರು.


ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ...

0
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ಮಾಡಿದ್ದ ದ್ವೇಷ ಭಾಷಣ ಜಾಗತಿಕ ಮಾದ್ಯಮಗಳಲ್ಲಿ ಭಾರೀ ಸುದ್ದಿಯಾಗಿದ್ದು, ಮೋದಿ ಮತ್ತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. 'ಕೊಳಕು ಭಾಷಣ’ ಆದರೆ...