ಒಳ ಮೀಸಲಾತಿ ಕುರಿತು ಸಚಿವ ಸಂಪುಟ ಹಾಗೂ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೊಪ್ಪಳ ತಾಲೂಕಿನ ಗಿಣಗೇರಿ ಏರ್‌ಸ್ಟ್ರಿಪ್‌ನಲ್ಲಿ ಇಂದು (ಸೆ.4) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಜಾತಿ ಗಣತಿ ಅನುಷ್ಠಾನ ಮಾಡಬೇಕು ಎಂದು ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಅವರು ಅಭಿಪ್ರಾಯ ಹೇಳಿದ್ದಾರೆ. ಅದನ್ನು ಸಚಿವ ಸಂಪುಟದಲ್ಲಿ ತಂದು ಚರ್ಚೆ ಮಾಡಬೇಕು. ಹಿಂದುಳಿದ ವರ್ಗಗಳ ಆಯೋಗದ ಜೊತೆ ಚರ್ಚೆ ಮಾಡಬೇಕಿದೆ. ಅದಕ್ಕೆಲ್ಲ ಸಮಯ ತಗಲುತ್ತದೆ ಎಂದು ಇದೇ ವೇಳೆ ಸಿಎಂ ಹೇಳಿದರು.
ಜಿ.ಟಿ ದೇವೇಗೌಡ ಅವರು ತಮ್ಮ ಪರವಾಗಿ ಮಾತನಾಡಿರುವ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜಿ.ಟಿ ದೇವೇಗೌಡ ಅವರು ಹೇಳಿರುವುದು ಸರಿಯಿದೆ. ಅವರು ಯಾವ ಪಕ್ಷದವರು? ಬಿಜೆಪಿ-ಜೆಡಿಎಸ್ ನಾಯಕರಿಗೆ ನಾನು ಅಧಿಕಾರದಲ್ಲಿರುವುದು ಇಷ್ಟವಿಲ್ಲ. ನಾನು ಅಧಿಕಾರದಲ್ಲಿದ್ದರೆ ಅವರು ದುರ್ಬಲರಾಗುತ್ತಾರೆ ಎನ್ನುವ ಆಂತಕವಿದೆ ಎಂದರು.
ಇದನ್ನೂ ಓದಿ : ಒಳ ಮೀಸಲಾತಿ ತೀರ್ಪು ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್


