Homeಮುಖಪುಟನೀಟ್‌ ಪರೀಕ್ಷಾ ಫಲಿತಾಂಶ ಘೋಷಿಸಿ: ಸುಪ್ರೀಂ ಕೋರ್ಟ್

ನೀಟ್‌ ಪರೀಕ್ಷಾ ಫಲಿತಾಂಶ ಘೋಷಿಸಿ: ಸುಪ್ರೀಂ ಕೋರ್ಟ್

ಸುಮಾರು 16 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಇಬ್ಬರು ವಿದ್ಯಾರ್ಥಿಗಳಿಗಾಗಿ ತಡೆಹಿಡಿಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.

- Advertisement -
- Advertisement -

ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ 2021ರ ಪರೀಕ್ಷಾ ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಸೆಪ್ಟೆಂಬರ್‌ 12ರಂದು ನಡೆದಿದ್ದ ನೀಟ್‌ ಪರೀಕ್ಷೆಯಲ್ಲಿ ತಮ್ಮ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳು ತಪ್ಪು ಸೀರಿಯಲ್ ನಂಬರ್ ಹೊಂದಿವೆ ಎಂದು ಆರೋಪಿಸಿ ವೈಶಾನವಿ ಭೋಪಾಲಿ ಮತ್ತು ಅಭಿಷೇಕ್‌ ಶಿವಾಜಿ ಎಂಬ ಇಬ್ಬರು ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್‌ ಮೊರೆಹೋಗಿದ್ದರು. ಒಂದು ವೇಳೆ ನಾವು ಪರೀಕ್ಷೆ ಬರೆದರೂ ಉತ್ತರಗಳು ತಪ್ಪಾಗುತ್ತವೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ಪದವಿಪೂರ್ವ ವೈದ್ಯಕೀಯ ಆಕಾಂಕ್ಷಿಗಳಿಗೆ ಮತ್ತೊಮ್ಮೆ ಪರೀಕ್ಷೆಯನ್ನು ನಡೆಸುವಂತೆ ಏಜೆನ್ಸಿಗೆ ನಿರ್ದೇಶಿಸಿದ ಬಾಂಬೆ ಹೈಕೋರ್ಟ್‌, ಎನ್‌ಟಿಎ ಫಲಿತಾಂಶವನ್ನು ಘೋಷಿಸದಂತೆ ತಡೆ ನೀಡಿತ್ತು.

ನೀಟ್ ಫಲಿತಾಂಶ ಘೋಷಿಸಬೇಕು ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. NEET ಫಲಿತಾಂಶದಲ್ಲಿನ ವಿಳಂಬವು ಪದವಿಪೂರ್ವ ವೈದ್ಯಕೀಯ ಪ್ರವೇಶದ ಮೇಲೆ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಸರ್ಕಾರ ತನ್ನ ಮನವಿಯಲ್ಲಿ ತಿಳಿಸಿತ್ತು.

ಪ್ರಸ್ತುತ ನೀಟ್‌ ಫಲಿತಾಂಶ ಘೋಷಿಸುವಂತೆ ಸೂಚಿಸಿರುವ ಸುಪ್ರೀಂ ಕೋರ್ಟ್‌, ಸುಮಾರು 16 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಇಬ್ಬರು ವಿದ್ಯಾರ್ಥಿಗಳಿಗಾಗಿ ತಡೆಹಿಡಿಯಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಆ ಇಬ್ಬರು ವಿದ್ಯಾರ್ಥಿಗಳಿಗೆ ಹೇಗೆ ಸಹಾಯ ಮಾಡಬಹುದು ಎಂದು ಯೋಚಿಸುವುದಾಗಿ ಸುಪ್ರೀಂ ಹೇಳಿದೆ.


ಇದನ್ನೂ ಓದಿ: ಆರ್‌ಎಸ್‌ಎಸ್‌, ಬಿಜೆಪಿಯಲ್ಲಿ ಭಾರೀ ಭ್ರಷ್ಟಾಚಾರ: ಮೇಘಾಲಯ ರಾಜ್ಯಪಾಲರ ಗಂಭೀರ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...