Homeಮುಖಪುಟ'ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ': ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

‘ನಮ್ಮದು ಅಂಬೇಡ್ಕರ್ ಸಿದ್ದಾಂತ, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ’: ಸಿಜೆಐ ಗವಾಯಿ ತಾಯಿ ಸ್ಪಷ್ಟನೆ

- Advertisement -
- Advertisement -

ಅಕ್ಟೋಬರ್ 5ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ತಾಯಿ ಕಮಲಾತೈ ಗವಾಯಿ ಬುಧವಾರ (ಅ.1) ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಕಮಲಾತೈ ಅವರನ್ನು ಆರ್‌ಎಸ್‌ಎಸ್‌ ಆಹ್ವಾನಿಸಿತ್ತು. ಆದರೆ, ಸುದ್ದಿ ಸೃಷ್ಟಿಸಿದ ವಿವಾದ ಮತ್ತು ಆರೋಪಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮದಿಂದ ದೂರ ಇರಲು ಅವರು ನಿರ್ಧರಿಸಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಹೆಚ್ಚಿನ ವರದಿಗಳು, ಕಮಲಾತೈ ಅವರು ಆರೋಗ್ಯದ ಕಾರಣಗಳನ್ನು ಮುಂದಿಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ ಎಂದಿವೆ.

ಕಮಲಾತೈ ಅವರಿಗೆ ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ ಎಂಬ ಸಂಗತಿ ಬಹಿರಂಗಗೊಳ್ಳುತ್ತಿದ್ದಂತೆಯೇ, ಅವರು ಮತ್ತು ಅವರ ಪತಿ, ಬಿಹಾರದ ಮಾಜಿ ರಾಜ್ಯಪಾಲ ದಾದಾಸಾಹೇಬ್ ಗವಾಯಿ ವಿರುದ್ಧ ಟೀಕೆ ವ್ಯಕ್ತವಾಗಿತ್ತು. ಇದು ವಿವಾದದ ಸ್ವರೂಪವನ್ನೂ ಪಡೆದುಕೊಂಡಿತ್ತು.

“ಒಂದು ವೇಳೆ ನಾನೇನಾದರೂ ಆರ್‌ಎಸ್‌ಎಸ್‌ ವೇದಿಕೆಯಲ್ಲಿದ್ದಿದ್ದರೆ, ನಾನು ಅಂಬೇಡ್ಕರ್ ಸಿದ್ಧಾಂತವನ್ನು ಮುಂದಿಡುತ್ತಿದ್ದೆ” ಎಂದು ಕಮಲಾತೈ ಅವರು ಬಹಿರಂಗ ಪತ್ರದಲ್ಲಿ ಹೇಳಿರುವುದಾಗಿ ವರದಿಯಾಗಿದೆ.

“ಕೆಲವರು ನನ್ನನ್ನು ಅಕ್ಟೋಬರ್ 5ರಂದು ಆಯೋಜನೆಗೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ಜನರು ನನ್ನ ಹಾಗೂ ನನ್ನ ಪತಿ ದಾದಾಸಾಹೇಬ್ ಗವಾಯಿ ವಿರುದ್ಧ ಆರೋಪಗಳನ್ನು ಮಾಡಿದರು. ಆದರೆ, ನಾವು ಡಾ.ಬಿ.ಆರ್ ಅಂಬೇಡ್ಕರ್ ಅವರ ಸಿದ್ಧಾಂತದಂತೆ ಬದುಕುತ್ತಿದ್ದೇವೆ. ದಾದಾಸಾಹೇಬ್ ಗವಾಯಿ ತಮ್ಮ ಇಡೀ ಜೀವನವನ್ನು ಅಂಬೇಡ್ಕರ್ ವಾದದ ಹೋರಾಟಕ್ಕೆ ಮುಡುಪಾಗಿಟ್ಟಿದ್ದರು. ವಿಭಿನ್ನ ಸಿದ್ಧಾಂತದ ವೇದಿಕೆಯ ಮೇಲೆ ನಮ್ಮ ಸಿದ್ಧಾಂತವನ್ನು ಹಂಚಿಕೊಳ್ಳುವುದು ಮುಖ್ಯವಾಗಿದ್ದರೂ, ಅದಕ್ಕೆ ಧೈರ್ಯದ ಅಗತ್ಯವಿದೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

“ನನ್ನ ಪತಿ ಉದ್ದೇಶಪೂರ್ವಕವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ತಮ್ಮ ವಿರೋಧಿ ಸಿದ್ಧಾಂತದ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ದಮನಿತ ವರ್ಗಗಳ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಿದ್ದರು” ಎಂದೂ ಅವರು ತಿಳಿಸಿದ್ದಾರೆ.

“ನನ್ನ ಪತಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರೂ, ಅವರು ಹಿಂದುತ್ವವನ್ನು ಒಪ್ಪಿಕೊಂಡಿರಲಿಲ್ಲ. ನಾನೇನಾದರೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ವೇದಿಕೆಯನ್ನು ಹಂಚಿಕೊಂಡಿದ್ದರೆ, ನಾನು ಅಂಬೇಡ್ಕರ್ ವಾದವನ್ನು ಮುಂದಿಡುತ್ತಿದ್ದೆ” ಎಂದಿದ್ದಾರೆ.

“ಆದರೆ, ಕೇವಲ ಒಂದು ಕಾರ್ಯಕ್ರಮವನ್ನು ಮುಂದಿಟ್ಟುಕೊಂಡು ನನ್ನ ಮೇಲೆ ಆರೋಪಗಳು ಹಾಗೂ ಕಳಂಕ ಹಚ್ಚುವ ಪ್ರಯತ್ನಗಳು ನಡೆದಿದ್ದರಿಂದ ನನಗೆ ತುಂಬಾ ಬೇಸರವಾಗಿದೆ. ಹೀಗಾಗಿ ನಾನು ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ” ಎಂದು ಕಮಲಾತೈ ಗವಾಯಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ನಾಯಕ ಹಾಗೂ ಸಿಜಿಐ ಗವಾಯಿ ಅವರ ಸಹೋದರ ಡಾ. ರಾಜೇಂದ್ರ ಗವಾಯಿ, “ಸಂಘದ ಕಾರ್ಯಕ್ರಮ ಅಮರಾವತಿಯಲ್ಲಿ ನಡೆಯುತ್ತಿದ್ದು, ಆಯಿ ಸಾಹೇಬ್ (ತಾಯಿ) ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಈ ಹಿಂದೆ, ನಾಗ್ಪುರದಲ್ಲಿ ನಡೆದ ಸಂಘದ ವಿಜಯದಶಮಿ ಕಾರ್ಯಕ್ರಮಗಳಲ್ಲಿಯೂ ಕೂಡ, ರಾಜ್ಯಸಭೆಯ ಮಾಜಿ ಉಪಾಧ್ಯಕ್ಷ ಮತ್ತು ನ್ಯಾಯವಾದಿ ಬಿ.ಡಿ. ಖೋಬ್ರಗಡೆ ಮತ್ತು ದಾದಾಸಾಹೇಬ್ ಗವಾಯಿ ಅವರಂತಹ ನಾಯಕರು ಭಾಗವಹಿಸಿದ್ದರು ಎಂಬುದನ್ನು ಗಮನಾರ್ಹ. ಆದ್ದರಿಂದ, ನಮ್ಮ ತಾಯಿ ಕೂಡ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಗವಾಯಿ ಕುಟುಂಬವು ಯಾವಾಗಲೂ ರಾಜಕೀಯ ಗಡಿಗಳನ್ನು ಮೀರಿದ ಸಂಬಂಧಗಳನ್ನು, ಪಕ್ಷಗಳ ರೇಖೆಗಳನ್ನು ಮೀರಿದ ಸಂಬಂಧಗಳನ್ನು ಉಳಿಸಿಕೊಂಡಿದೆ” ಎಂದು ಹೇಳಿದ್ದರು.

ಇದಕ್ಕೂ ಮೊದಲು ಆರ್‌ಎಸ್‌ಎಸ್ ಸಂವಹನ ವಿಭಾಗದ ವಿಶ್ವ ಸಂವಾದ ಕೇಂದ್ರದ ಅಧಿಕಾರಿಗಳು, “ಆಹ್ವಾನ ನೀಡುವ ಮೊದಲು ಕಮಲಾತೈ ಅವರ ಒಪ್ಪಿಗೆಯನ್ನು ಪಡೆದಿದ್ದೇವೆ ಮತ್ತು ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಹೇಗೆ ಕಾಣಿಸಿಕೊಳ್ಳಬೇಕೆಂದು ಕೂಡ ಕೇಳಿದ್ದೇವೆ” ಎಂದು ಹೇಳಿದ್ದರು ಎಂಬುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ’: ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸೋನಮ್ ವಾಂಗ್ಚುಕ್ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...