Homeಕರ್ನಾಟಕಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

- Advertisement -
- Advertisement -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ತನ್ನ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ (ನ.7) ಅನುಮತಿ ನೀಡಿದೆ.

ಪರಸ್ಪರ ರಾಜಿ ಸಂಧಾನ ಅಥವಾ ಮಾತುಕತೆಯ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ರೋಹಿಣಿ ಸಿಂಧೂರಿ ಮತ್ತು ರೂಪಾ ಮೌದ್ಗಿಲ್‌ ಅವರಿಗೆ ನ್ಯಾಯಾಲಯ ಸಮಯಾವಕಾಶ ನೀಡಿತ್ತು. ಆದರೆ, ದೂರು ದಾಖಲಿಸಿರುವ ರೋಹಿಣಿ ಸಿಂಧೂರಿ ರಾಜಿ ಇತ್ಯರ್ಥಕ್ಕೆ ಒಪ್ಪಿಲ್ಲ.

ಆದ್ದರಿಂದ, ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಹಾಗೂ ಅಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಅರ್ಜಿ ವಾಪಸ್‌ ಪಡೆಯಲು ರೂಪಾ ಅವರಿಗೆ ಅನುಮತಿಸಿದೆ.

ಮೌದ್ಗಿಲ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಆದಿತ್ಯ ಸೋಂಧಿ, ಇಬ್ಬರ ನಡುವಿನ ವಿವಾದವನ್ನು ಬಗೆಹರಿಸಲು ಮಧ್ಯಸ್ಥಿಕೆದಾರರನ್ನು ನೇಮಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ಸಿಂಧೂರಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಈ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದ್ದು, ‘ತಮ್ಮ ಕಕ್ಷಿದಾರೆಯ ಘನತೆಗೆ ಅಪಾರ ಹಾನಿಯಾಗಿದೆ’ ಎಂದಿದ್ದಾರೆ.

ರೋಹಿಣಿ ಸಿಂಧೂರಿ ಅವರ ಕುಟುಂಬದ ವರ್ಚಸ್ಸಿಗೆ ಧಕ್ಕೆ ತರಲಾಗಿದೆ. ರೋಹಿಣಿ ಅವರಿಗೆ ಸಂಬಂಧಿಸಿದ ಖಾಸಗಿ ವಿಚಾರಗಳನ್ನು ಬಹಿರಂಗಪಡಿಸಲಾಗಿದೆ. ಆ ಮಾಹಿತಿ ಇನ್ನೂ ಸಾರ್ವಜನಿಕವಾಗಿ ಲಭ್ಯವಿದೆ. ರಾಜಿಸೂತ್ರದ ಪ್ರಸ್ತಾಪ ಬೇಡ ಎಂದು ಅವರು ಹೇಳಿದ್ದಾರೆ.

ನ್ಯಾಯಾಲಯದಲ್ಲಿ ಖುದ್ದು ಹಾಜರಿದ್ದ ಸಿಂಧೂರಿ, ತನಗೆ ರಾಜಿ ಸಂಧಾನದಲ್ಲಿ ಆಸಕ್ತಿ ಇಲ್ಲ. ಅರ್ಹತೆಯ ಆಧಾರದ ಮೇಲೆ ಪ್ರಕರಣ ನಿರ್ಧರಿಸಬೇಕು ಎಂದು ಕೋರಿದ್ದಾರೆ.

ವಿಚಾರಣೆ ವೇಳೆ, ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಆರೋಪದ ಹಿಂದಿನ ಉದ್ದೇಶವಾದರೂ ಏನು? ಎಂದು ರೂಪಾ ಅವರನ್ನು ನ್ಯಾಯಾಲಯ ಪ್ರಶ್ನಿಸಿದೆ. ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ರೂಪಾ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಯೇ? ಸಂಬಂಧವಿಲ್ಲದ ಹೇಳಿಕೆ ನೀಡಿದರೆ ಅದು ಮಾನಹಾನಿಕರವಲ್ಲವೇ ಎಂದು ಕೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿದ ರೂಪಾ ಪರ ವಕೀಲ ಆದಿತ್ಯ ಸೋಂಧಿ, ಸಿಂಧೂರಿ ಅವರ ಕರ್ತವ್ಯಲೋಪಗಳ ಕುರಿತು ರೂಪಾ ಗಮನ ಸೆಳೆದಿದ್ದಾರೆ ಎಂದು ಸಮಜಾಯಿಸಿ ನೀಡಿದ್ದಾರೆ. ಇದನ್ನು ಒಪ್ಪಿಕೊಳ್ಳದ ನ್ಯಾ. ಅಮಾನುಲ್ಲಾ ಅವರು, ಇಲಾಖೆ ವ್ಯಾಪ್ತಿಯಲ್ಲೇ ರೂಪಾ ದೂರು ನೀಡಬಹುದಿತ್ತು. ಪರಸ್ಪರ ಮುಗಿಬೀಳಲು ಹೊರಟಿದ್ದಾರೆ. ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಪ್ರತಿಯೊಂದು ಅಂಶವೂ ನಿಮಗೆ ತಿಳಿದಿದೆ ಅಲ್ಲವೇ? ಆದರೂ ನೀವು ಇದನ್ನು ಮಾಡಿದ್ದೀರಿ ಎಂದು ಹೇಳಿದ್ದಾರೆ.

ನ್ಯಾಯಾಲಯ ಸಮಯಾವಕಾಶ ನೀಡಿದರೂ, ಇಬ್ಬರ ನಡುವೆ ಯಾವುದೇ ಇತ್ಯರ್ಥಕ್ಕೆ ಬರಲು ಸಾಧ್ಯವಾಗದ ಕಾರಣ, ಮೊಕದ್ದಮೆ ರದ್ದುಪಡಿಸುವಂತೆ ಕೋರಿದ್ದ ಅರ್ಜಿ ಹಿಂಪಡೆಯುವುದಾಗಿ ರೂಪಾ ಪರ ವಕೀಲ ಸೋಂಧಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದಕ್ಕೆ ಒಪ್ಪಿದ ನ್ಯಾಯಾಲಯ ರೂಪಾ ಮೌದ್ಗಿಲ್ ಅವರಿಗೆ ಮನವಿ ಹಿಂಪಡೆಯಲು ಅನುಮತಿ ನೀಡಿದೆ.

ಇದನ್ನೂ ಓದಿ : ರೈತನ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ ಹಂಚಿಕೆ : ಸಂಸದ ತೇಜಸ್ವಿ ಸೂರ್ಯ, ನ್ಯೂಸ್ ಪೋರ್ಟಲ್‌ಗಳ ಸಂಪಾದಕರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...