Homeಕರ್ನಾಟಕಮಾನನಷ್ಟ ಪ್ರಕರಣ | ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್

ಮಾನನಷ್ಟ ಪ್ರಕರಣ | ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್

- Advertisement -
- Advertisement -

ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬುರಾವ್ (ತಬಸ್ಸುಮ್ ) ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಎಂದು ವರದಿಯಾಗಿದೆ.

ತಬುರಾವ್ ದಾಖಲಿಸಿದ್ದ ಖಾಸಗಿ ದೂರು ಮಾನ್ಯ ಮಾಡಿದ್ದ ನ್ಯಾಯಾಲಯ, ಅಕ್ಟೋಬರ್ 16ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಶಾಸಕ ಯತ್ನಾಳ್‌ಗೆ ಸಮನ್ಸ್ ಜಾರಿಗೊಳಿಸಿತ್ತು. ಆದರೆ, ಯತ್ನಾಳ್ ವಿಚಾರಣೆಗೆ ಗೈರಾದ ಹಿನ್ನೆಲೆ, ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ನಿಗದಿಪಡಿಸಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ : ಲೋಕಸಭೆ ಚುನಾವಣೆಯ ಸಂದರ್ಭ ಏಪ್ರಿಲ್ 4ರಂದು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಯತ್ನಾಳ್ “ಹೆಚ್ಚು ಕಡಿಮೆ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ. ದೇಶದ ವಿರುದ್ದ ಹೇಳಿಕೆ ಕೊಡುವುದು ಗುಂಡೂರಾವ್‌ಗೆ ಚಟ ಆಗಿಬಿಟ್ಟಿದೆ” ಎಂದಿದ್ದರು.

ಯತ್ನಾಳ್ ಹೇಳಿಕೆಯ ವಿರುದ್ದ ತಬು ರಾವ್ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅಲ್ಲದೆ, ಪತ್ರಿಕಾ ವರದಿಗಳು ಸೇರಿದಂತೆ ಹಲವು ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಯತ್ನಾಳ್ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿ ಪ್ರಕರಣ ದಾಖಲಿಸಲು ಕೋರಿದ್ದರು. ಅದನ್ನು ಪರಿಗಣಿಸಿದ್ದ ನ್ಯಾಯಾಲಯ ಯತ್ನಾಳ್‌ಗೆ ಸಮನ್ಸ್ ಜಾರಿಗೊಳಿಸಿತ್ತು.

ಯತ್ನಾಳ್‌ಗೆ ಹೈಕೋರ್ಟ್ ತರಾಟೆ

ತನ್ನ ವಿರುದ್ದ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಯತ್ನಾಳ್ ಅವರನ್ನು ತರಾಟೆಗೆ ತೆಗೆದುಕೊಂಡು ಪ್ರಕರಣ ರದ್ದುಪಡಿಸಲು ನಿರಾಕರಿಸಿತ್ತು.

ಯತ್ನಾಳ್ ವಿರುದ್ದ ಕಿಡಿಕಾರಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು “ದಿನೇಶ್‌ ಪತ್ನಿ ಮುಸ್ಲಿಂ ಆದ ಮಾತ್ರಕ್ಕೆ ಅವರ ಮನೆಯನ್ನು ಅರ್ಧ ಪಾಕಿಸ್ತಾನ ಎನ್ನಬಹುದೇ?” ಎಂದಿದ್ದರು.

ಇದನ್ನೂ ಓದಿ : ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...