Homeಮುಖಪುಟಜಾಮೀನು ಆದೇಶಗಳ ಸಂವಹನ ವಿಳಂಬ ಗಂಭೀರವಾದ ದೋಷವಾಗಿದೆ: ನ್ಯಾ. ಚಂದ್ರಚೂಡ್‌

ಜಾಮೀನು ಆದೇಶಗಳ ಸಂವಹನ ವಿಳಂಬ ಗಂಭೀರವಾದ ದೋಷವಾಗಿದೆ: ನ್ಯಾ. ಚಂದ್ರಚೂಡ್‌

ಆರ್ಯನ್‌ ಖಾನ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದ ಮೇಲೂ ಆ ಆದೇಶ ಜೈಲು ಅಧಿಕಾರಿಯನ್ನು ತಲುಪಲು ವಿಳಂಬವಾದ ಕಾರಣಕ್ಕೆ ಎರಡು ದಿನಗಳ ಕಾಲ ಜೈಲಿನಲ್ಲಿರಬೇಕಾಗಿತ್ತು.

- Advertisement -
- Advertisement -

ಜಾಮೀನು ಆದೇಶಗಳನ್ನು ಜೈಲು ಅಧಿಕಾರಿಗಳಿಗೆ ತಿಳಿಸುವಲ್ಲಿ ಆಗುವ ವಿಳಂಬವು ‘ಅತ್ಯಂತ ಗಂಭೀರವಾದ ದೋಷ’ವಾಗಿದ್ದು, ಇದು ಪ್ರತಿಯೊಬ್ಬ ವಿಚಾರಣಾಧೀನ ಕೈದಿಯ ‘ಮಾನವ ಸ್ವಾತಂತ್ಯ್ರ’ವನ್ನು ಕಸಿದುಕೊಳ್ಳುತ್ತದೆ. ಹಾಗಾಗಿ ಇಂತಹ ಸಮಸ್ಯೆಗಳನ್ನು ‘ಯುದ್ಧೋಪಾದಿ’ಯಲ್ಲಿ ಪರಿಹರಿಸುವುದು ಅತ್ಯಗತ್ಯ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಒತ್ತಿ ಹೇಳಿದ್ದಾರೆ.

ಅಲಹಾಬಾದ್‌ ಹೈಕೋರ್ಟ್‌ ಆಯೋಜಿಸಿದ್ದ ‘ಅರ್ಜಿದಾರರಿಗೆ ಆನ್‌ಲೈನ್‌ ಕಾನೂನು ನೆರವು ನೀಡಲು ವರ್ಚುವಲ್‌ ಕೋರ್ಟ್‌‌ಗಳು ಮತ್ತು ಇ-ಸೇವಾ ಕೇಂದ್ರಗಳು’ ಎಂಬ ವಿಷಯದ ಕುರಿತ ಆನ್‌ಲೈನ್‌ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಚಂದ್ರಚೂಡ್‌ ಮಾತನಾಡಿದ್ದಾರೆ.

ಕ್ರೂಸ್ ಹಡಗಿನ ಡ್ರಗ್ಸ್‌ ಪ್ರಕರಣದಲ್ಲಿ ಬಂಧಿಸಲಾಗಿದ್ದ ಬಾಲಿವುಡ್‌ ನಟ ಶಾರುಖ್‌ಖಾನ್‌ ಅವರ ಮಗ ಆರ್ಯನ್‌ ಖಾನ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದ ಮೇಲೂ ಆ ಆದೇಶ ಜೈಲು ಅಧಿಕಾರಿಯನ್ನು ತಲುಪಲು ವಿಳಂಬವಾದ ಕಾರಣಕ್ಕೆ ಎರಡು ದಿನಗಳ ಕಾಲ ಜೈಲಿನಲ್ಲಿರಬೇಕಾಗಿತ್ತು.

ಈ ಮೊದಲು ಸುಪ್ರೀಂ ಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ಜಾಮೀನು ಆದೇಶ ಜಾರಿ ವಿಳಂಬದ ವರದಿಗಳ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿತ್ತು. ಅದರೊಂದಿಗೆ ಜಾಮೀನು ಆದೇಶಗಳ ರವಾನೆಗಾಗಿ ’ಸುರಕ್ಷಿತ, ವಿಶ್ವಾಸಾರ್ಹ ಮತ್ತು ಅಧಿಕೃತ ಚಾನಲ್‌’ ಅನ್ನು ಸ್ಥಾಪಿಸುವುದಾಗಿ ತಿಳಿಸಿದ್ದರು. “ನಾವು ಡಿಜಿಟಲ್‌ ಯುಗದಲ್ಲಿಯೂ ಆದೇಶಗಳ ಸಂವಹನಕ್ಕಾಗಿ ಆಕಾಶದಲ್ಲಿ ಪಾರಿವಾಳಗಳನ್ನು ನಿರೀಕ್ಷಿಸುತ್ತಿದ್ದೇವೆ’ ಎಂದು ಪೀಠ ಅಭಿಪ್ರಾಯಪಟ್ಟಿತ್ತು.

ಶೀಘ್ರ ಹಾಗೂ ಸುರಕ್ಷಿತ ವಿದ್ಯುನ್ಮಾನ ದಾಖಲೆಗಳ ಪ್ರಸರಣ (ಫಾಸ್ಟ್‌ ಅಂಡ್‌ ಸೆಕ್ಯೂರ್‌ ಟ್ರಾನ್ಸ್‌ ಮಿಷನ್‌ ಆಫ್‌ ಎಲೆಕ್ಟ್ರಾನಿಕ್‌ ರೆಕಾರ್ಡ್ಸ್‌ – FASTER) ಯೋಜನೆಯ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಇದಕ್ಕಾಗಿ ಪ್ರತಿ ಜೈಲಿನಲ್ಲಿಯೂ ವೇಗವಾದ ಇಂಟರ್‌ನೆಟ್ ಸೌಲಭ್ಯವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾಯಮುರ್ತಿ ಚಂದ್ರಚೂಡ್‌ ಅವರು, ಒರಿಸ್ಸಾ ಹೈಕೋರ್ಟ್‌ ಪ್ರತಿ ವಿಚಾರಣಾಧೀನ ಕೈದಿ ಮತ್ತು ಜೈಲು ಶಿಕ್ಷೆಗೆ ಒಳಗಾಗುವ ಅಪರಾಧಿಗಳಿಗೆ ‘ಇ-ಕಸ್ಟಡಿ ಪ್ರಮಾಣಪತ್ರ’ ಮಂಜೂರು ಮಾಡಲು ಆರಂಭಿಸಿದೆ ಎಂದು ಹೇಳಿದ್ದಾರೆ.

‘ಈ ಪ್ರಮಾಣಪತ್ರವು  ನಿರ್ದಿಷ್ಟ ವಿಚಾರಣೆಗೆ ಒಳಪಡುವ ಅಥವಾ ಅಪರಾಧಿಗೆ ಸಂಬಂಧಿಸಿದಂತೆ ಬಂಧನದಿಂದ ಹಿಡಿದು ಪ್ರತಿ ಪ್ರಕರಣದ ಪ್ರಗತಿಯ ಎಲ್ಲಾ ದತ್ತಾಂಶಗಳನ್ನು ನಮಗೆ ನೀಡುತ್ತದೆ. ಇದು ಜಾಮೀನು ಆದೇಶಗಳನ್ನು  ಜೈಲುಗಳೊಂದಿಗೆ ಸಂವಹನ ನಡೆಸಲು ನಮಗೆ ಸಹಾಯ ಮಾಡುತ್ತದೆ’ ಎಂದು ಅವರು ತಿಳಿಸಿದ್ದಾರೆ.

ದೇಶಾದ್ಯಂತ 99.43 ಲಕ್ಷ ಪ್ರಕರಣಗಳ ವಿಚಾರಣೆ ಮುಗಿಸಿದ್ದು, 18.35 ಲಕ್ಷ ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಲಾಗಿದೆ. ಈವರೆಗೂ ಒಟ್ಟು 119 ಕೋಟಿ ರೂಪಾಯಿ ದಂಡ ವಸೂಲಿಯಾಗಿದೆ’ ಎಂದು ನ್ಯಾಯಾಧೀಶರು ಹೇಳಿದರು.

ದೇಶದ ಜಿಲ್ಲಾ ನ್ಯಾಯಾಲಯಗಳಲ್ಲಿ 2.95 ಕೋಟಿ ಕ್ರಿಮಿನಲ್‌ ಪ್ರಕರಣಗಳು ಇನ್ನೂ ಬಾಕಿ ಉಳಿದಿದ್ದು, ಶೇ. 77 ಕ್ಕೂ ಹೆಚ್ಚು ಪ್ರಕರಣಗಳು ಒಂದು ವರ್ಷಕ್ಕಿಂತ ಹಳೆಯವು ಎಂದು ನ್ಯಾಯಮೂರ್ತಿ ಚಂದ್ರಚೂಡ್‌ ತಿಳಿಸಿದ್ದಾರೆ.

“ನಾವು ಇಲ್ಲಿಯೂ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಬಳಸಬಹುದು. ಪ್ರಸ್ತುತ ಸುಪ್ರೀಂ ಕೋರ್ಟ್‌ನ ಇ-ಸಮಿತಿಯಲ್ಲಿ ಈ ಬಗ್ಗೆ ಕೆಲಸ ಕೆಲಸ ಮಾಡುತ್ತಿದ್ದೇವೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ವಿವರಿಸಿದ್ದಾರೆ.


ಇದನ್ನೂ ಓದಿ: ರಾಜಕೀಯ ಮುಖಂಡರ ಆರ್‌ಎಸ್‌ಎಸ್ ವಿರೋಧವಷ್ಟೇ ಸಾಲದು; ವಿಷಪೂರಿತ ಸಿದ್ಧಾಂತವನ್ನು ತೊಲಗಿಸುವ ಹೋರಾಟಕ್ಕೆ ಸಜ್ಜಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...