Homeಮುಖಪುಟಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

- Advertisement -
- Advertisement -

ದೆಹಲಿಯ ಹಾಲಿ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿ.ಕೆ ಸಕ್ಸೇನಾ ಅವರು ಹೂಡಿರುವ 24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರೊಬೇಷನ್ ಬಾಂಡ್‌ಗಳನ್ನು ಸಲ್ಲಿಸದ ಕಾರಣ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯವು ಬುಧವಾರ (ಏ.23) ಜಾಮೀನು ರಹಿತ ವಾರೆಂಟ್‌ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದ ಪ್ರೊಬೇಷನ್ ಬಾಂಡ್ ಜಾರಿಗೊಳಿಸುವ ಪ್ರಕ್ರಿಯೆಗೆ ಎರಡು ವಾರಗಳ ತಡೆ ನೀಡಬೇಕೆಂಬ ಪಾಟ್ಕರ್ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಏ.22) ತಿರಸ್ಕರಿಸಿತ್ತು.
ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಸೂಚಿಸಿತ್ತು.

“ಮುಂದಿನ ದಿನಾಂಕದಂದು, ಅಪರಾಧಿಯು 08/04/2025ರ ಶಿಕ್ಷೆಯ ಆದೇಶದ ನಿಯಮಗಳನ್ನು ಪಾಲಿಸಲು ವಿಫಲವಾದರೆ, ನ್ಯಾಯಾಲಯವು ದಯಾಪರ ಶಿಕ್ಷೆಯನ್ನು ಮರುಪರಿಶೀಲಿಸಬೇಕಾಗುತ್ತದೆ ಮತ್ತು ಶಿಕ್ಷೆಯ ಮೇಲಿನ ಆದೇಶವನ್ನು ಬದಲಾಯಿಸಬೇಕಾಗುತ್ತದೆ” ಎಂದು ಸಾಕೇತ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ವಿಶಾಲ್ ಸಿಂಗ್ ಏಪ್ರಿಲ್ 23ರ ತಮ್ಮ ಆದೇಶದಲ್ಲಿ ಹೇಳಿದ್ದಾರೆ.

“ಪ್ರೊಬೇಷನ್ ಬಾಂಡ್ ಜಾರಿ ತಡೆಯುವಂತೆ ಕೋರಿರುವ ಮೇಧಾ ಪಾಟ್ಕರ್ ಅರ್ಜಿಯು ನ್ಯಾಯಾಲಯವನ್ನು ಮೋಸಗೊಳಿಸುವ ಉದ್ದೇಶದಿಂದ ಕೂಡಿದೆ” ಎಂದು ಎಎಸ್‌ಜೆ ವಿಶಾಲ್ ಸಿಂಗ್ ಹೇಳಿದ್ದಾರೆ.

ಏಪ್ರಿಲ್ 8ರಂದು, ನ್ಯಾಯಾಧೀಶ ಸಿಂಗ್ ಅವರು ಮೇಧಾ ಪಾಟ್ಕರ್ ಅವರಿಗೆ ಒಂದು ವರ್ಷದ ಪ್ರೊಬೇಶನ್ ಅವಧಿಯನ್ನು ಮಂಜೂರು ಮಾಡಿದ್ದರು, ನರ್ಮದಾ ಬಚಾವೋ ಆಂದೋಲನದ (ಎನ್‌ಬಿಎ) ನಾಯಕಿ ಪಾಟ್ಕರ್ ಅವರು ತಾವು ಮಾಡಿರುವ ಕೆಲಸಕ್ಕಾಗಿ ಪ್ರಶಸ್ತಿಗಳನ್ನು ಪಡೆದಿದ್ದಾರೆ ಮತ್ತು ಅವರು ಮಾಡಿದ ಅಪರಾಧವು ಜೈಲು ಶಿಕ್ಷೆಗೆ ಅರ್ಹವಾದಷ್ಟು ಗಂಭೀರವಲ್ಲ ಎಂದು ಹೇಳಿದ್ದರು.

ಇದಕ್ಕೂ ಮೊದಲು, 2000ರಲ್ಲಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪಾಟ್ಕರ್ ಅವರ ಶಿಕ್ಷೆಯ ವಿರುದ್ಧದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ಗುಜರಾತ್‌ನಲ್ಲಿ ಎನ್‌ಜಿಒ ಒಂದರ ಮುಖ್ಯಸ್ಥರಾಗಿದ್ದ ಸಕ್ಸೇನಾ ಅವರನ್ನು ಮೇಧಾ ಪಾಟ್ಕರ್ ‘ಹೇಡಿ’ ಎಂದು ಕರೆದಿದ್ದರು ಮತ್ತು ಹವಾಲಾ ವಹಿವಾಟಿನಲ್ಲಿ ಅವರು ಭಾಗಿಯಾಗಿದ್ದಾರೆಂದು ಆರೋಪಿಸಿದ್ದರು.

ಮೇ 24, 2024 ರಂದು, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪಾಟ್ಕರ್ ಅವರ ಹೇಳಿಕೆಗಳನ್ನು ಮಾನನಷ್ಟಕರವೆಂದು ಪರಿಗಣಿಸಿ ಜುಲೈ 1ರಂದು ಅವರಿಗೆ ಐದು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಆದಾಗ್ಯೂ, ಎಎಸ್‌ಜೆ ಸಿಂಗ್ ಅವರು ಕಳೆದ ವರ್ಷ ಜುಲೈ 29ರಂದು ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿದ್ದರು.

2001ರಲ್ಲಿ ಪಾಟ್ಕರ್ ವಿರುದ್ಧ ಸಕ್ಸೇನಾ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ನವೆಂಬರ್ 25, 2000ದಲ್ಲಿ “ದೇಶಭಕ್ತನ ನಿಜವಾದ ಮುಖ”ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟಣೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.

“ಹವಾಲಾ ವಹಿವಾಟಿನಲ್ಲಿ ಮುಳುಗಿರುವ ವಿಕೆ ಸಕ್ಸೇನಾ, ಸ್ವತಃ ಮಾಲೆಗಾಂವ್‌ಗೆ ಬಂದು ಎನ್‌ಬಿಎಯನ್ನು ಹೊಗಳಿ ರೂ. 40,000ರ ಚೆಕ್‌ ಅನ್ನು ನೀಡಿದ್ದಾರೆ. ಲೋಕ ಸಮಿತಿಯು ತ್ವರಿತವಾಗಿ ರಸೀದಿ ಮತ್ತು ಪತ್ರವನ್ನು ಕಳುಹಿಸಿದೆ. ಅದು ಪ್ರಾಮಾಣಿಕತೆ ಮತ್ತು ಉತ್ತಮ ದಾಖಲೆ ಇಟ್ಟುಕೊಳ್ಳುವುದನ್ನು ತೋರಿಸುತ್ತದೆ. ಆದರೆ, ಚೆಕ್ ನಗದೀಕರಿಸಿಲ್ಲ, ಬೌನ್ಸ್ ಆಗಿದೆ. ವಿಚಾರಣೆಯಲ್ಲಿ, ಖಾತೆಯು ಅಸ್ತಿತ್ವದಲ್ಲಿಲ್ಲ ಎಂದು ಬ್ಯಾಂಕ್ ವರದಿ ಮಾಡಿದೆ” ಎಂದು ಪಾಟ್ಕರ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದರು.

ಪಾಟ್ಕರ್ ಅವರ ಪ್ರಕಟಣೆ ದುರುದ್ದೇಶಪೂರಿತವಾಗಿದ್ದು, ಸಕ್ಸೇನಾ ಅವರ ಒಳ್ಳೆಯ ಹೆಸರನ್ನು ಹಾಳುಮಾಡುವ ಗುರಿಯನ್ನು ಹೊಂದಿತ್ತು. ಇದರಿಂದ ಅವರ ಸ್ಥಾನಮಾನ ಮತ್ತು ಕ್ರೆಡಿಟ್‌ಗೆ ಗಣನೀಯ ಹಾನಿಯುಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದರು.

“ಆರೋಪಿಯ ಹೇಳಿಕೆಗಳು ದೂರುದಾರರನ್ನು ಹೇಡಿ, ದೇಶಪ್ರೇಮಿ ಅಲ್ಲ ಮತ್ತು ಹವಾಲಾ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದಿದೆ. ಇದು ಮಾನಹಾನಿಕರ ಮಾತ್ರವಲ್ಲದೆ, ದೂರದಾರರ ಬಗ್ಗೆ ನಕಾರಾತ್ಮಕ ಭಾವನೆ ಹುಟ್ಟಿಸುತ್ತದೆ”ಎಂದಿದ್ದರು.

ಪಹಲ್ಗಾಮ್ ದಾಳಿ: ಪಂಜಾಬ್, ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....