Homeಮುಖಪುಟ'ಮೋದಿ ಉಪನಾಮ' ಟೀಕೆಗೆ ರಾಹುಲ್ ವಿರುದ್ಧ ಮಾನನಷ್ಟ ಕೇಸ್: ಸೂರತ್‌ ಕೋರ್ಟ್‌ನಿಂದ ಇಂದು ತೀರ್ಪು ಸಾಧ್ಯತೆ

‘ಮೋದಿ ಉಪನಾಮ’ ಟೀಕೆಗೆ ರಾಹುಲ್ ವಿರುದ್ಧ ಮಾನನಷ್ಟ ಕೇಸ್: ಸೂರತ್‌ ಕೋರ್ಟ್‌ನಿಂದ ಇಂದು ತೀರ್ಪು ಸಾಧ್ಯತೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2019ರಲ್ಲಿ ಮಾಡಿರುವ ”ಮೋದಿ ಉಪನಾಮ” ಟೀಕೆಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಸೂರತ್‌ ನ್ಯಾಯಾಲಯವು ಗುರುವಾರ ತೀರ್ಪು ನೀಡಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ರಾಹುಲ್ ಗಾಂಧಿ ಅವರು ಇಂದು ಸೂರತ್‌ಗೆ ಭೇಟಿ ನೀಡಲಿದ್ದಾರೆ.

“ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ?” ಎಂಬ ಟೀಕೆಗಳ ಮೇಲೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರು ನೀಡಿದ್ದರು. ರಾಹುಲ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲಾಗಿತ್ತು.

ನ್ಯಾಯಾಲಯವು ಕಳೆದ ವಾರ ಎರಡೂ ಕಡೆಯ ಅಂತಿಮ ವಾದಗಳನ್ನು ಆಲಿಸಿದೆ ಮತ್ತು ನಾಲ್ಕು ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆಯ ತೀರ್ಪುನ್ನು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಚ್‌ಎಚ್ ವರ್ಮಾ ಅವರು ಮಾರ್ಚ್ 23 ರಂದು ಪ್ರಕಟಿಸುತ್ತಾರೆ ಎಂದು ಗಾಂಧಿ ಪರ ವಕೀಲ ಕಿರಿತ್ ಪನ್ವಾಲಾ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 499 ಮತ್ತು 500 (ಮಾನನಷ್ಟ ವ್ಯವಹರಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿಯ ಅವರು ಕೊನೆಯದಾಗಿ 2021ರ ಅಕ್ಟೋಬರ್‌ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್ ವಿಚಾರ: ದೆಹಲಿಯಲ್ಲಿ 100 ಎಫ್‌ಐಆರ್‌ ದಾಖಲು, 6 ಜನರ ಬಂಧನ

ಪ್ರಕರಣದ ಹಿನ್ನೆಲೆ

2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್‌, ”ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ” ಎಂದು ಪ್ರಶ್ನಿಸಿದ್ದರು.

ರಾಹುಲ್‌ ಅವರು ತಮ್ಮ ಹೇಳಿಕೆ ಮೂಲಕ ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ಕಾಂಗ್ರೆಸ್‌ ಸಂಸದನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

‘ರಾಹುಲ್‌ ಅವರು ಕೋಲಾರದಲ್ಲಿ ನಡೆದಿದ್ದ ರ‍್ಯಾಲಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆ ಮೂಲಕ ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ನಿಂದಿಸಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...