Homeಕರ್ನಾಟಕಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೃಷಿ ನಾಶ: ಮಾಜಿ ಪ್ರಧಾನಿ ದೇವೇಗೌಡ ಆತಂಕ

ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಕೃಷಿ ನಾಶ: ಮಾಜಿ ಪ್ರಧಾನಿ ದೇವೇಗೌಡ ಆತಂಕ

ರೈತ ವಿರೋಧಿ ಕಾನೂನುಗಳ ವಿರುದ್ದ ತುಮಕೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಭೂಸುಧಾರಣ ಕಾಯ್ದೆ ತಿದ್ದುಪಡಿಯಿಂದ ಬಂಡವಾಳಗಾರರು ನೂರಾರು ಎಕರೆ ಖರೀದಿಸಲು ಅವಕಾಶ ಕಲ್ಪಿಸಿದ್ದು ಇದರಿಂದ ರೈತಾಪಿ ವರ್ಗ ತೀವ್ರ ಸಂಕಷ್ಟ ಎದುರಿಸಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆತಂಕ ವ್ಯಕ್ತಪಡಿಸಿದರು.

ತುಮಕೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜಾತ್ಯತೀತ ಜನತಾ ದಳ ವತಿಯಿಂದ ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂಸುಧಾರಣ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು.

ಇದನ್ನೂ ಓದಿ: ದೇವೆಗೌಡರ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟ: ವಿಶ್ವೇಶ್ವರ್ ಭಟ್ ಮೇಲೆ ಎಫ್‍ಐಆರ್ ದಾಖಲು

ಭೂಸುಧಾರಣ ಕಾಯ್ದೆಯು ಕಾರ್ಪೋರೇಟ್ ಕುಳಗಳು ರೈತರಿಂದ ಭೂಮಿ ಖರೀದಿಸಲು ಅವಕಾಶ ನೀಡುತ್ತದೆ. ಅವರು ಭೂಮಿ ಖರೀದಿಸುತ್ತಾರೆಯೇ ವಿನಃ ಉಳುಮೆ ಮಾಡುವುದಿಲ್ಲ. ಪರಿಣಾಮ ಕೃಷಿ ಸತ್ತು ಹೋಗುತ್ತದೆ. ಕೃಷಿಕರು ಗುಲಾಮಗಿರಿಗೆ ತಳ್ಳಲ್ಪಡುತ್ತಾರೆ ಎಂದು ಹೇಳಿದರು.

ರಾಜ್ಯ ಸರ್ಕಾರ ರೈತ ವಿರೋಧಿ ಚಟುವಟಿಕೆಗಳಿಗೆ ಹಾದಿ ಮಾಡಿಕೊಡುತ್ತಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿದೆ. ಇದೂ ಕೂಡ ಸಾಕಷ್ಟು ಸಮಸ್ಯೆಯನ್ನು ತಂದೊಡ್ಡಲಿದೆ. ಸಣ್ಣ ಮತ್ತು ಮಧ್ಯಮ ವರ್ತಕರು, ರೈತರು ಬಾಧಿತರಾಗುತ್ತಾರೆ. ರೈತರು ತಮ್ಮ ಬೆಳೆಗಳನ್ನು ನೇರ ಮಾರುಕಟ್ಟೆಗೆ ತೆಗೆದುಕೊಂಡು ಹೋಗಲು ಆಗುವುದಿಲ್ಲ. ದೊಡ್ಡದೊಡ್ಡ ಬಂಡವಾಳಗಾರರು ರೈತರಿಂದ ಕಡಿಮೆ ಬೆಲೆಗೆ ಖರೀದಿಸಿ ಲಾಭ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಿದೆ ಎಂದರು.

ಇದನ್ನೂ ಒದಿ: ದೇವೇಗೌಡ ಕುಟುಂಬದವರು ಅಧಿಕಾರ ಸ್ಥಾನದಿಂದ ಹಿಂದೆ ಸರಿದರೆ ಮಾತ್ರ ಜೆಡಿಎಸ್‌ ಉಳಿವು ಸಾಧ್ಯ: ವೈ.ಎಸ್‌.ವಿ ದತ್ತ

ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ಮಾಡಿದೆ. ರಾಜ್ಯ ಸರ್ಕಾರಗಳು ಇದನ್ನು ಯಥಾವತ್ತಾಗಿ ಜಾರಿಗೆ ತರಲು ಹೊರಟಿವೆ. ತಿದ್ದುಪಡಿ ಕಾಯ್ದೆಯಿಂದ ಕಾರ್ಮಿಕರಿಗೆ ಭದ್ರತೆ ಇಲ್ಲದಂತಾಗುತ್ತದೆ. ಇದು ಮಾಲಿಕರಿಗೆ ಹೆಚ್ಚು ಲಾಭ ಮಾಡಿಕೊಡುತ್ತದೆ. ಬಂಡವಾಳಗಾರರ ಪರವಾಗಿ ಸರ್ಕಾರಗಳು ಕೆಲಸ ಮಾಡುತ್ತಿವೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಶಾಸಕರಾದ ಎಸ್.ಆರ್.ಶ್ರೀನಿವಾಸ್, ವೀರಭದ್ರಯ್ಯ, ಗೌರಿಶಂಕರ್, ಬೆಮೆಲ್ ಕಾಂತರಾಜು, ಮಾಜಿ ಶಾಸಕರಾದ ಕೆ.ಎಂ. ತಿಮ್ಮರಾಯಪ್ಪ, ಎಂ.ಟಿ.ಕೃಷ್ಣಪ್ಪ, ಸುಧಾಕರ್ ಲಾಲ್, ಡಿ.ನಾಗರಾಜಯ್ಯ, ಎಂ.ಟಿ.ಕೃಷ್ಣಪ್ಪ, ಮುಖಂಡರಾದ ಟಿ.ಆರ್. ನಾಗರಾಜು, ಬೆಳ್ಳಿಲೋಕೇಶ್ ಮೊದಲಾದವರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ದೇವೇಗೌಡ, ಶಿರಾ ಶಾಸಕ ಸತ್ಯನಾರಾಯಣ ನಿಧನದಿಂದ ಪಕ್ಷಕ್ಕೆ ನಷ್ಟವಾಗಿದೆ. ಸರಳ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದರು.


ಓದಿ: ನಿಮ್ಮ ನಿಮ್ಮ ತೆವಲುಗಳಿಗೆ ದೇಶ ಹಾಳು ಮಾಡಬೇಡಿ: ಟಿವಿ ಮಾಧ್ಯಮಗಳ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...