Homeಕರ್ನಾಟಕಮಾನನಷ್ಟ ಪ್ರಕರಣ: ರಾಜಿ ಮಾಡಿಕೊಳ್ಳುವಂತೆ ರೂಪಾ ಮೌದ್ಗಿಲ್–ರೋಹಿಣಿ ಸಿಂಧೂರಿಗೆ ಕೋರ್ಟ್‌ ಸಲಹೆ

ಮಾನನಷ್ಟ ಪ್ರಕರಣ: ರಾಜಿ ಮಾಡಿಕೊಳ್ಳುವಂತೆ ರೂಪಾ ಮೌದ್ಗಿಲ್–ರೋಹಿಣಿ ಸಿಂಧೂರಿಗೆ ಕೋರ್ಟ್‌ ಸಲಹೆ

- Advertisement -
- Advertisement -

‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ” ಎಂದು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಲಹೆ ನೀಡಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣದ ವಿಚಾರಣೆ ಬೆಂಗಳೂರಿನ 5ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿಜಯ್‌ಕುಮಾರ್ ಎಸ್. ಜಾಟ್ಲಾ ವಿಚಾರಣೆ ನಡೆಸಿದರು.

ದೂರುದಾರೆ ರೋಹಿಣಿ ಸಿಂಧೂರಿ ಮತ್ತು ಆರೋಪಿ ರೂಪಾ ಮೌದ್ಗಿಲ್ ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರೂಪಾ ಮೌದ್ಗಿಲ್ ಪರ ಹಾಜರಿದ್ದ ವಕೀಲ ಪಿ. ಪ್ರಸನ್ನ ಕುಮಾರ್ ಅವರು ಸಾಕ್ಷಿಯ ಪಾಟೀ ಸವಾಲು ಮಾಡಿದರು.

ವಾದ ಆಲಿಸಿದ ನ್ಯಾಯಾಧೀಶರು, “ನೀವಿಬ್ಬರೂ ಉತ್ತಮ ಹೆಸರು ಗಳಿಸಿದ ಹಿರಿಯ ಅಧಿಕಾರಿಗಳು; ನಿಮ್ಮ ಕೆಲಸ ಸಮಾಜಕ್ಕಾಗಿ ಮೀಸಲಿಡಬೇಕು. ಹೀಗೆಲ್ಲಾ ನ್ಯಾಯಾಲಯದ ಕಲಾಪದಲ್ಲಿ ವ್ಯಯಿಸುವ ಬದಲು ರಾಜಿಯಾಗಲು ಸಾಧ್ಯವೇ ಯೋಚಿಸಿ” ಎಂದು ಸಲಹೆ ನೀಡಿದರು. ನಂತರ, “ಒನ್ ಮಿನಿಟ್ ಅಪಾಲಜಿ ಪುಸ್ತಕವನ್ನು ಓದಿ’ ಎಂದು ಸಲಹೆ ನೀಡಿ, ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದರು.

ಇದಕ್ಕೂ ಮುನ್ನ, ರೋಹಿಣಿ ಪರ ವಕೀಲರು ಗೌಪ್ಯ ವಿಚಾರಣೆಗೆ ಕೋರಿದರು. ಆ ಮನವಿಯನ್ನು ರೂಪಾ ಪರ ವಕೀಲರು ಆಕ್ಷೇಪಿಸಿದರು. ನಂತರ ಇಬ್ಬರ ಒಪ್ಪಿಗೆ ಗೌಪ್ಯ ವಿಚಾರಣೆ ನಡೆಸಲಾಯಿತು. ಅದಕ್ಕಾಗಿ ಕೋರ್ಟ್‌ ಹಾಲ್‌ ಒಳಗಿದ್ದ ವಕೀಲರು, ಕೋರ್ಟ್‌ ಸಿಬ್ಬಂದಿ, ಪೊಲೀಸರು, ಇತರೆ ಅಧಿಕಾರಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳನ್ನು ಹೊರಗೆ ಕಳುಹಿಸಲಾಯಿತು.

ಸಿಂಧೂರಿ ಪತಿ ಸುಧೀರ್‌ ರೆಡ್ಡಿ ಮತ್ತು ರೂಪಾ ಪತಿ ಮನೀಷ್‌ ಮೌದ್ದಿಲ್‌ ಅವರನ್ನು ಸಹ ಹೊರಗೆ ಕಳುಹಿಸಿ ಕೋರ್ಟ್‌ ಬಾಗಿಲು ಮುಚ್ಚಲಾಯಿತು. ರೂಪಾ, ರೋಹಿಣಿ ಮತ್ತು ಅವರಿಬ್ಬರ ಪರ ವಕೀಲರಿಗೆ ಮಾತ್ರ ಕೋರ್ಟ್ ಒಳಗೆ ಇರಲು ಅನುಮತಿಸಿದ ನ್ಯಾಯಾಧೀಶರು, ಪಾಟಿ ಸವಾಲು ಪ್ರಕ್ರಿಯೆ ನಡೆಸಲಾಯಿತು.

ರೂಪಾ ಮೌದ್ಗಿಲ್ 2023 ರ ಫೆಬ್ರವರಿ 18 ಮತ್ತು 19 ರಂದು ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯ ಪೋಸ್ಟ್ ಪ್ರಕಟಿಸಿ ತೇಜೋವಧೆ ಮಾಡಲಾಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ನನಗೆ ಮಾನಸಿಕ ಯಾತನೆ ಉಂಟು ಮಾಡಿದೆ. ಆದ್ದರಿಂದ ರೂಪಾ ಅವರಿಂದ ರೂ. ಒಂದು ಕೋಟಿ ಹಣವನ್ನು ಪಾವತಿಸಲು ನಿರ್ದೇಶಿಸಬೇಕು ಹಾಗೂ ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ರೋಹಿಣಿ 2023ರ ಮಾರ್ಚ್ 3 ರಂದು, ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ; ಶಾಸಕ ಮುನಿರತ್ನ ಪ್ರಕರಣ | ಶೆಡ್‌ ತೆರವಿಗೆ ಆದೇಶಿಸಿದ್ದು ಯಾರು? ಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...