Homeಮುಖಪುಟರಕ್ಷಣಾ ಖರೀದಿಯಲ್ಲಿ ವಿಳಂಬ | ಅಸಮಾಧಾನ ವ್ಯಕ್ತಪಡಿಸಿದ ವಾಯುಪಡೆ ಮುಖ್ಯಸ್ಥರು

ರಕ್ಷಣಾ ಖರೀದಿಯಲ್ಲಿ ವಿಳಂಬ | ಅಸಮಾಧಾನ ವ್ಯಕ್ತಪಡಿಸಿದ ವಾಯುಪಡೆ ಮುಖ್ಯಸ್ಥರು

- Advertisement -
- Advertisement -

ಹಲವಾರು ರಕ್ಷಣಾ ಸಾಮಗ್ರಿಗಳ ಖರೀದಿ ಯೋಜನೆಗಳಲ್ಲಿ ವಿಳಂಬ ಮತ್ತು ಸೈನಿಕ ವೇದಿಕೆಗಳ ಪೂರೈಕೆ ವೇಳಾಪಟ್ಟಿಯನ್ನು ಪಾಲಿಸದಿರುವ ಬಗ್ಗೆ ಭಾರತೀಯ ವಾಯುಸೇನೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಗುರುವಾರ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ರಕ್ಷಣಾ ಖರೀದಿಯಲ್ಲಿ ವಿಳಂಬ

ಭಾರತೀಯ ಕೈಗಾರಿಕಾ ಒಕ್ಕೂಟದ ಕಾರ್ಯಕ್ರಮದಲ್ಲಿ ಮಾತನಾಡಿದ ಅಮರ್ ಪ್ರೀತ್ ಸಿಂಗ್, ಸಮಯಸೂಚಿಗಳನ್ನು ಪಾಲಿಸುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಅದಾಗ್ಯೂ, ಅವರು ಯಾವ ಯೋಜನೆಗಳನ್ನು ಉಲ್ಲೇಖಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

“ನನಗೆ ಗೊತ್ತಿರುವ ಹಾಗೆ, ಯಾವುದೇ ಯೋಜನೆಯೂ ಸಮಯಕ್ಕೆ ಮುಗಿದಿಲ್ಲ” ಎಂದು ಅವರು ಹೇಳಿದ್ದು, ಆದರೆ ಸೈನ್ಯವು “ತಪ್ಪು ಮಾಡಿದವರನ್ನು ತಪ್ಪು ಮಾಡಿದವರು ಎಂದು ಬಹಿರಂಗವಾಗಿ ಹೇಳದಿರಲು ಆದ್ಯತೆ ನೀಡಿದೆ” ಎಂದು ಅವರು ತಿಳಿಸಿದ್ದಾರೆ.

ಇದು ಪರಿಶೀಲಿಸಬೇಕಾದ ವಿಷಯ ಎಂದು ಹೇಳಿದ ಅವರು, “ಸಾಧಿಸಲಾಗದದ್ದನ್ನು ನಾವು ಏಕೆ ಭರವಸೆ ನೀಡಬೇಕು?” ಎಂದು ಹೇಳಿದ್ದಾರೆ.

“ಒಪ್ಪಂದಕ್ಕೆ ಸಹಿ ಹಾಕುವಾಗ, ಕೆಲವೊಮ್ಮೆ, ಅದು ಆಗುವುದಿಲ್ಲ ಎಂದು ನಮಗೆ ಖಚಿತ ಗೊತ್ತಿರುತ್ತದೆ. ಆದರೆ ನಾವು ಒಪ್ಪಂದಕ್ಕೆ ಸಹಿ ಹಾಕುತ್ತೇವೆ ಮತ್ತು ಅದರ ನಂತರ ಏನು ಮಾಡಬಹುದು ಎಂದು ನೋಡುತ್ತೇವೆ… ನಿಸ್ಸಂಶಯವಾಗಿ ನಂತರ ಪ್ರಕ್ರಿಯೆಯು ದುರ್ಬಲಗೊಳ್ಳುತ್ತದೆ.” ಎಂದು ಅವರು ಹೇಳಿದ್ದಾರೆ.

ವಾಯು ಶಕ್ತಿ ಇಲ್ಲದೆ ಯಾವುದೇ ಮಿಲಿಟರಿ ಕಾರ್ಯಾಚರಣೆಗಳನ್ನು ನಡೆಸಲಾಗುವುದಿಲ್ಲ ಎಂದು ಅಮರ್ ಪ್ರೀತ್ ಸಿಂಗ್ ಹೇಳಿದ್ದು, ಆಪರೇಷನ್ ಸಿಂಧೂರ ಅದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಾಯು ಸೇನೆಯ ವಿಷಯದಲ್ಲಿ ನಮ್ಮ ಗಮನವು, ನಮಗೆ ಸಾಮರ್ಥ್ಯವಿದೆ ಎಂದು ನಾವು ಖಚಿತಪಡಿಸಿಕೊಳ್ಳಬೇಕು. ನಾವು ಭಾರತದಲ್ಲಿ ಉತ್ಪಾದನೆಯ ಬಗ್ಗೆ ಮಾತ್ರ ಮಾತನಾಡಲು ಸಾಧ್ಯವಿಲ್ಲ, ನಾವು ಭಾರತದಲ್ಲಿ ವಿನ್ಯಾಸ ಮತ್ತು ಅಭಿವೃದ್ಧಿಯನ್ನು ಪ್ರಾರಂಭಿಸಬೇಕಾಗಿದೆ.” ಎಂದು ಅವರು ಹೇಳಿದ್ದಾರೆ.

“ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯು ಆತ್ಮನಿರ್ಭರ್ತ [ಸ್ವಾವಲಂಬನೆ] ಒಂದೇ ಪರಿಹಾರ ಎಂದು ನಮಗೆ ಅರಿತುಕೊಂಡಿದ್ದೇವೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯು ಸಶಸ್ತ್ರ ಪಡೆಗಳಿಗೆ ನಾವು ಎಲ್ಲಿಗೆ ಹೋಗುತ್ತಿದ್ದೇವೆ ಮತ್ತು ಭವಿಷ್ಯದಲ್ಲಿ ನಮಗೆ ಏನು ಬೇಕು ಎಂಬುದರ ಸ್ಪಷ್ಟ ಕಲ್ಪನೆಯನ್ನು ನೀಡಿದೆ” ಎಂದು ಅವರು ಹೇಳಿದ್ದಾರೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಿಂದ 83 ತೇಜಸ್ ಎಂಕೆ 1ಎ ಫೈಟರ್ ಜೆಟ್‌ಗಳ ವಿತರಣೆಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಅಮರ್ ಪ್ರೀತ್ ಸಿಂಗ್ ಅವರ ಹೇಳಿಕೆಗಳು ಬಂದಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಲಘು ಯುದ್ಧ ವಿಮಾನದ ಒಪ್ಪಂದಕ್ಕೆ 2021 ರಲ್ಲಿ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಕಂಪನಿಯೊಂದಿಗೆ ಸಹಿ ಹಾಕಲಾಗಿತ್ತು.

ವಾಯುಪಡೆಯು 70 HTT-40 ಮೂಲ ತರಬೇತಿ ವಿಮಾನಗಳ ವಿತರಣೆಗಾಗಿ HAL ಜೊತೆ ಒಪ್ಪಂದಕ್ಕೆ ಸಹಿ ಹಾಕಿತ್ತು. ವಿಮಾನದ ಸೇರ್ಪಡೆ ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾಗಬೇಕಿತ್ತು. ಆದರೆ ಅದು ವಿಳಂಬವಾಗಿತ್ತು. ರಕ್ಷಣಾ ಖರೀದಿಯಲ್ಲಿ ವಿಳಂಬ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೇರಳದ 104 ಶಾಲೆಗಳನ್ನು ‘ಮಾದಕ ವಸ್ತು ತಾಣ’ಗಳೆಂದು ಗುರುತಿಸಿದ ಅಬಕಾರಿ ಇಲಾಖೆ; ವರದಿ

ಕೇರಳದ 104 ಶಾಲೆಗಳನ್ನು ‘ಮಾದಕ ವಸ್ತು ತಾಣ’ಗಳೆಂದು ಗುರುತಿಸಿದ ಅಬಕಾರಿ ಇಲಾಖೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...