Homeಮುಖಪುಟನ್ಯಾಯಮೂರ್ತಿಗಳ ನೇಮಕಕ್ಕೆ ವಿಳಂಬ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ

ನ್ಯಾಯಮೂರ್ತಿಗಳ ನೇಮಕಕ್ಕೆ ವಿಳಂಬ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಮತ್ತೊಂದು ಮುಖಾಮುಖಿಯಾಗಬಹುದಾಗಿದ್ದು, ಹೈಕೋರ್ಟ್‌ಗಳ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಕೊಲಿಜಿಯಂಗೆ ಏಕೆ ಕಳುಹಿಸಿಲ್ಲ? ಎಂದು ಸುಪ್ರೀಂಕೋರ್ಟ್ ಮಂಗಳವಾರ ಪ್ರಶ್ನಿಸಿದೆ.

ಹೆಸರುಗಳನ್ನು ತೆರವುಗೊಳಿಸುವಲ್ಲಿ ಕೇಂದ್ರವು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿರುವ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠವು ಈ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ.

10 ತಿಂಗಳಿನಂದ ಹೈಕೋರ್ಟ್‌ನ 80 ಹೆಸರುಗಳು ಬಾಕಿ ಉಳಿದಿವೆ. ಮೊದಲು ಸಾಮಾನ್ಯ ಪ್ರಕ್ರಿಯೆ ನಡೆಯುತ್ತದೆ. ನಿಮ್ಮ ನಿಲುವನ್ನು ತಿಳಿದುಕೊಳ್ಳಬೇಕು. ಆದ್ದರಿಂದನ್ಯಾಯಮೂರ್ತಿಗಳ ನೇಮಕ ಕೊಲಿಜಿಯಂ ತೀರ್ಮಾನಿಸಬಹುದು ಎಂದು ನ್ಯಾಯಮೂರ್ತಿ ಕೌಲ್ ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ. 26 ನ್ಯಾಯಾಧೀಶರ ವರ್ಗಾವಣೆ ಮತ್ತು ‘ಸೂಕ್ಷ್ಮ ಹೈಕೋರ್ಟ್’ನಲ್ಲಿ ಮುಖ್ಯ ನ್ಯಾಯಮೂರ್ತಿ ನೇಮಕ ಬಾಕಿ ಇದೆ ಎಂದು ಪೀಠ ಹೇಳಿದೆ.

ಹೈಕೋರ್ಟ್ ಶಿಫಾರಸು ಮಾಡಿದ್ದರೂ ಕೊಲಿಜಿಯಂ ಸ್ವೀಕರಿಸದ ಎಷ್ಟು ಹೆಸರುಗಳು ಬಾಕಿ ಉಳಿದಿವೆ ಎಂಬ ಮಾಹಿತಿ ನನ್ನ ಬಳಿ ಇದೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದರು.

ಅಟಾರ್ನಿ ಜನರಲ್ ಆರ್ ವೆಂಕಟ್ರಮಣಿ ಅವರು ಪ್ರತಿಕ್ರಿಯೆ ನೀಡಲು ಒಂದು ವಾರ ಕಾಲಾವಕಾಶ ಕೋರಿದರು. ಪೀಠವು ಅವರಿಗೆ ಎರಡು ವಾರಗಳ ಕಾಲಾವಕಾಶ ನೀಡಿದ್ದು, ಕೇಂದ್ರದ ಪ್ರತಿಕ್ರಿಯೆಯೊಂದಿಗೆ ಬರುವಂತೆ ಹೇಳಿದೆ. ಇದೀಗ ಅಕ್ಟೋಬರ್ 9 ರಂದು ಪ್ರಕರಣದ ವಿಚಾರಣೆ ನಡೆಯಲಿದೆ.

ಹೇಳಲು ನನಗೆ ತುಂಬಾ ಇದೆ. ಆದರೆ ನಾನು ನನ್ನನ್ನು ನಿಯಂತ್ರಿಸುತ್ತಿದ್ದೇನೆ. ಪ್ರತಿಕ್ರಿಯೆ ನೀಡಲು ಎಜಿ ಒಂದು ವಾರ ಕಾಲಾವಕಾಶ ಕೇಳಿದ್ದರಿಂದ ನಾನು ಮೌನವಾಗಿದ್ದೇನೆ, ಆದರೆ ಮುಂದಿನ ದಿನಾಂಕದಂದು ನಾನು ಸುಮ್ಮನಿರುವುದಿಲ್ಲ ಎಂದು ಜಸ್ಟೀಸ್ ಕೌಲ್ ಖಡಕ್ಕಾಗಿ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರನ ಜಾಮೀನಿನ ಷರತ್ತು ಸಡಿಲಿಸಿದ ಸುಪ್ರೀಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

’ಆದಿವಾಸಿಗಳ ಅಭಿವೃದ್ಧಿ’ ಪುಸ್ತಕದಿಂದ ಆಯ್ದ ಅಧ್ಯಾಯ; ಆದಿವಾಸಿಗಳೊಡನೆ ಅನುಸಂಧಾನ ವಿಧಾನ ಯಾವುದಾಗಿರಬೇಕು?

0
ಶ್ರೀಮತಿ ಖೋಂಗಮೆನ್ (1) ಅವರು, ಈಗ್ಗೆ ಮೂರು ದಿನಗಳ ಹಿಂದೆ ಈ ಸಮ್ಮೇಳನದ ಕುರಿತು ನನಗೆ ವಿವರಗಳನ್ನು ನೀಡಿದರು. ಈ ಕಾರ್ಯಕ್ರಮದ ಆಯೋಜನೆ ಮತ್ತು ವಿವರಗಳನ್ನು ನೋಡಿ ನನಗೆ ಸಂತೋಷವಾಯಿತು. ಈ ತರಹದ...