Homeಕರೋನಾ ತಲ್ಲಣಲಾಕ್‌ಡೌನ್‌ ವಿಸ್ತರಿಸುವ ಬಗ್ಗೆ ಜೂನ್‌ 5 ರಂದು ತೀರ್ಮಾನ: ಬಿಎಸ್‌ವೈ

ಲಾಕ್‌ಡೌನ್‌ ವಿಸ್ತರಿಸುವ ಬಗ್ಗೆ ಜೂನ್‌ 5 ರಂದು ತೀರ್ಮಾನ: ಬಿಎಸ್‌ವೈ

- Advertisement -

ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ಅನ್ನು ಜೂನ್‌‌ 7 ನಂತರವೂ ವಿಸ್ತರಿಸುವ ಬಗ್ಗೆ ಜೂನ್‌‌ 5 ರಂದು ತಜ್ಞರ ಜೊತೆಗೆ ಚರ್ಚಿಸಿ ತೀರ್ಮಾನಿಸಲಾವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ವರದಿಯಾಗುತ್ತಿದೆ. ಆದರೆ, ತಜ್ಞರು ಲಾಕ್‌ಡೌನ್‌ ವಿಸ್ತರಿಸುವಂತೆ ವರದಿ ನೀಡಿಲ್ಲ. ಜೂನ್ 5 ರ ವೇಳೆಗೆ ಕೊರೊನಾ ಪರಿಸ್ಥಿತಿ ನೋಡಿಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರವು ಈಗಾಗಲೆ ರಾಜ್ಯಗಳ ಸ್ಥಿತಿಗತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ಜೊತೆಗೆ ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿ ಇರುವವರಿಗೆ ಎರಡನೆ ಹಂತದ ಪರಿಹಾರ ಪ್ಯಾಕೇಜ್‌ ಸಿದ್ದವಾಗುತ್ತಿದ್ದು, ಮುಂದಿನ ಎರಡು ದಿನದಲ್ಲಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಮೇ ತಿಂಗಳ 10 ರಿಂದ 24 ರವರೆಗೆ ಮೊಲದ ಹಂತದಲ್ಲಿ ಸಂಪೂರ್ಣ ಲಾಕ್‌ಡೌನ್‌ ಅನ್ನು ರಾಜ್ಯ ಸರ್ಕಾರವು ಹೇರಿತ್ತು. ಆದರೆ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಈ ಲಾಕ್‌ಡೌನ್‌ ಅನ್ನು ಮತ್ತೇ ಜೂನ್ 7 ರವರೆಗೆ ವಿಸ್ತರಿಸಲಾಗಿದೆ.

ಮೇ 10 ರಂದು ಲಾಕ್‌ಡೌ‌ನ್ ಪ್ರಾರಂಭವಾಗುವುದಕ್ಕಿಂತ ಮೊದಲೆ ರಾಜ್ಯ ಸರ್ಕಾರವು ಕಠಿಣ ನಿರ್ಬಂಧ ಹೇರಿ ಅಘೋಷಿತ ಲಾಕ್‌ಡೌನ್‌ ಹೇರಿತ್ತು.

ಇದನ್ನೂ ಓದಿ: ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ

0
ಮುಂಬರುವ ಉತ್ತರ ಪ್ರದೇಶದ ಚುನಾವಣಾ ಕಣ ದಿನ ದಿನಕ್ಕೂ ರಂಗೇರುತ್ತಿದ್ದು, ಪಕ್ಷದ ಪರ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ಶಾಸಕರನ್ನು ಅವರ ಸ್ವಂತ ಕ್ಷೇತ್ರ ಮುಜಾಫರ್‌ನಗರದ ಗ್ರಾಮಸ್ಥರು ಓಡಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...
Wordpress Social Share Plugin powered by Ultimatelysocial