Homeಕರ್ನಾಟಕಪರಿವಾರ/ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ಪರಿವಾರ/ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡ (ಎಸ್‌ಟಿ)ಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹರಿಹರದ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ಸಮುದಾಯದ ಜನರ ಮೇಲಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲೂ ಸೂಚನೆ ನೀಡಲಾಗಿದೆ ಎಂದರು.

ಬುದ್ಧಿವಂತಿಕೆ ಯಾರ ಸ್ವತ್ತಲ್ಲ :

ಅಕ್ಷರ ಸಂಸ್ಕೃತಿಯಿಂದ ವಂಚಿತರಾದಾಗ ಸಾಮಾಜಿಕ, ಆರ್ಥಿಕ ಅಸಮಾನತೆ ನಿರ್ಮಾಣವಾಗುತ್ತದೆ. ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ. ಬುದ್ಧಿ, ಜ್ಞಾನ ಪಡೆದಾಗ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ. ಎಲ್ಲರಿಗೂ ಸಮಾನ ಎಂಬ ಭಾವ ಬರಲು ಸ್ವಾಭಿಮಾನ ಅಗತ್ಯ ಎಂದು ಸಿಎಂ ಹೇಳಿದರು.

ಸಮ ಸಮಾಜ ನಿರ್ಮಾಣವಾದಾಗಲೇ ರಾಮ ರಾಜ್ಯದ ಸ್ಥಾಪನೆ:

ಬೇಡ ಜನಾಂಗದಲ್ಲಿ ಜನಿಸಿದ ವಾಲ್ಮೀಕಿಯವರು ರಾಮಾಯಣವನ್ನು ರಚಿಸಿ ಮಹರ್ಷಿಯಾದರು. ರಾಮಾಯಣ ಮಹಾನ್ ಗ್ರಂಥ. ಮಹಾನ್ ಗ್ರಂಥಗಳನ್ನು ಮೇಲ್ಜಾತಿಯವರು ಮಾತ್ರ ರಚಿಸಲು ಸಾಧ್ಯವೆಂಬ ಪ್ರತೀತಿಯಿತ್ತು. ಆದರೆ, ಕಾವ್ಯ ಸಾಹಿತ್ಯವನ್ನು ಶೂದ್ರರು ರಚಿಸಬಹುದೆಂಬುದನ್ನು ಮಹರ್ಷಿ ವಾಲ್ಮೀಕಿ ನಿರೂಪಿಸಿದರು. ಶ್ರೀರಾಮಚಂದ್ರನ ಕಾಲದಲ್ಲಿಯೇ ಸಮಾನ ಸಮಾಜದ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆಯಿತ್ತು. ಪ್ರಜೆಗಳೇ ಆಡಳಿತ ನಡೆಸುವ ಪ್ರಜಾಪ್ರಭುತ್ವದ ಮೂಲವನ್ನು ರಾಮಾಯಣದಲ್ಲಿ ಕಾಣಬಹುದು. ಬಸವಾದಿ ಶರಣರು ತಿಳಿಸಿದಂತೆ ವರ್ಗರಹಿತ, ಜಾತಿರಹಿತ, ಸಮಾನ ಅವಕಾಶ ನೀಡುವ ಸಮಾಜ ನಿರ್ಮಾಣವಾದಾಗ ಅದನ್ನು ರಾಮ ರಾಜ್ಯ ಎಂದು ಹೇಳಬಹುದು ಎಂದರು.

ಸಹಿಷ್ಣುತೆ ಹಾಗೂ ಸಹಬಾಳ್ವೆ

ಇಂದು ಜಾತಿ ಜಾತಿಗಳನ್ನು ಒಡೆಯುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮ ಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳನ್ನು ಜಾರಿಗೆ ತರುವುದೇ ಸರ್ಕಾರದ ಗುರಿಯಾಗಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಮಾಡಬೇಕೆಂದು ಸಂವಿಧಾನ ಹೇಳುತ್ತದೆ. ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಸರಿಯಾದ ಅವಕಾಶ ದೊರೆತಲ್ಲಿ ಉತ್ತಮವಾಗಿ ಜೀವನ ರೂಪಿಸಿಕೊಳ್ಳುತ್ತಿದ್ದರು. ಇವರಿಗೆ ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಸಿಎಂ ಪ್ರತಿಪಾದಿಸಿದರು.

ಇದನ್ನೂ ಓದಿ : ಸಂಘ ಪರಿವಾರ ಕರೆ ಕೊಟ್ಟಿದ್ದ ‘ಮಂಡ್ಯ ಬಂದ್‌’ ವಿಫಲ: ಪ್ರತಿಭಟನೆಯಿಂದ ದೂರ ಉಳಿದ ಜೆಡಿಎಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...