Homeಮುಖಪುಟಫ್ಯಾಕ್ಟ್‌ಚೆಕ್: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?

ಫ್ಯಾಕ್ಟ್‌ಚೆಕ್: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?

ದೆಹಲಿಯ ಉತ್ತರ ರೈಲ್ವೆ ಅಧಿಕಾರಿಗಳು ಇದೀಗ ಡೆಹ್ರಾಡೂನ್ ನಿಲ್ದಾಣದಲ್ಲಿನ ಸೈನ್‌ಬೋರ್ಡ್‌ಗಳಲ್ಲಿ ಸಂಸ್ಕೃತದಲ್ಲಿ ಬರೆದಿಲ್ಲ. ಈ ಹೆಸರನ್ನು ಮೊದಲಿನಂತೆ ವಿವಿಧ ಬೋರ್ಡ್‌ಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ ಪ್ರದರ್ಶಿಸಲಾಗಿದೆ.

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಸೋಮವಾರ ಡೆಹ್ರಾಡೂನ್ ಹೆಸರನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆದಿರುವ “ಡೆಹ್ರಾಡೂನಮ್” ಎಂದು ತೋರಿಸಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಸ್ಪಷ್ಟೀಕರಣ ನೀಡಿರುವ ದೆಹಲಿಯ ಉತ್ತರ ರೈಲ್ವೆ ಅಧಿಕಾರಿಗಳು “ಇದೀಗ ಡೆಹ್ರಾಡೂನ್ ನಿಲ್ದಾಣದಲ್ಲಿನ ಸೈನ್‌ಬೋರ್ಡ್‌ಗಳಲ್ಲಿ ಸಂಸ್ಕೃತದಲ್ಲಿ ಬರೆದಿಲ್ಲ. ವಿವಿಧ ಬೋರ್ಡ್‌ಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ ಪ್ರದರ್ಶಿಸಲಾಗಿದೆ. ಸಂಸ್ಕೃತ ಇರುವ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ಸೃಷ್ಟಿಸಲಾದ “ಗೊಂದಲ” ಎಂದು ಹೇಳಿದ್ದಾರೆ.

ಸೋಮವಾರ ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವಿನಯ್ ಸಹಸ್ರಬುದ್ದೆ ಅವರು ‘ಈಗಲ್ ಐ’ ಹೆಸರಿನಲ್ಲಿರುವ ಎರಡು ಚಿತ್ರಗಳಿರುವ ಪೋಸ್ಟನ್ನು ಷೇರ್ ಮಾಡಿದಾಗ ಈ ವಿಷಯ ವೈರಲ್ ಅಯಿತು. ಅದರಲ್ಲಿ ಒಂದು ಚಿತ್ರವು ಡೆಹ್ರಾಡೂನ್‌ನ ಹಳೆಯ ನಿಲ್ದಾಣದ ಸಂಕೇತ ಫಲಕದಲ್ಲಿ ಹೆಸರನ್ನು ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯಲ್ಲಿ ಬರೆಯಲಾಗಿದೆ. ಆದರೆ ಮತ್ತೊಂದು ಚಿತ್ರದಲ್ಲಿ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆಯಲಾಗಿದೆ ಎಂದು ತೋರಿಸಲಾಗಿದೆ.

ಸಹಸ್ರಬುದ್ಧೆ ಟ್ವೀಟ್‌ನಲ್ಲಿ, “@RailMinIndia ನ ಈ ಮಹತ್ವದ ಕ್ರಮವನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ವಾಸ್ತವವೇನು?

ಕಳೆದ ವರ್ಷ ನಾಮಫಲಕಗಳಲ್ಲಿ ಉರ್ದು ಬದಲಿಗೆ ಸಂಸ್ಕೃತ ಬಳಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ ಕೆಲವು ಸ್ಥಳೀಯ ಸಂಸ್ಥೆಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದವು. ನಂತರ ಈ ಯೋಜನೆ ಮುಂದುವರೆಯಲಿಲ್ಲ ಎಂದು ಮೂಲಗಳು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. ಆ ವರ್ಷ ಸಂಸ್ಕೃತದಲ್ಲಿ ಬರೆದಿದ್ದ ನಾಮಫಲಕವನ್ನು ಬಳಸದೇ ಬಿಸಾಡಲಾಗಿದ್ದು ಆ ಫೋಟೊ ಈಗ ಸಾಮಾಜಿಕ ಜಾಲತಾಣದಲ್ಲ ವೈರಲ್ ಆಗಿದೆ ಅಷ್ಟೇ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಡೆಹ್ರಾಡೂನ್‌ ರೈಲ್ವೇ ಸ್ಟೇಷನ್ ನಲ್ಲಿ ನವೀಕರಣ ಕೆಲಸ ನಡೆಯುತ್ತಿದೆ. ಅಲ್ಲಿ ನಿರ್ಮಾಣ ಮಾಡುತ್ತಿರುವಾಗ ಕೆಲಸದವರಿಗೆ ಕೆಲವು ಹಳೆಯ ಸೈನ್‌ಬೋರ್ಡ್‌ಗಳು ದೊರೆತಿವೆ. ಅದರಲ್ಲಿ ಉರ್ದು ಬದಲಿಗೆ ಸಂಸ್ಕೃತದಲ್ಲಿ ಬರೆಯಲಾಗಿದ್ದ ಬೋರ್ಡ್ ಸಹ ಸಿಕ್ಕಿದೆ. ಆದರೆ ಅದು ಹಳೆಯದು. ಈಗ ಮೊದಲಿನಂತೆಯೇ ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಯಲ್ಲಿ ಹೆಸರನ್ನು ಬರೆಯಲಾಗಿದೆ ”ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ವರ್ಕ್ಸ್ ಮ್ಯಾನ್ಯುವಲ್ ಪ್ರಕಾರ, ನಿಲ್ದಾಣದ ಹೆಸರುಗಳನ್ನು ಇಂಗ್ಲಿಷ್, ಹಿಂದಿ ಮತ್ತು ಸ್ಥಳೀಯ ಅಧಿಕೃತ ಭಾಷೆಯಲ್ಲಿ ಬರೆಯಬೇಕಾಗಿದೆ. ರೈಲ್ವೆ ಸಾಮಾನ್ಯವಾಗಿ ತನ್ನ ನಿಲ್ದಾಣದ ಹೆಸರುಗಳ ವ್ಯವಹಾರದಲ್ಲಿ ತಲೆಹಾಕುವುದಿಲ್ಲ. ಇದರ ಕುರಿತು ಸಂಬಂಧಪಟ್ಟ ರಾಜ್ಯಕ್ಕೆ ಅಧಿಕಾರವಿರುವುದು ಎಂದು ಅದು ಅಧಿಕೃತವಾಗಿ ಹೇಳಿದೆ.

ಹೆಸರನ್ನು/ಭಾಷೆಯನ್ನು ಬದಲಾಯಿಸಲು ಬಯಸಿದರೆ ರಾಜ್ಯಗಳು ಸಾಮಾನ್ಯವಾಗಿ ಗೃಹ ಸಚಿವಾಲಯಕ್ಕೆ ಕೋರಿಕೆಯನ್ನು ಕಳುಹಿಸುತ್ತವೆ.


ಇದನ್ನೂ ಓದಿ: ಸಂಸ್ಕೃತ ಭಾಷೆಯಿಂದ ಸಕ್ಕರೆ ಕಾಯಿಲೆ, ಕೊಬ್ಬು ನಿಯಂತ್ರಣ: ಸಂಸದ ಗಣೇಶ್ ಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ

ಲಾಕ್‌ಡೌನ್‌ ಉಲ್ಲಂಘಿಸಿದ ಗುಜರಾತ್ ಸಚಿವರ ಪುತ್ರನನ್ನು ಪ್ರಶ್ನಿಸಿದ್ದ ಮಹಿಳಾ ಕಾನ್ಸ್ಟೇಬಲ್‌ ರಾಜೀನಾಮೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...