Homeಕರ್ನಾಟಕಜನಾರ್ದನ ರೆಡ್ಡಿ ಆಸ್ತಿ ಮುಟ್ಟುಗೋಲು ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಕಿಡಿ

ಜನಾರ್ದನ ರೆಡ್ಡಿ ಆಸ್ತಿ ಮುಟ್ಟುಗೋಲು ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಕಿಡಿ

- Advertisement -
- Advertisement -

ಗಣಿ ಉದ್ಯಮಿ, ರಾಜಕಾರಣಿ ಗಾಲಿ ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡದ ಬಿಜೆಪಿ ಸರ್ಕಾರವನ್ನು ರಾಜ್ಯ ಹೈಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದ್ದು, ಐದು ವರ್ಷಗಳಿಂದ ಒಪ್ಪಿಗೆ ನೀಡುವ ಬಗ್ಗೆ ಏಕೆ ನಿರ್ಧಾರ ಕೈಗೊಂಡಿಲ್ಲ ಎಂದು ಪೀಠವು ಸರ್ಕಾರವನ್ನು ಪ್ರಶ್ನಿಸಿದೆ.

“ಸರ್ಕಾರದ ಪ್ರಕಾರ, ಕ್ರಮ ಕೈಗೊಳ್ಳದಿರುವುದು ಕೂಡ ‘ಕ್ರಿಯೆ’ ಆಗಿರಬಹುದು. ಆದರೆ, ಇದು ನ್ಯಾಯಾಲಯಕ್ಕೆ ಸ್ವೀಕಾರಾರ್ಹವಲ್ಲ” ಎಂದು ಪೀಠ ಹೇಳಿದೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆಯೂ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರೀಯ ತನಿಖಾ ದಳ (ಸಿಬಿಐ) ಆಗಸ್ಟ್ 30, 2022 ರಂದು ಜನಾರ್ದನ ರೆಡ್ಡಿ ಅವರ ಆಸ್ತಿಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂದು ಆರೋಪಿಸಿ ಅವರ ಆಸ್ತಿಯನ್ನು ವಶಕ್ಕೆ ಪಡೆಯಲು ಸರ್ಕಾರದ ಒಪ್ಪಿಗೆಯನ್ನು ಕೇಳಿತ್ತು.

ಆದರೆ, ಸರಕಾರ ಇದುವರೆಗೂ ಒಪ್ಪಿಗೆ ನೀಡಿಲ್ಲ. ಈ ಬೆಳವಣಿಗೆಯ ಬೆನ್ನಲ್ಲೇ ಸಿಬಿಐ ಈ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿತ್ತು.

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ 219 ಹೊಸ ಆಸ್ತಿಗಳನ್ನು ಪತ್ತೆ ಮಾಡಿದ್ದು, ಅಕ್ರಮ ಆದಾಯದ ಮೂಲಗಳ ಮೂಲಕ ಈ ಆಸ್ತಿಗಳನ್ನು ಖರೀದಿಸಲಾಗಿದೆ ಎಂದು ತನಿಖೆಗಳು ತೋರಿಸಿವೆ ಎಂದು ಸಿಬಿಐ ಹೇಳಿದೆ.

ಜನಾರ್ದನ ರೆಡ್ಡಿ ಅವರ ವಿರುದ್ಧ ಕ್ರಮ ಕೈಗೊಂಡ ನಂತರ ಅವರು ಕರ್ನೂಲ್ ಮತ್ತು ರಂಗಾರೆಡ್ಡಿ ಜಿಲ್ಲೆಗಳಲ್ಲಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಸಿಬಿಐ ಹೇಳಿಕೊಂಡಿದೆ. ಜನಾರ್ದನ ರೆಡ್ಡಿ ಅವರು ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸಿದ್ದು, ಚುನಾವಣಾ ಪ್ರಚಾರವನ್ನೂ ಪ್ರಾರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...