Homeಕರ್ನಾಟಕವಿಪಕ್ಷ ನಾಯಕನ ಆಯ್ಕೆ ವಿಳಂಬ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಾದ ಬಿಜೆಪಿಯೇ ಸಂಕಷ್ಟದಲ್ಲಿ...

ವಿಪಕ್ಷ ನಾಯಕನ ಆಯ್ಕೆ ವಿಳಂಬ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಾದ ಬಿಜೆಪಿಯೇ ಸಂಕಷ್ಟದಲ್ಲಿ…

- Advertisement -
- Advertisement -

ಸೋಮವಾರ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯ ಪಾಲರು ಭಾಷಣ ಮಾಡಿದ್ದಾರೆ. ಆದರೆ ಈವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ. ಇದು ಪಕ್ಷಕ್ಕೆ ತೀವ್ರ ಇರಿಸುಮುರಿಸು ಉಂಟುಮಾಡಿದ್ದು, ಅಧಿವೇಶದನದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಬೇಕಾದ ಬಿಜೆಪಿಯೇ ಈಗ ಸಂಕಷ್ಟಕ್ಕೆ ಸಿಲುಕಿದೆ.

ಇಂದು ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ

ಬಿಜೆಪಿ ಹೈಕಮಾಂಡ್​ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಲು ಸೋಮವಾರ ವೀಕ್ಷಕರನ್ನು ನೇಮಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನಾಯಕನ ಆಯ್ಕೆ ಮಾಡಲು ಕೇಂದ್ರೀಯ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ನೇಮಿಸಿದ್ದಾರೆ. ಅವರು ಈಗಾಗಲೇ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ಶಾಸಕಾಂಗ ಸಭೆ ನಡೆಯಲಿದ್ದಾರೆ. ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್​ಗೆ ಮಾಹಿತಿ ನೀಡಲಿದ್ದಾರೆ. ಬಳಿಕ ಅಧಿಕೃತವಾಗಿ ವಿರೋಧ ಪಕ್ಷ ನಾಯಕನ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಲಿಂಗಾಯತ ಸಮುದಾಯದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್ ರೇಸ್​ನಲ್ಲಿದ್ದಾರೆ. ಅಲ್ಲದೇ ಶಾಸಕ ಸುನಿಕ್ ಕುಮಾರ್ ಕೂಡ ವಿಪಕ್ಷ ನಾಯಕನ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆದರೆ ಯಾರಿಗೆ ವಿಪಕ್ಷ ನಾಯಕನ ಪಟ್ಟ ಎನ್ನುವುದು ಇನ್ನೂ ನಿಗೂಢವಾಗಿದೆ.

ಇದನ್ನೂ ಓದಿ: ವಿಪಕ್ಷ ನಾಯಕನಿಲ್ಲದೆ ಸದನ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬಿಜೆಪಿ ವಿರುದ್ಧ ಕಾಂಗ್ರೆಸ್​ ಟೀಕಾಪ್ರಹಾರ!

ಕಲಾಪ ಆರಂಭ ಆಗುವ ಮುನ್ನವೇ ವಿಪಕ್ಷ ನಾಯಕನ ಹೆಸರು ಅಂತಿಮ ಆಗಲಿದೆ ಎಂದು ಬಿಜೆಪಿ ಟ್ವೀಟ್ ಮಾಡಿತ್ತು. ಇತ್ತ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಹೋಗಿಬಂದಿದ್ದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ನಿಗದಿಯಾಗಿದ್ದ ಸಭೆ ನಡೆಯಲೇ ಇಲ್ಲ. ಹೀಗಾಗಿ ವಿಪಕ್ಷ ನಾಯಕನ ಆಯ್ಕೆ ನೆನೆಗುದಿಗೆ ಬಿದ್ದಿದೆ. ಇಷ್ಟೇ ಅಲ್ಲ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಅಟ್ಯಾಕ್ ಮಾಡಿದೆ.

”ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನ ಗೌರವಿಸಲಿಲ್ಲ. ಈಗ ವಿಪಕ್ಷ ಸ್ಥಾನದಲ್ಲಿದ್ದಾಗಲೂ ಗೌರವಿಸುತ್ತಿಲ್ಲ” ಎಂದು ಕಿಡಿಕಾರಿದೆ.

”ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಫಿಕ್ಸ್ ಮಾಡಲಾಗಿತ್ತು, ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಬಿಜೆಪಿ ಉತ್ತರಿಸಬೇಕು” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

”ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ! ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ” ಎಂದು ವಾಗ್ದಾಳಿ ನಡೆಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

0
ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಹಡಗನ್ನು ಸ್ಪೇನ್ ಬಂದರಿನಲ್ಲಿ ನಿಲ್ಲಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರೆಸ್ ಗುರುವಾರ ಹೇಳಿದ್ದಾರೆ. "ಇದೇ ಮೊದಲ ಬಾರಿಗೆ ನಾವು ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿಗೆ...