Homeಮುಖಪುಟಮಾನನಷ್ಟ ಕೇಸ್: ವಿಚಾರಣೆಗೆ ಖುದ್ದು ಹಾಜರಾಗದಿದ್ದರೆ ವಾರಂಟ್ - ನಟಿ ಕಂಗನಾಗೆ ಮುಂಬೈ ಕೋರ್ಟ್ ಎಚ್ಚರಿಕೆ

ಮಾನನಷ್ಟ ಕೇಸ್: ವಿಚಾರಣೆಗೆ ಖುದ್ದು ಹಾಜರಾಗದಿದ್ದರೆ ವಾರಂಟ್ – ನಟಿ ಕಂಗನಾಗೆ ಮುಂಬೈ ಕೋರ್ಟ್ ಎಚ್ಚರಿಕೆ

- Advertisement -
- Advertisement -

ಬಾಲಿವುಡ್ ಬರಹಗಾರ, ಸಾಹಿತಿ ಜಾವೇದ್ ಅಖ್ತರ್‌, ನಟಿ ಕಂಗನಾ ರಣಾವತ್ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗದಿದ್ದಲ್ಲಿ ವಾರಂಟ್ ಹೊರಡಿಸುವುದಾಗಿ ಮುಂಬೈ ಕೋರ್ಟ್ ಎಚ್ಚರಿಕೆ ನೀಡಿದೆ.

ಇಂದು (ಮಂಗಳವಾರ) ನಡೆದ ವಿಚಾರಣೆಗೆ ನಟಿ ಕಂಗನಾ ರಣಾವತ್ ಅವರ ವೈಯಕ್ತಿಕ ಹಾಜರಾತಿಗೆ ವಿನಾಯಿತಿ ನೀಡಿದ ಮುಂಬೈ ಕೋರ್ಟ್, ಮುಂದಿನ ವಿಚಾರಣೆಯ ದಿನಾಂಕ ಸೆಪ್ಟಂಬರ್ 20 ರಂದು ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದರೆ ನಟಿಯ ವಿರುದ್ಧ ವಾರಂಟ್ ಹೊರಡಿಸುವುದಾಗಿ ಎಚ್ಚರಿಕೆ ನೀಡಿದೆ.

ಮಾನನಷ್ಟ ಮೊಕದ್ದಮೆ ಪ್ರಕರಣ ವಿಚಾರಣೆಗೆ ಬರುತ್ತಿದ್ದಂತೆ, ನಟಿ ಕಂಗನಾ ರಣಾವತ್ ಅವರ ಆರೋಗ್ಯ ಸರಿಯಿಲ್ಲದ ಕಾರಣ ಆ ದಿನದ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ನಟಿ ಪರ ವಕೀಲರು ಕೋರಿದ್ದರು.

ಇದನ್ನೂ ಓದಿ: ಜಾವೇದ್ ಅಖ್ತರ್ V/s ಕಂಗನಾ: ವಾರೆಂಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ನಟಿ

ವಕೀಲರು ನ್ಯಾಯಾಲಯಕ್ಕೆ ವೈದ್ಯಕೀಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ. ಜೊತೆಗೆ ನಟಿ ತನ್ನ ಚಿತ್ರದ ಪ್ರಚಾರಕ್ಕಾಗಿ ಪ್ರಯಾಣಿಸುತಿದ್ದು, ಕೊರೊನಾ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಹೇಳಿದ್ದಾರೆ.

ಇದನ್ನು ಖಂಡಿಸಿರುವ ಜಾವೇದ್ ಅಖ್ತರ್ ಪರ ವಕೀಲರು ಇದು ಪ್ರಕರಣದ ವಿಚಾರಣೆಯನ್ನು ವಿಳಂಬಗೊಳಿಸುವ ಒಂದು ತಂತ್ರ ಎಂದಿದ್ದಾರೆ.

ವಾದಗಳನ್ನು ಆಲಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್‌ಆರ್ ಖಾನ್, ನಟಿ ಕಂಗನಾ ರಣಾವತ್‌ಗೆ ಈ  ದಿನದ ವಿಚಾರಣೆಯಿಂದ ವಿನಾಯಿತಿ ನೀಡಿದ್ದು, ಮುಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ತಿಳಿಸಿ  ಸೆಪ್ಟೆಂಬರ್ 20 ರಂದು ವಿಚಾರಣೆಯನ್ನು ಮುಂದೂಡಿದ್ದಾರೆ.

ಜೊತೆಗೆ ಮುಂದಿನ ವಿಚಾರಣೆಗೆ ನಟಿ ಹಾಜರಾಗಲು ವಿಫಲವಾದರೆ, ಆಕೆಯ ವಿರುದ್ಧ ವಾರಂಟ್ ಹೊರಡಿಸಲಾಗುವುದು ಎಂದು ಮ್ಯಾಜಿಸ್ಟ್ರೇಟ್ ಎಚ್ಚರಿಕೆ ನೀಡಿದ್ದಾರೆ.

ಟಿವಿ ಸಂದರ್ಶನವೊಂದರಲ್ಲಿ ನಟಿ ಕಂಗನಾ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜಾವೇದ್‌ ಅಖ್ತರ್‌ ಕಳೆದ ನವೆಂಬರ್‌ನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಕಳೆದ ವರ್ಷ ಜೂನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನಟ ಸುಶಾಂತ್ ಸಿಂಗ್ ರಜಪೂತ್‌ ಪ್ರಕರಣದಲ್ಲಿ ಕಂಗನಾ ತಮ್ಮ ಹೆಸರನ್ನು ವಿನಾಃ ಕಾರಣ ಎಳೆದು ತಂದಿದ್ದಾರೆ ಎಂದು ಜಾವೇದ್ ಅಖ್ತರ್‌ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಅಂದಿನಿಂದ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಹಲವು ಬಾರಿ ಪ್ರಯತ್ನಿಸಿದ್ದಾರೆ. ಪ್ರಕರಣದಲ್ಲಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ನಟಿ ಹಲವು ಬಾರಿ ಮನವಿ ಮಾಡಿದ್ದಾರೆ. ಜುಲೈ 17 ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ಇದು ಕೊನೆಯ ಅವಕಾಶ ಎಂದಿತ್ತು. ಆದರೂ ಈ ಬಾರಿ ಮತ್ತೆ ಅನಾರೋಗ್ಯದ ಕಾರಣ ನೀಡಿದ್ದಾರೆ. ಹೀಗಾಗಿ ಮುಂದಿನ ವಿಚಾರಣೆಗೆ ಹಾಜರಾಗದಿದ್ದಲ್ಲಿ ವಾರಂಟ್ ಹೊರಡಿಸುವ ಎಚ್ಚರಿಕೆ ನೀಡಲಾಗಿದೆ.


ಇದನ್ನೂ ಓದಿ: RSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....