Homeಮುಖಪುಟ'ಧರ್ಮ ಘೋಷಿಸಿ' | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

‘ಧರ್ಮ ಘೋಷಿಸಿ’ | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

- Advertisement -
- Advertisement -

ಆಂಧ್ರಪ್ರದೇಶದ ಪ್ರತಿಪಕ್ಷ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಯೋಜಿಸಿದ್ದ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ಶುಕ್ರವಾರ ತಿಳಿಸಿವೆ. ‘ಧರ್ಮ ಘೋಷಿಸಿ’ ಎಂದು ಆಂಧ್ರಪ್ರದೇಶ ಆಡಳಿತರೂಢ ಪಕ್ಷವು ಜಗನ್‌ ಮೋಹನ್‌ ರೆಡ್ಡಿ ಅವರೊಂದಿಗೆ ಕೇಳಿಕೊಂಡಿದ್ದರಿಂದ ತಿರುಪತಿ ದೇವಸ್ಥಾನದ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು TNIE ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರೆಡ್ಡಿ ಅವರ ಆಪ್ತ ಮೂಲಗಳು ಬೆಟ್ಟದ ದೇಗುಲಕ್ಕೆ ಅವರ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಆದರೆ ಅವರು ದೇವಾಲಯದ ಪಟ್ಟಣಕ್ಕೆ ಹೊರಡುವ ಕೆಲವೇ ಗಂಟೆಗಳ ಮೊದಲು ಬಂದ ನಿರ್ಧಾರದ ಹಿಂದಿನ ಕಾರಣವನ್ನು ತಕ್ಷಣವೇ ಬಹಿರಂಗಪಡಿಸಲಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ.

ಅದಾಗ್ಯೂ, ದೇವಸ್ಥಾನವನ್ನು ಪ್ರವೇಶಿಸುವ ಮೊದಲು ತಮ್ಮ ನಂಬಿಕೆಯನ್ನು ಘೋಷಿಸಬೇಕು ಎಂಬ ಪಿಡಿಪಿ ಬೇಡಿಕೆಯ ನಡುವೆ ಜಗನ್ ಅವರ ಭೇಟಿಯನ್ನು ರದ್ದುಗೊಳಿಸಲಾಯಿತು ಎಂದು ಹೇಳಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಗನ್ ಮೋಹನ್, ದೇಶದ ಪ್ರತಿಯೊಬ್ಬರಿಗೂ ನನ್ನ ಧರ್ಮ ತಿಳಿದಿದೆ. ನಾನು ಸಿಎಂ ಆಗುವ ಮೊದಲು ಹಲವಾರು ಬಾರಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ನಾಲ್ಕು ಗೋಡೆಗಳ ಮಧ್ಯೆ ಬೈಬಲ್ ಓದಿದರೂ ಇಸ್ಲಾಂ, ಹಿಂದೂ ಮತ್ತು ಸಿಖ್ ಧರ್ಮವನ್ನು ಗೌರವಿಸುತ್ತೇನೆ ಎಂದು ಹೇಳಿದರು.

ತಮ್ಮ ನಾಯಕರು ದೇವಸ್ಥಾನಕ್ಕೆ ಹೋಗದಂತೆ ತಿರುಪತಿಯಲ್ಲಿ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಟಿವಿಗಳು ತೋರಿಸುತ್ತಿವೆ ಎಂದು ಜಗನ್ ಹೇಳಿದ್ದಾರೆ. ಧರ್ಮ ಘೋಷಿಸಿ

ಇದನ್ನೂಓದಿ: ತಮ್ಮ ಬಗೆಗಿನ ಜನರ ಗ್ರಹಿಕೆಯನ್ನು ರಾಹುಲ್ ಗಾಂಧಿ ಬದಲಾಯಿಸಿದ್ದಾರೆ: ನಟ ಸೈಫ್ ಅಲಿ ಖಾನ್

“ತಮ್ಮ (ಚಂದ್ರಬಾಬು ನಾಯ್ಡು) 100 ದಿನಗಳ ಆಡಳಿತದ ವೈಫಲ್ಯವನ್ನು ಬೇರೆಡೆಗೆ ತಿರುಗಿಸಲು ಮತ್ತು ಗಮನವನ್ನು ಬೇರೆಡೆಗೆ ಸೆಳೆಯಲು ಚಂದ್ರಬಾಬು ನಾಯ್ಡು ಅವರು ಲಡ್ಡು ವಿಚಾರವನ್ನು ಮುಂದಿಟ್ಟರು. ಲಡ್ಡು ವಿಚಾರದಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಅವರು ಉದ್ದೇಶಪೂರ್ವಕವಾಗಿ ಧರ್ಮದ ಘೋಷಣೆ ಮಾಡುವಂತೆ ಕೇಳುತ್ತಿದ್ದಾರೆ. ಲಡ್ಡು ಗುಣಮಟ್ಟದ ಬಗ್ಗೆ ಅನುಮಾನದ ಬೀಜಗಳನ್ನು ಬಿತ್ತಿದೆ” ಎಂದು ರೆಡ್ಡಿ ಹೇಳಿದ್ದಾರೆ.

ವೆಂಕಟೇಶ್ವರ ಸ್ವಾಮಿಗೆ ಐದು ವರ್ಷಗಳ ಕಾಲ (ಅವರು ಸಿಎಂ ಆಗಿದ್ದಾಗ) ರೇಷ್ಮೆ ವಸ್ತ್ರವನ್ನು ಅರ್ಪಿಸುವ ಅವಕಾಶ ನನಗೆ ಸಿಕ್ಕಿತ್ತು. ನಾನು ಅದನ್ನು ಅರ್ಥಮಾಡಿಕೊಳ್ಳಬಲ್ಲೆ. ಇದು ನನ್ನ ಮೊದಲ ಬಾರಿಯ ಭೇಟಿ ಅಲ್ಲ ಎಂದು ಅವರು ಹೇಳಿದ್ದಾರೆ. ಗುಣಮಟ್ಟದ ಕಾರಣಕ್ಕಾಗಿ ಟಿಟಿಡಿ ತಿರಸ್ಕರಿಸಿದ ತುಪ್ಪವನ್ನು ಲಡ್ಡು ಪ್ರಸಾದ ತಯಾರಿಸಲು ಎಂದಿಗೂ ಬಳಸಲಾಗುವುದಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

ಹಿಂದಿನ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ತಿರುಪತಿ ಲಡ್ಡುಗಳಲ್ಲಿ ಗುಣಮಟ್ಟವಿಲ್ಲದ ತುಪ್ಪದ ಬಳಕೆ ಮತ್ತು ಅದರಲ್ಲಿ ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಚಂದ್ರಬಾಬು ನಾಯ್ಡು ಕಳೆದ ವಾರ ಆರೋಪಿಸಿದ್ದರು.

ವಿಡಿಯೊ ನೋಡಿ: ದಲಿತ ಸಮುದಾಯಗಳ ಒಡಕಿನಲ್ಲೂ ಒಗ್ಗಟ್ಟಿದೆ: ಅಗ್ರಹಾರ ಕೃಷ್ಣಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...