Homeಕರ್ನಾಟಕಮಾನನಷ್ಟ ಪ್ರಕರಣದ ವಿಚಾರಣೆ ನ್ಯಾಯಯುತವಾಗಿಲ್ಲ, ನ್ಯಾಯಾಧೀಶರು ತಪ್ಪುದಾರಿಗೆಳೆದಿದ್ದಾರೆ: ರಾಹುಲ್ ಪರ ವಕೀಲ

ಮಾನನಷ್ಟ ಪ್ರಕರಣದ ವಿಚಾರಣೆ ನ್ಯಾಯಯುತವಾಗಿಲ್ಲ, ನ್ಯಾಯಾಧೀಶರು ತಪ್ಪುದಾರಿಗೆಳೆದಿದ್ದಾರೆ: ರಾಹುಲ್ ಪರ ವಕೀಲ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇಲಿನ ಕ್ರಿಮಿನಲ್ ಮಾನನಷ್ಟ ಪ್ರಕರಣದ ವಿಚಾರಣೆ ನ್ಯಾಯಯುತವಾಗಿಲ್ಲ, ನ್ಯಾಯಾಧೀಶರು ತಪ್ಪುದಾರಿಗೆಳೆದಿದ್ದಾರೆ ಎಂದು ರಾಹುಲ್ ಪರ ವಕೀಲರು ಗುರುವಾರ ಸೂರತ್ ನ್ಯಾಯಾಲಯಕ್ಕೆ ತಿಳಿಸಿದರು ಎಂದು ಬಾರ್ ಬೆಂಚ್ ವರದಿ ಮಾಡಿದೆ.

ಮೋದಿ ಸರ್‌ನೇಮ್‌ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

ಗುರುವಾರದ ವಿಚಾರಣೆಯಲ್ಲಿ, ರಾಹುಲ್ ಗಾಂಧಿ ಪರ ವಾದ ಮಂಡಿಸಿದ ಹಿರಿಯ ವಕೀಲ ಆರ್.ಎಸ್.ಚೀಮಾ ಅವರು, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ರಾಜಕಾರಣಿ ಮಾಡಿದ ಮೂಲ ಭಾಷಣವನ್ನು ಸಾಕ್ಷಿಯಾಗಿ ಪರಿಗಣಿಸಿಲ್ಲ ಮತ್ತು ಮಾಧ್ಯಮ ವರದಿಗಳನ್ನು ಅವಲಂಬಿಸಿದ್ದಾರೆ ಎಂದು ವಾದಿಸಿದರು.

”ಭಾಷಣ ಸಿಡಿ ಸೂಚಿಸಿದ್ದಕ್ಕಿಂತ ವಿಭಿನ್ನವಾಗಿ ಪತ್ರಿಕೆಗಳ ಕಟಿಂಗ್ ಬಗ್ಗೆ ಮಾತನಾಡಿದ್ದರಿಂದ, ಅದರ ಆಧಾರದ ಮೇಲೆಯೇ  ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ವಿಚಿತ್ರ ತೀರ್ಪನ್ನು ನೀಡಿದ್ದಾರೆ” ಎಂದು ಚೀಮಾ ನ್ಯಾಯಾಲಯಕ್ಕೆ ತಿಳಿಸಿದರು.

”ಬೆಳಿಗ್ಗೆ 11:51ಕ್ಕೆ ನನ್ನ ಕಕ್ಷಿದಾರನನ್ನು ತಪ್ಪಿತಸ್ಥ ಎಂದು ಘೋಷಿಸಲಾಗುತ್ತದೆ ಮತ್ತು ಅರ್ಧ ಗಂಟೆಯೊಳಗೆ ಅವನಿಗೆ ಕಠಿಣ ಮತ್ತು ಗರಿಷ್ಠ ಶಿಕ್ಷೆಯನ್ನು ನೀಡಲಾಯಿತು ಎಂದು ನ್ಯಾಯಲಯಕ್ಕೆ ಹೇಳಿದರು.

ಮಾರ್ಚ್ 23ರಂದು, ಗಾಂಧಿಯವರು 2019ರ ಲೋಕಸಭಾ ಚುನಾವಣೆಯ ಮೊದಲು ಮಾಡಿದ ಭಾಷಣಕ್ಕಾಗಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಯಿತು, ಇದರಲ್ಲಿ ಅವರು ”ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಏಕೆ ಹೊಂದಿರುತ್ತಾರೆ? ಎನ್ನುವ ರಾಹುಲ್ ಹೇಳಿಕೆ ಉಲ್ಲೇಖಿಸಿದ್ದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 (ಮಾನನಷ್ಟ) ಮತ್ತು 500 (ಮಾನನಷ್ಟಕ್ಕೆ ಶಿಕ್ಷೆ) ಅಡಿಯಲ್ಲಿ ಕಾಂಗ್ರೆಸ್ ನಾಯಕನನ್ನು ದೋಷಿ ಎಂದು ಘೋಷಿಸಲಾಗಿದೆ. ಆದರೆ ನ್ಯಾಯಾಲಯ ಅವರಿಗೆ ಜಾಮೀನು ನೀಡಿದ್ದು, ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತುಗೊಳಿಸಿದೆ.

1951ರ ಜನತಾ ಪ್ರಾತಿನಿಧ್ಯ ಕಾಯಿದೆಯಡಿಯಲ್ಲಿ ಗಾಂಧಿಯವರು ಲೋಕಸಭಾ ಸಂಸದರಾಗಿ ಅನರ್ಹಗೊಂಡರು. ಕಾನೂನಿನ ಸೆಕ್ಷನ್ 8(3)ರ ಪ್ರಕಾರ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಜೈಲು ಶಿಕ್ಷೆಗೆ ಗುರಿಯಾದ ಶಾಸಕರು ಅನರ್ಹರಾಗುತ್ತಾರೆ. ಆರು ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ.

ನ್ಯಾಯಾಲಯವು ಅವರ ಅಪರಾಧವನ್ನು ತಡೆಹಿಡಿದರೆ ಲೋಕಸಭೆಯಿಂದ ಗಾಂಧಿಯವರ ಅನರ್ಹತೆಯನ್ನು ರದ್ದುಗೊಳಿಸಲಾಗುತ್ತದೆ. ಏಪ್ರಿಲ್ 3ರಂದು ಸೂರತ್ ನ್ಯಾಯಾಲಯವು ಅವರ ಜಾಮೀನನ್ನು ಏಪ್ರಿಲ್ 13 ರವರೆಗೆ ವಿಸ್ತರಿಸಿತ್ತು. ಗುರುವಾರ ಮತ್ತೆ ವಿಚಾರಣೆ ಆರಂಭವಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...