Homeಮುಖಪುಟಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

2019 ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್‌ ಅನ್ನು ಪರಿಶೀಲಿಸುವ ಸಾಕ್ಷ್ಯಚಿತ್ರದ ಎರಡನೇ ಭಾಗವು ಜನವರಿ 24ರ ಮಂಗಳವಾರ ಬಿಡುಗಡೆ ಆಗಲಿದೆ.

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತು ತನ್ನ ಸಾಕ್ಷ್ಯಚಿತ್ರವನ್ನು ಉನ್ನತ ಸಂಪಾದಕೀಯ ಮಾನದಂಡಗಳ ಪ್ರಕಾರ ಆಳವಾದ ಸಂಶೋಧನೆಯ ನಂತರವೇ ನಿರ್ಮಿಸಲಾಗಿದೆ ಎಂದು ಬಿಬಿಸಿ ಹೇಳಿಕೆ ಎಂದು ವೆರೈಟಿ ಮ್ಯಾಗಜೀನ್ ವರದಿ ಮಾಡಿದೆ.

ಸಾಕ್ಷ್ಯಚಿತ್ರ ನಿರ್ಮಾಣದ ಸಂದರ್ಭದಲ್ಲಿ ಬಿಬಿಸಿ ವಕ್ತಾರರು ಭಾರತದ ಸರ್ಕಾರವು ತನ್ನ ವಾದವನ್ನು ಮುಂದಿಡಲು ಕೇಳಿಕೊಂಡರು. ಆದರೆ ಅದಕ್ಕೆ ಭಾರತ ಸರ್ಕಾರ ನಿರಾಕರಿಸಿತು ಎಂದು ಬಿಬಿಸಿ ಹೇಳಿಕೊಂಡಿದೆ.

ಸಾಕ್ಷ್ಯಚಿತ್ರವು ಮೋದಿಯವರ ಕುರಿತು ಕಳಂಕಿತ ನಿರೂಪಣೆ ತೇಲಿಬಿಡಲು ವಿನ್ಯಾಸಗೊಳಿಸಲಾದ ಪ್ರೊಪೊಗಂಡ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಆರೋಪಿಸಿದೆ. “ಈ ಸಾಕ್ಷ್ಯಚಿತ್ರದಲ್ಲಿ ಪಕ್ಷಪಾತ, ವಸ್ತುನಿಷ್ಠತೆಯ ಕೊರತೆ ಮತ್ತು ಮುಂದುವರಿದ ವಸಾಹತುಶಾಹಿ ಮನಸ್ಥಿತಿಯು ಸ್ಪಷ್ಟವಾಗಿ ಗೋಚರಿಸುತ್ತದೆ. ಅದಕ್ಕಾಗಿ ಇದನ್ನು ಈ ನಿರೂಪಣೆಯನ್ನು ಮತ್ತೆ ಮತ್ತೆ ತೇಲಿಬಿಡಲಾಗುತ್ತಿ” ಎಂದು ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಬಿಸಿ ತನ್ನ ಸಾಕ್ಷ್ಯಚಿತ್ರವನ್ನು ಸಮರ್ಥಿಸಿಕೊಂಡಿದ್ದು ‘ಈ ಸಾಕ್ಷ್ಯಚಿತ್ರವು ಬಿಜೆಪಿ ಪಕ್ಷದ ಸದಸ್ಯರ ಪ್ರತಿಕ್ರಿಯೆಗಳನ್ನು ಒಳಗೊಂಡಂತೆ ಹಲವಾರು ಅಭಿಪ್ರಾಯಗಳನ್ನು ಒಳಗೊಂಡಿದ್ದು, ಆಳವಾದ ಸಂಶೋಧನೆಯ ನಂತರವೇ ಇದನ್ನು ನಿರ್ಮಿಸಲಾಗಿದೆ ಎಂದಿದೆ.

‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯಲ್ಲಿ ಸಾಕ್ಷ್ಯಚಿತ್ರದ ಮೊದಲ ಭಾಗವನ್ನು ಇದೇ ಮಂಗಳವಾರ ಬಿಬಿಸಿ ಬಿಡುಗಡೆ ಮಾಡಿತ್ತು. ಆದರೆ ಯೂಟ್ಯೂಬ್‌ನಿಂದ ಆ ವಿಡಿಯೋವನ್ನು ಡಿಲೀಟ್ ಮಾಡಲಾಗಿತ್ತು. ಆ ನಂತರ ಬಿಬಿಸಿ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಅದರಲ್ಲಿ 2002 ರ ಗಲಭೆಗಳ ಸಮಯದಲ್ಲಿ ಹಿಂಸಾಚಾರದ ಪ್ರಮಾಣವು “ವರದಿ ಮಾಡಿದ್ದಕ್ಕಿಂತ ಹೆಚ್ಚು” ಎಂದು ಬ್ರಿಟಿಷ್ ತನಿಖಾ ತಂಡವು ತೀರ್ಮಾನಿಸಿದೆ ಎಂದು ಸಾಕ್ಷ್ಯಚಿತ್ರವು ಹೇಳಿಕೊಂಡಿದೆ. ಫೆಬ್ರವರಿ 27, 2002 ರಂದು ಅಂದಿನ ಗುಜರಾತ್ ಸಿಎಂ ಮೋದಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾದರು ಮತ್ತು ಗಲಭೆಯಲ್ಲಿ ಮಧ್ಯಪ್ರವೇಶಿಸದಂತೆ ಅವರಿಗೆ ಆದೇಶಿಸಿದರು ಎಂದು “ವಿಶ್ವಾಸಾರ್ಹ ಸಂಪರ್ಕಗಳನ್ನು” ಅದು ಉಲ್ಲೇಖಿಸಿದೆ.

ತನಿಖಾ ತಂಡದ ಭಾಗವಾಗಿದ್ದ ಬ್ರಿಟಿಷ್ ಮಾಜಿ ಹಿರಿಯ ರಾಜತಾಂತ್ರಿಕರು, ಗುಜರಾತ್‌ನಲ್ಲಿ ನಡೆದ ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್ತು ಯೋಜಿಸಿದೆ ಎಂದು ಆರೋಪಿಸಿದ್ದಾರೆ. ಆ ಗಲಭೆಗೆ ನರೇಂದ್ರ ಮೋದಿಯವರೆ ಸಂಪೂರ್ಣ ಹೊಣೆ ಎಂದು ಸಾಕ್ಷ್ಯಚಿತ್ರ ತೋರಿಸಿದೆ.

2019 ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್‌ ಅನ್ನು ಪರಿಶೀಲಿಸುವ ಸಾಕ್ಷ್ಯಚಿತ್ರದ ಎರಡನೇ ಭಾಗವು ಜನವರಿ 24ರ ಮಂಗಳವಾರ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಬಿಸಿ ಹೇಳಿದೆ.

ಇದನ್ನೂ ಓದಿ: ಗುಜರಾತ್ ಗಲಭೆಗೆ ನರೇಂದ್ರ ಮೋದಿಯವರೆ ಹೊಣೆ: ಡಿಲೀಟ್ ಆಗಿದ್ದ ಬಿಬಿಸಿ ಸಾಕ್ಷ್ಯಚಿತ್ರ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...