Homeಅಂತರಾಷ್ಟ್ರೀಯಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು 'ಭಯೋತ್ಪಾದಕರು' ಎಂದು ಘೋಷಿಸಿ: ಕೆನಡಾ ಪ್ರಾಂತ್ಯದ ಮುಖ್ಯಸ್ಥ ಒತ್ತಾಯ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ‘ಭಯೋತ್ಪಾದಕರು’ ಎಂದು ಘೋಷಿಸಿ: ಕೆನಡಾ ಪ್ರಾಂತ್ಯದ ಮುಖ್ಯಸ್ಥ ಒತ್ತಾಯ

- Advertisement -
- Advertisement -

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗುಂಪನ್ನು ಭಯೋತ್ಪಾದಕ ಸಂಘಟನೆ ಎಂದು ಹೆಸರಿಸುವಂತೆ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಮುಖ್ಯಮಂತ್ರಿ ಡೇವಿಡ್ ಎ.ಬಿ. ಮಂಗಳವಾರ ತಮ್ಮ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ಸಿಬಿಸಿ ನ್ಯೂಸ್ ವರದಿ ಮಾಡಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಉತ್ತರ ಅಮೆರಿಕಾದ ಹಲವಾರು ಪ್ರಾಂತ್ಯಗಳಲ್ಲಿ ಈ ಗುಂಪಿಗೆ ಸಂಬಂಧಿಸಿದ ಸುಲಿಗೆ ಪ್ರಕರಣಗಳನ್ನು ನಿಭಾಯಿಸುವ ಗುರಿಯನ್ನು ಈ ಕ್ರಮ ಹೊಂದಿದೆ ಎಂದು ವರದಿಯಾಗಿದೆ. ದಕ್ಷಿಣ ಏಷ್ಯಾದ ವ್ಯಾಪಾರಿಗಳು ಎದುರಿಸುತ್ತಿರುವ ಅಪರಾಧಗಳನ್ನು ಪರಿಹರಿಸಲು ಸರ್ರೆಯಲ್ಲಿ ವಾರಾಂತ್ಯದಲ್ಲಿ ಸಾರ್ವಜನಿಕ ಸುರಕ್ಷತಾ ವೇದಿಕೆ ನಡೆದ ನಂತರ ಈ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಡೇವಿಗ್‌ ಒತ್ತಾಯಿಸಿದ್ದಾರೆ.

ದಕ್ಷಿಣ ಏಷ್ಯಾದ ಈ ವ್ಯಾಪಾರಿ ಸಮುದಾಯಕ್ಕೆ ಕೊಲೆ ಅಥವಾ ಹಿಂಸಾಚಾರದ ಬೆದರಿಕೆ ಹಾಕಿದ ನಂತರ ಸುಲಿಗೆ ಮಾಡಲಾಗುತ್ತಿದೆ ಎಂದು ಅಲ್ಲಿನ ಪೊಲೀಸರು ಹೇಳಿದ್ದಾರೆ. ಬಿಷ್ಣೋಯ್ ಗ್ಯಾಂಗ್ ಅಂತಹ ಪ್ರಕರಣಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ.

ಪಂಜಾಬ್‌ನ ಗ್ಯಾಂಗ್‌ಸ್ಟರ್ ಬಿಷ್ಣೋಯ್ ಪ್ರಸ್ತುತ ಗುಜರಾತ್‌ನ ಅಹಮದಾಬಾದ್‌ನ ಸಬರಮತಿ ಕೇಂದ್ರ ಜೈಲಿನಲ್ಲಿದ್ದಾರೆ. ಅನೇಕ ಅಪರಾಧಗಳಿಗೆ ಸಂಬಂಧಿಸಿ ಅವರನ್ನು ಬಂಧನದಲ್ಲಿ ಇರಿಸಲಾಗಿದೆ. ಭಾರತ ಸರ್ಕಾರದ ಏಜೆಂಟರು ಉತ್ತರ ಅಮೆರಿಕಾದಲ್ಲಿ ಹಿಂಸಾಚಾರವನ್ನು ಯೋಜಿಸಲು ಮತ್ತು ಕಾರ್ಯಗತಗೊಳಿಸಲು ಬಿಷ್ಣೋಯಿ ಗ್ಯಾಂಗ್‌ನೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂಬ ಕೆನಡಾ ಸರ್ಕಾರ ಈ ಹಿಂದೆ ಆರೋಪ ಮಾಡಿವೆ.

“ಭಾರತದಲ್ಲಿ ಗ್ಯಾಂಗ್‌ಗಳು ನಮ್ಮ ಪ್ರಾಂತ್ಯದಲ್ಲಿ ಮತ್ತು ಇತರ ಪ್ರಾಂತ್ಯಗಳಲ್ಲಿ ವ್ಯವಹಾರ ಮಾಲೀಕರನ್ನು ಬೆದರಿಸಲು ಮತ್ತು ಸುಲಿಗೆ ಮಾಡಲು ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪಗಳಿವೆ” ಎಂದು ಮುಖ್ಯಮಂತ್ರಿ ಡೇವಿಡ್ ಎಬಿ ಮಂಗಳವಾರ ವಿಕ್ಟೋರಿಯಾದಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

“ಈ ಕೆಲವು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಸ್ವಯಂ ಗುರುತಿಸಲ್ಪಟ್ಟ ಗ್ಯಾಂಗ್‌ಗಳಲ್ಲಿ ಒಂದಾದ ಲಾರೆನ್ಸ್ ಬಿಷ್ಣೋಯ್ ಗುಂಪನ್ನು ಕೆನಡಾದಲ್ಲಿ ಭಯೋತ್ಪಾದಕ ಸಂಘಟನೆ ಎಂದು ಪಟ್ಟಿ ಮಾಡುವಂತೆ ಕೇಳಲು” ಪ್ರಧಾನಿ ಮಾರ್ಕ್ ಕಾರ್ನಿಗೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ. ಗ್ಯಾಂಗ್‌ನ ಆಪಾದಿತ ಕಾರ್ಯಾಚರಣೆಗಳು ಬ್ರಿಟಿಷ್ ಕೊಲಂಬಿಯಾ, ಆಲ್ಬರ್ಟಾ ಮತ್ತು ಒಂಟಾರಿಯೊದಾದ್ಯಂತ ವಿಸ್ತರಿಸಿದೆ ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಪಾತ್ರವಿದೆ ಎಂದು ಮುಂಬೈ ಪೊಲೀಸರು ಶಂಕಿಸಿದ್ದಾರೆ. ಮೇ 29, 2022 ರಂದು ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರ ಹತ್ಯೆಯ ಮಾಸ್ಟರ್ ಮೈಂಡ್ ಎಂದು ಬಿಷ್ಣೋಯ್ ವಿರುದ್ಧ ಆರೋಪ ಹೊರಿಸಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಶಾಸಕರ ಭತ್ಯೆ ತುರ್ತಾಗಿ ಹೆಚ್ಚಿಸುವ ಸರ್ಕಾರ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸುತ್ತಿದೆ: ಎಐಡಿಎಸ್ಓ ಆಕ್ರೋಶ

ಶಾಸಕರ ಭತ್ಯೆ ತುರ್ತಾಗಿ ಹೆಚ್ಚಿಸುವ ಸರ್ಕಾರ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸುತ್ತಿದೆ: ಎಐಡಿಎಸ್ಓ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...