Homeಮುಖಪುಟಕಿಸಾನ್ ಗಣರಾಜ್ಯೋತ್ಸವ ಹಿಂಸಾಚಾರದ ಆರೋಪಿ ನಟ ದೀಪ್ ಸಿಧು ಅಪಘಾತದಲ್ಲಿ ಸಾವು

ಕಿಸಾನ್ ಗಣರಾಜ್ಯೋತ್ಸವ ಹಿಂಸಾಚಾರದ ಆರೋಪಿ ನಟ ದೀಪ್ ಸಿಧು ಅಪಘಾತದಲ್ಲಿ ಸಾವು

- Advertisement -
- Advertisement -

2021ರ ಕಿಸಾನ್ ಗಣರಾಜ್ಯೋತ್ಸವದ ಹಿಂಸಾಚಾರದ ಆರೋಪ ಹೊತ್ತಿರುವ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪಂಜಾಬ್ ನಟ ದೀಪ್ ಸಿಧು ಇಂದು ರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ದೆಹಲಿಯ ಕುಂಡ್ಲಿ-ಮಾನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ವೇ ಬೈಪಾಸ್‌ನಲ್ಲಿ ಅಪಘಾತ ಸಂಭವಿಸಿದೆ.

ದೀಪ್ ಸಿಧು ಪ್ರಯಾಣಿಸುತ್ತಿದ್ದ ಬಿಳಿ ಬಣ್ಣದ ಮಹಿಂದ್ರ ಸ್ಕಾರ್ಪಿಯೋ ಎಸ್‌ಯುವಿಗೆ ಟ್ರಕ್ ಅಪ್ಪಳಿಸಿ ಅಪಘಾತ ಸಂಭವಿಸಿದೆ. ಎಸ್‌ಯುವಿಯ ಬಲಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇಂದು ರಾತ್ರಿ 9.30ರ ಸಮಯದಲ್ಲಿ ದೆಹಲಿಯಿಂದ ಪಂಜಾಬ್‌ನ ಬಟಿಂಡಾಕ್ಕೆ ದೀಪ್ ಸಿಧು ಪ್ರಯಾಣಿಸುತ್ತಿದ್ದಾಗ ಈ ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ನಂತರ ದೀಪ್‌ ಸಿಧುರವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಮರಣ ಹೊಂದಿದ್ದರು ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

2021ರ ಜನವರಿ 26 ರ ಗಣರಾಜ್ಯೋತ್ಸವದಂದು ಕೆಂಪು ಕೋಟೆ ಬಳಿ ನಡೆದ ದಾಂಧಲೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿ ನಟ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ 2021ರ ಏಪ್ರಿಲ್‌ನಲ್ಲಿ ಜಾಮೀನು ಸಿಕ್ಕಿತ್ತು. ನಂತರ ಮತ್ತೆ ಬಂಧಿಸಿ ಏಪ್ರಿಲ್ ಅಂತ್ಯದಲ್ಲಿ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ರೈತರು ಕೃಷಿ ಕಾನೂನುಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾಗ ಗಣರಾಜ್ಯೋತ್ಸವದಂದು ಟ್ರಾಕ್ಟರ್ ಪರೇಡ್‌ಗೆ ಕರೆ ನೀಡಿದ್ದರು. ಶಾಂತಿಯುತವಾಗಿ ನಡೆಯುತ್ತಿದ್ದ ಹೋರಾಟ ದೀಪ್ ಸಿಧು ಕಾರಣದಿಂದ ಒಂದು ಗುಂಪು ಕೆಂಪು ಕೋಟೆಗೆ ನುಗ್ಗಿ ಸಿಖ್ ಧಾರ್ಮಿಕ ಧ್ವಜ ಹಾರಿಸಿತು ಮತ್ತು ನಂತರ ಹಿಂಸಾಚಾರ ನಡೆಯಿತು ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...