Homeಕರ್ನಾಟಕಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆಗೆ ತೀರ್ಮಾನ : ಹೆಚ್‌ಡಿಕೆ

ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆಗೆ ತೀರ್ಮಾನ : ಹೆಚ್‌ಡಿಕೆ

- Advertisement -
- Advertisement -

ಲೈಂಗಿಕ ಹಗರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಲು ಈಗಾಗಲೇ ತೀರ್ಮಾನಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ವಿರುದ್ದ ಏನು ಆರೋಪಗಳು ಕೇಳಿ ಬಂದಿವೆಯೋ ಆ ಕುರಿತು ನಮಗೆ ಮಾಹಿತಿ ದೊರೆತಿದೆ. ಈ ಬಗ್ಗೆ ಭಾನುವಾರ ರಾತ್ರಿಯೇ ದೇವೇಗೌಡರ ಜೊತೆ ಚರ್ಚೆ ಮಾಡಿ ಪ್ರಜ್ವಲ್ ಉಚ್ಚಾಟನೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಮಂಗಳವಾರ ಹುಬ್ಬಳ್ಳಿಯಲ್ಲಿ ಪಕ್ಷದ ಕೋರ್‌ ಕಮಿಟಿ ಸಭೆ ನಡೆಯಲಿದೆ ಅಲ್ಲಿ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಪ್ರಜ್ವಲ್ ಪರ ಪ್ರಚಾರಕ್ಕೆ ಬಂದಿಲ್ಲ. ಮೋದಿಯವರು, ಬಿಜೆಪಿ, ದೇವೇಗೌಡರು ಮತ್ತು ನನಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ನಮಗೆ ಈ ವಿಚಾರ ಗೊತ್ತೇ ಇರಲಿಲ್ಲ. ಹಾಗಾಗಿ, ನನ್ನ ಹಾಗೂ ನನ್ನ ತಂದೆಯ ಬಗ್ಗೆ ಯಾರೂ ಸಂಶಯಪಡಬೇಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯದ ಹೆಣ್ಣು ಮಕ್ಕಳ ಪರ ನಾನೂ ಧ್ವನಿ ಎತ್ತುತ್ತೇನೆ. ಪ್ರಜ್ವಲ್ ಪ್ರಕರಣದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ಆಗಿದ್ದರೆ ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ ಎಂಬ ನನ್ನ ನಿಲುವು ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್ ಪ್ರಕರಣದಲ್ಲಿ ಬಿಜೆಪಿ ಏಕೆ ಮೌನ ವಹಿಸಿದೆ? ಪ್ರಿಯಾಂಕ್ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

0
ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ತಪ್ಪು ಮಾಹಿತಿಯನ್ನು ಹರಡುವ ಸುದ್ದಿಗಳು,  ವೀಡಿಯೊಗಳು ದೇಶದ ಸಾಮರಸ್ಯಕ್ಕೆ ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿವೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವ ಹಲವಾರು...