Homeಮುಖಪುಟ‘ಖಂಡಿತವಾಗಿಯೂ LDF’- ಕೇರಳ ಚುನಾವಣೆಗೆ ಎಡಪಕ್ಷಗಳ ಘೋಷವಾಕ್ಯ

‘ಖಂಡಿತವಾಗಿಯೂ LDF’- ಕೇರಳ ಚುನಾವಣೆಗೆ ಎಡಪಕ್ಷಗಳ ಘೋಷವಾಕ್ಯ

- Advertisement -
- Advertisement -

ಕೇರಳದಲ್ಲಿ ಮುಂದಿನ ಎಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿನ ಆಡಳಿತರೂಢ ಎಡಪಕ್ಷಗಳ ಚುನಾವಣಾ ಅಭಿಯಾನದ ಘೋಷಣೆ “ಖಂಡಿತವಾಗಿಯೂ, ಎಲ್‌ಡಿಎಫ್‌” ಎಂಬುದಾಗಿದೆ. ಈ ಅಭಿಯಾನಕ್ಕೆ ಒಂದು ಸ್ಟಾರ್‌ ಪ್ರಚಾರಕರಿದ್ದರೆ ಅದು, “ಖಂಡಿತವಾಗಿಯೂ” ಪಿಣರಾಯಿ ವಿಜಯನ್ ಆಗಿದ್ದಾರೆ ಎನ್ನಲಾಗಿದೆ.

75 ರ ಹರೆಯದ ಪಿಣರಾಯಿ ವಿಜಯನ್ ಧರ್ಮಡಂನಲ್ಲಿ ಪ್ರಚಾರವನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ‘ದಿ ಕ್ಯಾಪ್ಟನ್’ ಎಂದು ಅವರನ್ನು ಉಲ್ಲೇಖಿಸಿ ಬೃಹತ್‌ ಗಾತ್ರದ ಕಟೌಟ್‌ಗಳನ್ನು ಅಲ್ಲಲ್ಲಿ ಹಾಕಲಾಗಿದೆ. ಎಡಪಕ್ಷಗಳ ಪರವಾಗಿರುವ ಘೋಷಣೆಗಳು, ಅಭಿವೃದ್ಧಿ ಯೋಜನೆಗಳು, ಕೊರೊನಾ ಕಾಲದಲ್ಲಿ ಜಾರಿಗೆ ತಂದಿರುವ ಪಿಂಚಣಿ, ಪಡಿತರ ಸೇರಿದಂತೆ ಇತರ ಕಲ್ಯಾಣ ಯೋಜನೆಗಳನ್ನು ಚುನಾವಣಾ ಅಭಿಯಾನಗಳಲ್ಲಿ ಬಳಸಲಾಗುತ್ತಿದೆ.

ಇದನ್ನೂ ಓದಿ: ಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಪಿಣರಾಯಿ ವಿಜಯನ್‌ರ ಮುಖವು ಈ ಬಾರಿ ಕೇರಳದಲ್ಲಿ ಖಂಡಿತವಾಗಿಯೂ ಕೆಲಸ ಮಾಡಲಿದೆ ಎಂದು ಚುನಾವಣಾ ವಿಶ್ಲೇಷಕರ ಅಭಿಪ್ರಾಯವಾಗಿದೆ. 1939 ರಲ್ಲಿ ಕಮ್ಯುನಿಸ್ಟ್ ಪಕ್ಷವು ಕೇರಳದಲ್ಲಿ ಮೊದಲ ಸಭೆ ನಡೆಸಿದ ಪರಪ್ರಂ ಗ್ರಾಮ ಸೇರಿದಂತೆ ಧರ್ಮಡಂ ಕ್ಷೇತ್ರವು ಎಡಪಕ್ಷಗಳ ಭದ್ರ ಕೋಟೆಯಾಗಿದೆ. ಇಲ್ಲಿ ಪಿಣರಾಯಿ ವಿಜಯನ್ ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮಂಬರಂ ದಿವಾಕರನ್‌ ವಿರುದ್ಧ 36,000 ಮತಗಳಿಂದ ಜಯ ಗಳಿಸಿದ್ದರು.

ಧರ್ಮಡಂನಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನಿಂದ‌ ಸ್ಪರ್ಧಿಸುತ್ತಿರುವ ಅಭ್ಯರ್ಥಿಯ ಆಯ್ಕೆ ಇದುವರೆಗೂ ನಡೆದಿಲ್ಲ. ಆದ್ದರಿಂದ ಮುಖ್ಯಮಂತ್ರಿಯ ಕೆಲಸ ಇನ್ನೂ ಸುಲಭವಾದಂತಾಗಿದೆ. ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಸಿ.ಕೆ. ಪದ್ಮನಾಭನ್ ತನ್ನ ಪ್ರಚಾರ ಕಾರ್ಯವನ್ನು ಇನ್ನೂ ಪ್ರಾರಂಭಿಸಿಲ್ಲ.

ಜಿಲ್ಲೆಯ ಪೊಟ್ಟಂಪರಾ ಗ್ರಾಮದಲ್ಲಿರುವ ಕಾಂಗ್ರೆಸ್ ಕಚೇರಿಯು ಪಕ್ಷವು ಇಲ್ಲಿ ಎದುರಿಸುತ್ತಿರುವ ಬಿಕ್ಕಟ್ಟಿನ ಕಥೆಯನ್ನು ಹೇಳುತ್ತದೆ. ಕಟ್ಟಡ ಸುತ್ತ ಕಳೆ ಗಿಡಗಳು ಅತಿಕ್ರಮಿಸಿದ್ದು, ಇದನ್ನು ತಿಂಗಳುಗಳಿಂದ ಮುಚ್ಚಲಾಗಿದೆ.

ಇದನ್ನೂ ಓದಿ: ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ಬುಧವಾರ ತಮ್ಮ ಕಚೇರಿಯ ಹಿಂದಿರುವ ಮೈದಾನದಲ್ಲಿ ನಡೆದ ಸಭೆಗೆ ಪಿಣರಾಯಿ ವಿಜಯನ್ ಆಗಮಿಸಿದ್ದರು. ಅವರು ಆಗಮಿಸುತ್ತಿದ್ದಂತೆ ಅಲ್ಲಿರುವ ಕಾರ್ಯಕರ್ತರು ಅವರನ್ನು ಘೋಷಣೆಗಳ ಮೂಲಕ ಸ್ವಾಗತಿಸಿದ್ದಾರೆ. ತಕ್ಷಣ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಮುಖಂಡ ಮಾತು ನಿಲ್ಲಿಸಿ, ಮುಖ್ಯಮಂತ್ರಿಗೆ ವೇದಿಕೆಯನ್ನು ಬಿಟ್ಟು ಕೊಟ್ಟಿದ್ದಾರೆ. ನಂತರ ಪಿಣರಾಯಿ ಅಲ್ಲಿ ನರೆದಿರುವ ಜನರನ್ನು ಉದ್ದೇಶಿಸಿ ಅವರದೇ ವಿಶೇಷ ಶೈಲಿಯಲ್ಲಿ ಮಾತನಾಡಿದ್ದಾರೆ.

ಪಿಣರಾಯಿ ತಮ್ಮ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಆರೋಪಿಸುತ್ತಿರುವ ಹಗರಣಗಳನ್ನು ಸಮರ್ಥಿಸುವ ಯಾವುದೆ ಮಾತುಗಳನ್ನು ಆಡದೆ, ಬಿಜೆಪಿ ಮತ್ತು ಯುಡಿಎಫ್ ಸುಳ್ಳು ಹೇಳುತ್ತಿದೆ ಎಂದು ಹೇಳುತ್ತಾ, “ಒಂದು ವಿಷಯ ನಿಶ್ಚಿತ, ನಿಮ್ಮ ನಂಬಿಕೆಗೆ ಧಕ್ಕೆ ತರುವಂತಹ ಯಾವುದನ್ನೂ ನಾವು ಮಾಡಿಲ್ಲ” ಎಂದು ಅವರು ಒತ್ತಿ ಹೇಳಿದ್ದಾರೆ.

ಕೇರಳದ ವಿಧಾನಸಭಾ ಚುನಾವಣೆಯನ್ನು ದೇಶಾದ್ಯಂತ ಅತ್ಯಂತ ಕುತೂಹಲದಿಂದ ವೀಕ್ಷಿಸಲಾಗುತ್ತಿದೆ. “ಜಾತ್ಯತೀತತೆಯನ್ನು ಚೂರುಚೂರು ಮಾಡಲು ಪ್ರಯತ್ನಿಸುತ್ತಿರುವ ಪಡೆಗಳು ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿವೆ. ಆದರೆ ಎಡಪಕ್ಷಗಳು ಜಾತ್ಯತೀತತೆ ಬಗ್ಗೆ ರಾಜಿಯಾಗುವುದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಜಾಗತೀಕರಣದ ಪ್ರತಿಪಾದಕರು. ದೇಶದಲ್ಲಿನ ಎಡಪಕ್ಷಗಳ ಏಕೈಕ ದ್ವೀಪವಾಗಿದೆ ಕೇರಳ” ಎಂದು ಪಿಣರಾಯಿ ತಮ್ಮ ಭಾಷಣಗಳಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

ಪರಪ್ರಂನಲ್ಲಿ ಉಚಿತ ಪಡಿತರ ಪಡೆಯಲು ನಿಂತಿರುವ ಹಿರಿಯ ಮಹಿಳೆ ಯಶೋಧ, “ನಾನು ಮತ್ತೆ ಕೇರಳದಲ್ಲಿ ಪಿಣರಾಯಿ ವಿಜಯನ್ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಬಯಸುತ್ತೇನೆ. ಈ ಉಚಿತ ಪಡಿತರ ಕಿಟ್ ನಮಗೆ ಒಂದು ತಿಂಗಳು ಸಾಕಾಗುತ್ತದೆ. ಪಿಣರಾಯಿ ವಿಜಯನ್ ಹೆಚ್ಚಿಸಿದ ವಿಧವಾ ಪಿಂಚಣಿ 1600 ರೂಪಾಯಿ ನನಗೆ ಸಿಗುತ್ತಿದೆ. ಕಳೆದ ತಿಂಗಳು ನಾನು ಉದ್ಯೋಗ ಖಾತ್ರಿ ಯೋಜನೆಯ ನೂರು ದಿನಗಳ ಕೆಲಸವನ್ನು ಪೂರೈಸಿದೆ” ಎನ್ನುತ್ತಾರೆ.

ಕ್ಷೇತ್ರದಲ್ಲಿ ಎಡಪಕ್ಷಗಳ ಅಭಿಯಾನದ ಮೇಲ್ವಿಚಾರಣೆ ನಡೆಸುತ್ತಿರುವ ಸಿಪಿಐ ಹಿರಿಯ ನಾಯಕ ಸಿ.ಎನ್. ಚಂದ್ರನ್, ಅಭ್ಯರ್ಥಿಯನ್ನು ಹುಡುಕುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಹೇಳುತ್ತಾರೆ. “ಇದು ಪಿಣರಾಯಿ ವಿಜಯನ್ ವಿರುದ್ಧ ಹೋರಾಡಲು ಕಾಂಗ್ರೆಸ್‌ಗೆ ಸಾಧ್ಯವಿಲ್ಲ ಎಂದು ತೋರಿಸುತ್ತದೆ” ಎಂದು ಅವರು ಹೇಳುತ್ತಾರೆ. ಮಂಗಳವಾರ ಕಾಂಗ್ರೆಸ್ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಧರ್ಮಡಂನಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಯ ಹೆಸರು ಕಾಣಿಸಿಕೊಂಡಿಲ್ಲ.

ಕಾಂಗ್ರೆಸ್ಸಿನ ಹಿರಿಯ ಮುಖಂಡ ಎಂ.ಎಂ. ಹಸನ್ “ನಾವು ಧರ್ಮಡಂನಲ್ಲಿ ಅಭ್ಯರ್ಥಿಯನ್ನು ಹುಡುಕಲು ಪ್ರಯತ್ನಿಸುತ್ತಿದ್ದೇವೆ. ಕಾಂಗ್ರೆಸ್ ಖಂಡಿತವಾಗಿಯು ಸ್ಪರ್ಧಿಸಲಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...