Homeಕರ್ನಾಟಕಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

ಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

- Advertisement -
- Advertisement -

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಕರ್ನಾಟಕದಲ್ಲಿ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಜೊತೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮನ್ಸ್ ನೀಡಿದ್ದಾರೆ.

ಮೇ 9ರಂದು ರಾಜ್ಯ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವಪ್ರಸಾದ್ ಅವರು ಸಲ್ಲಿಸಿರುವ ದೂರಿನ ಅನ್ವಯ ಈ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಶೇ 40ರಷ್ಟು ಭ್ರಷ್ಟಾಚಾರದ ಆರೋಪಗಳನ್ನು ಕಾಂಗ್ರೆಸ್ ಮಾಡಿತ್ತು. ಈ ಸಂಬಂಧ ಬಿಜೆಪಿ ಕಾನೂನು ಸಮರಕ್ಕೆ ಇಳಿದಿದೆ.

ಚುನಾಯಿತ ಮಾಜಿ ಮತ್ತು ಹಾಲಿ ಸಂಸದರು/ಶಾಸಕರಿಗೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆಗಳನ್ನು ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ಹೇಳಿಕೆಯನ್ನು ದಾಖಲಿಸಲು ಪ್ರಕರಣವನ್ನು ಜುಲೈ 27 ರಂದು ನಿಗದಿಪಡಿಸಿದೆ.

ಮೇ 5, 2023 ರಂದು ಪತ್ರಿಕೆಗಳಿಗೆ ಕಾಂಗ್ರೆಸ್‌ ನೀಡಿದ ಜಾಹೀರಾತಿನ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತಿದೆ. “ಬಿಜೆಪಿ ಸರ್ಕಾರವು ಶೇಕಡಾ 40 ರಷ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ, ಹಿಂದಿನ ನಾಲ್ಕು ವರ್ಷಗಳಲ್ಲಿ ₹ 1.5 ಲಕ್ಷ ಕೋಟಿ ಲೂಟಿ ಮಾಡಿದೆ” ಎಂದು ಜಾಹೀರಾತು ಪ್ರಕಟಿಸಲಾಗಿತ್ತು.

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಕೂಡ ಚುನಾವಣೆ ಸಂದರ್ಭದಲ್ಲಿ ನೋಟೀಸ್ ಕೂಡ ಜಾರಿ ಮಾಡಿತ್ತು.

“ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ, ಉದ್ಯೋಗ ನೇಮಕಾತಿ ಮತ್ತು ವರ್ಗಾವಣೆಗಳಿಗಾಗಿ ಜನರು ಲಂಚವನ್ನು ನೀಡಬೇಕಾಗಿದೆ” ಎಂದು ಆರೋಪಿಸಿದ್ದ ಕಾಂಗ್ರೆಸ್, “ಯಾವ ಯಾವ ಕೆಲಸಕ್ಕೆ ಎಷ್ಟು ಹಣ ಪಾವತಿಸಬೇಕಾಗಿದೆ” ಎಂಬ ವಿವರಗಳನ್ನು ಪ್ರಕಟಿಸಿತ್ತು.

ಮೇಲ್ನೋಟಕ್ಕೆ ಕಾಂಗ್ರೆಸ್ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಆಯೋಗ ಅಭಿಪ್ರಾಯಪಟ್ಟಿತ್ತು.

ಜಾಹೀರಾತಿನಲ್ಲಿ ಏನಿದೆ?

“ಈ ಟ್ರಬಲ್ ಇಂಜಿನ್ ಸರ್ಕಾರ- ಭ್ರಷ್ಟಾಚಾರದ ರೇಟ್ ಕಾರ್ಡ್ 2019-2023” ಎಂದ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು.

“ಸಿಎಂ ಹುದ್ದೆಗೆ 2500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂಗಳನ್ನು ಬಿಜೆಪಿ ಪಡೆಯುತ್ತದೆ” ಎಂದು ಆರೋಪಿಸಲಾಗಿತ್ತು.

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್: 5ರಿಂ 15 ಕೋಟಿ ರೂ.,

ಇಂಜಿನಿಯರ್‌: 1ರಿಂದ 5 ಕೋಟಿ ರೂ.

ಸಬ್‌ ರಿಜಿಸ್ಟ್ರಾರ್‌: 50 ಲಕ್ಷ ರೂ.ಗಳಿಂದ 5 ಕೋಟಿ ರೂ.

ಬೆಸ್ಕಾ: 1 ಕೋಟಿ ರೂ.

ಪಿಎಸ್‌ಐ: 80 ಲಕ್ಷ ರೂ.

ಸಹಾಯಕ ಪ್ರಾಧ್ಯಾಪಕ: 50 ಲಕ್ಷ – 70 ಲಕ್ಷ ರೂ.

ಉಪನ್ಯಾಸಕ: 30 ಲಕ್ಷ- 50 ಲಕ್ಷ ರೂ.

ಎಫ್‌ಡಿಎ:30 ಲಕ್ಷ ರೂ.

ಸಹಾಯಕ ಇಂಜಿನಿಯರ್‌: 30 ಲಕ್ಷ ರೂ.

ಬಮುಲ್- 25 ಲಕ್ಷ ರೂ.

ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್‌ 10 ಲಕ್ಷ ರೂ.

ಪೊಲೀಸ್ ಪೇದೆ 10 ಲಕ್ಷ ರೂ.

***

ಹುದ್ದೆಗಳ ದರ 

ಬಿಡಿಎ ಆಯುಕ್ತ : 10 ಕೋಟಿ – 15 ಕೋಟಿ ರೂ.

ಕೆಪಿಎಸ್‌ಸಿ ಅಧ್ಯಕ್ಷ: 5 ರಿಂದ 15 ಕೋಟಿ ರೂ.

ಡಿಸಿ ಮತ್ತು ಎಸ್‌ಪಿ:  5 ರಿಂದ 15 ಕೋಟಿ ರೂ.

ಉಪಕುಲಪತಿ: 5 ರಿಂದ 10 ಕೋಟಿ ರೂ.

ಎಸಿ ಮತ್ತು ತಹಸೀಲ್ದಾರ್‌ 50 ಲಕ್ಷ- 3 ಕೋಟಿ ರೂ.

***

ಸರ್ಕಾರದ ಡೀಲ್‌ಗಳು

ಕೋವಿಡ್ ಕಿಟ್ ಪೂರೈಕೆ: 75%

ಪಿಡಬ್ಲ್ಯುಡಿ ಗುತ್ತಿಗೆಗಳು: 40 %

ಮಠಕ್ಕೆ ಅನುದಾನ: 30%

ಉಪಕರಣಗಳ ಪೂರೈಕೆ: 40%

ಮೊಟ್ಟೆ ಪೂರೈಕೆ: 30%

ರಸ್ತೆ ಗುತ್ತಿಗೆಗಳು: 40%

-ಹೀಗೆ ಜಾಹೀರಾತಿನಲ್ಲಿ ಆರೋಪಗಳನ್ನು ಕಾಂಗ್ರೆಸ್ ಮಾಡಿತ್ತು. “ಕಳೆದ ನಾಲ್ಕೇ ವರ್ಷಗಳಲ್ಲಿ 40% ಸರ್ಕಾರ ಕನ್ನಡಿಗರಿಂದ  1,50,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ. ಬದಲಾವಣೆ ಹಾಗೂ ಪ್ರಗತಿಗೆ ನಿಮ್ಮ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...