Homeಮುಖಪುಟರೈತ ಹೋರಾಟದ ಮುಂದಿನ ನಡೆ ಕುರಿತು ಇಂದು ಸಿಂಘು ಗಡಿಯಲ್ಲಿ ನಿರ್ಣಾಯಕ ಸಭೆ

ರೈತ ಹೋರಾಟದ ಮುಂದಿನ ನಡೆ ಕುರಿತು ಇಂದು ಸಿಂಘು ಗಡಿಯಲ್ಲಿ ನಿರ್ಣಾಯಕ ಸಭೆ

- Advertisement -
- Advertisement -

ಎಂಎಸ್‌ಪಿ ಕಾನೂನುಬದ್ಧಗೊಳಿಸಬೇಕು ಎಂಬುದು ಸೇರಿದಂತೆ ಇನ್ನು ಹಲವು ಹಕ್ಕೊತ್ತಾಯಗಳನ್ನಿಟ್ಟುಕೊಂಡು ಹೋರಾಟ ಮುಂದುವರೆಸಿದ್ದ ಸಂಯುಕ್ತ ಕಿಸಾನ್ ಮೋರ್ಚಾವು ತನ್ನ ಹೋರಾಟದ ಮುಂದಿನ ರೂಪುರೇಷೆಗಳನ್ನು ನಿರ್ಧರಿಸಲು ಇಂದು ಸಭೆ ಸೇರಿದೆ.

ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತರ ಸುಧೀರ್ಘ ಪ್ರತಿಭಟನೆಯ ಮುಂದಿನ ಹಾದಿಯನ್ನು ನಿರ್ಧರಿಸುವ ಸಂಯುಕ್ತ ಕಿಸಾನ್ ಮೋರ್ಚಾದ ನಿರ್ಣಾಯಕ ಸಭೆಯು ಇಂದು ಸಿಂಘು ಗಡಿಯಲ್ಲಿ ಆರಂಭವಾಗಿದ್ದು, ಕೇಂದ್ರ ಸರ್ಕಾರದಿಂದ ಸರಿಯಾದ ಪ್ರತಿಕ್ರಿಯೆ ಇಲ್ಲದಿರುವಾಗ, ಕನಿಷ್ಠ ಬೆಂಬಲ ಬೆಲೆ ಕುರಿತ ಸಮಿತಿಗೆ ಐದು ಹೆಸರುಗಳನ್ನು ಕಳುಹಿಸಬೇಕೆ ಬೇಡವೇ ಎಂಬುದರ ಕುರಿತು ಚಿಂತನೆ ನಡೆಸಲಿವೆ ಎನ್ನಲಾಗಿದೆ.

ದೇಶಾದ್ಯಂತ ರೈತರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯುವುದು, ಹುತಾತ್ಮರ ಕುಟುಂಬಕ್ಕೆ ಪರಿಹಾರ ಸೇರಿದಂತೆ ಇತರೆ ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ.

ಸಂಯುಕ್ತ ಕಿಸಾನ್ ಮೋರ್ಚಾವು ನವೆಂಬರ್ 21 ರಂದು ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ನಮ್ಮ ಬೇಡಿಕೆಗಳಿಗೆ ಕೇಂದ್ರ ಸರ್ಕಾರವು ಸರ್ಕಾರವು ಔಪಚಾರಿಕವಾಗಿ ಮತ್ತು ಸಂಪೂರ್ಣವಾಗಿ ಪ್ರತಿಕ್ರಿಯಿಸುವವರೆಗೆ ಕಾಯಲು ನಿರ್ಧರಿಸಿದ್ದೇವೆ’ ಎಂದು ತಿಳಿಸಿತ್ತು.

ನವೆಂಬರ್ 29 ರಿಂದ ಆರಂಭವಾಗಬೇಕಿದ್ದ, ಯೋಜಿತ ಸಂಸತ್ತಿಗೆ ಟ್ಯ್ರಾಕ್ಟರ್ ಮಾರ್ಚ್ಅನ್ನು ಸ್ಥಗಿತಗೊಳಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಸಮಯ ನೀಡಲು ಮೋರ್ಚಾ ನಿರ್ಧರಿಸಿತ್ತು. ಆದರೆ ಕೇಂದ್ರ ಸರ್ಕಾರ ರೈತರೊಡನೆ ಅಧಿಕೃತ ಮಾತುಕತೆ ನಡೆಸದಿರುವುದು ಹೋರಾಟ ಮುಂದುವರೆಯುವುದಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಹುತಾತ್ಮ ರೈತರ ಕುರಿತು ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ: ಪಟ್ಟಿ ಬಿಡುಗಡೆ ಮಾಡಿದ ರಾಹುಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭಾ ಚುನಾವಣೆ: ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ 13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಇಂದು...

0
ಲೋಕಸಭಾ ಚುನಾವಣೆಯ ಹಿನ್ನೆಲೆ ಎರಡನೇ ಹಂತದಲ್ಲಿ ಕರ್ನಾಟಕ ಸೇರಿದಂತೆ ಒಟ್ಟು 13 ರಾಜ್ಯಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಬೆಳಿಗ್ಗೆ 7ರಿಂದ  ಮತದಾನ...