Homeಕರ್ನಾಟಕಒಳಮೀಸಲಾತಿ ಜಾರಿಗೆ ವಿಳಂಬ; ರಾಜಿನಾಮೆಗೆ ಆಗ್ರಹಿಸಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ

ಒಳಮೀಸಲಾತಿ ಜಾರಿಗೆ ವಿಳಂಬ; ರಾಜಿನಾಮೆಗೆ ಆಗ್ರಹಿಸಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ

- Advertisement -
- Advertisement -

ಪರಿಶಿಷ್ಟ ಜಾತಿಯೊಳಗೆ (ಎಸ್‌ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡಿರುವ ಹೋರಾಟಗಾರರು, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹದೇವಪ್ಪ ಅವರ ರಾಜಿನಾಮೆಗೆ ಆಗ್ರಹಿಸಿ ಮನೆಗೆ ಮುತ್ತಿಗೆ ಹಾಕುವುದಾಗಿ ಘೋಷಣೆ ಮಾಡಿದ್ದಾರೆ.

‘ಇದೇ ತಿಂಗಳ 10 ರಂದು ಸಚಿವ ಎಚ್‌.ಸಿ. ಮಹದೇವಪ್ಪ ಅವರ ಅಧಿಕೃತ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒಳಮೀಸಲಾತಿ ಹೋರಾಟಗಾರರು ಇಂದು ಮಾಹಿತಿ ನೀಡಿದರು.

“ಪರಿಶಿಷ್ಠ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು 2024ರ ಆಗಸ್ಟ್ 01 ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಭಾರತ ಸಂವಿಧಾನ ಸಾಮಾಜಿಕ ನ್ಯಾಯದ ತಾತ್ವಿಕ ಸ್ವರೂಪವನ್ನು ಎತ್ತಿ ಹಿಡಿಯುವ ತೀರ್ಪನ್ನು ನೀಡಿತು. ಕರ್ನಾಟಕ ರಾಜ್ಯದ ಹಿಂದುಳಿದವರ ನಾಯಕ, ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ವಾರಸುದಾರರೆಂದು ಬಿಂಬಿಸಿಕೊಳ್ಳುತ್ತಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಮಾನ್ಯ ಸುಪ್ರೀಂ ಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳಲು ಒಲ್ಲದ ಮನಸ್ಸಿನಿಂದ ಮೂರು ತಿಂಗಳು ತಡವಾಗಿ 13 ನವೆಂಬರ್ 2024 ರಂದು ಸಚಿವ ಸಂಪುಟದಲ್ಲಿ ಒಪ್ಪಿಕೊಂಡಿದ್ದಾರೆ. ನಿವೃತ್ತ ನ್ಯಾಯಾಧೀಶರಾದ ಹೆಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ಆಯೋಗ ರಚನೆಗೊಂಡು ಅತ್ಯಂತ ಪಾರದರ್ಶಕತೆಯಿಂದ ಕೂಡಿದ, ಯಾವ ಸಮುದಾಯಗಳಿಗೂ ಅನ್ಯಾಯವಾಗದಂತೆ, ಪರಿಶಿಷ್ಠ ಜಾತಿಗಳನ್ನು 5 ಪ್ರವರ್ಗಗಳನ್ನಾಗಿ ಮಾಡಿ 04 ಜುಲೈ 2025ರಂದು ತನ್ನ ಏಳು ಶಿಫಾರಸ್ಸುಗಳನ್ನು ಸರ್ಕಾರಕ್ಕೆ ಸಲ್ಲಿಸಿತು. ಪರಿಶಿಷ್ಠ ಜಾತಿಗಳ ಮೀಸಲಾತಿಯ ಸಿಂಹಪಾಲನ್ನು ಪಡೆದಿರುವ ರಾಜಕೀಯವಾಗಿ, ಆರ್ಥಿಕವಾಗಿ, ಆಡಳಿತಾತ್ಮಕವಾಗಿ ಬಲಾಢ್ಯ ಸಮುದಾಯಗಳ ವಿರೋಧಕ್ಕೆ ಹೆದರಿ, ಸರ್ಕಾರ ಮತ್ತೆ ಮೌನವಹಿಸಿತು” ಎಂದು ಹೋರಾಟಗಾರರು ಬೇಸರ ಹೊರಹಾಕಿದ್ದಾರೆ.

“ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಸರ್ಕಾರದ ವಿಳಂಬ ದೋರಣೆಯನ್ನು ಖಂಡಿಸಿ, ಹೆಚ್.ಎನ್.ನಾಗಮೋಹನ್ ದಾಸ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಲು 11 ಆಗಸ್ಟ್ 2025 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಒಳಮೀಸಲಾತಿ ಹೋರಾಟ ಆರಂಭಿಸಲಾಗಿತ್ತು. ಅದರ ಪರಿಣಾಮ, 19 ಆಗಸ್ಟ್ 2025 ರಂದು ನಾಗಮೋಹನ್ ದಾಸ್ ಆಯೋಗದ ಶಿಫಾರಸ್ಸುಗಳ 6 ಪ್ರವರ್ಗಗಳ ಬದಲಾಗಿ 3 ಪ್ರವರ್ಗಗಳನ್ನಾಗಿ ಮಾರ್ಪಡಿಸಿ, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು. 20 ಆಗಸ್ಟ್ 2025ರಂದು ಮಳೆಗಾಲದ ಅಧಿವೇಶನದಲ್ಲಿ ಆದೇಶವನ್ನು ಪ್ರಕಟಿಸಿತು” ಎಂದು ಮಾಹಿತಿ ನೀಡಿದರು.

“ಅಲೆಮಾರಿ ಸಮುದಾಯಗಳನ್ನು ರಾಜಕೀಯವಾಗಿ ಬಲಾಢ್ಯರಾದ ಪ್ರವರ್ಗ-ಸಿಗೆ ಸೇರಿಸಿ ಕಳೆದ 79ವರ್ಷಗಳಿಂದ ಅವರಿಗಾದ ಅನ್ಯಾಯವನ್ನು ಮತ್ತೆ ಮುಂದುವರೆಯಲು ಬೀದಿಪಾಲು ಮಾಡಲಾಯಿತು. ಕೊನೆಗೆ ಪರಿಶಿಷ್ಠ ಜಾತಿಗಳನ್ನು 3 ಪ್ರವರ್ಗಗಳನ್ನಾಗಿ ಮಾಡಿ ಪ್ರವರ್ಗ-ಎ ಗೆ ಶೇ.6, ಪ್ರವರ್ಗ- ಬಿಗೆ ಶೇ6, ಪ್ರವರ್ಗ-ಸಿಗೆ 5 ಎಂದು ಶೇ. 17 ಮೀಸಲಾತಿಯನ್ನು ಹಂಚಿಕೆ ಮಾಡಲಾಯಿತು. ದುಡಿದವನು ಕಳಕೊಂಡ, ದುಡಿಯಲಾರದವ ಎಲ್ಲ ಪಡಕೊಂಡ ಎನ್ನುಂತೆ ಪ್ರವರ್ಗ-ಬಿ ಶೇ. 5 ಬದಲಾಗಿ ಶೇ. 6, ಪ್ರವರ್ಗ-ಸಿ ಶೇ. 4ರ ಬದಲಾಗಿ ಶೇ.5 ಹೆಚ್ಚಿನ ಒಳಮೀಸಲಾತಿ ಪಡೆದವು. ಅತ್ಯಂತ ಹಿಂದುಳಿದ ಸಮುದಾಯವೆಂದು ಪ್ರವರ್ಗ-ಎ ಸಮುದಾಯಗಳನ್ನು ಸರ್ಕಾರವೇ ಗುರುತಿಸಿದ್ದರೂ, ಸಾಮಾಜಿಕ ನ್ಯಾಯದ ತತ್ವದಂತೆ ಶೇ.7 ಮೀಸಲಾತಿಯಿಂದ ವಂಚಿತಗೊಂಡಿತು. ಒಳಮೀಸಲಾತಿ ಎಂದರೆ ಕೇವಲ ತಲೆ ಎಣಿಕೆಯಲ್ಲ. ಚಾರಿತ್ರಿಕವಾಗಿ ಅಸಮಾನತೆಗೆ ಗುರಿಯಾದ ಸೌಲಭ್ಯ ವಂಚಿತರಿಗೆ ಅಲ್ಪಪ್ರಮಾಣದ ಹೆಚ್ಚುವರಿ ಪರಿಹಾರವನ್ನು ಹರಿಯಾಣ ರಾಜ್ಯದ ಮಾದರಿಯಲ್ಲಿ ಹಂಚಿಕೆ ಮಾಡಲು ಸರ್ಕಾರ ವಿಫಲವಾಯಿತು” ಎಂದು ಅವರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪ್ಯಾರಾ-2 ಕ್ಕೆ ತಿದ್ದುಪಡಿ ಮಾಡಬೇಕು

“ಒಳಮೀಸಲಾತಿ ಸಂಬಂಧ ದಿನಾಂಕ: 25 ಆಗಸ್ಟ್ 2025 ರ ಸರ್ಕಾರದ ಆದೇಶ ಹೆಬ್ಬಂಡೆಯಂತೆ ಪ್ರವರ್ಗ-ಎ ಸಮುದಾಯಗಳ ಮೇಲೆ ಬಿದ್ದಂತಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಾರದಂತೆ ಕುಯುಕ್ತಿ, ಸಂಚಿನಿಂದ ಕೂಡಿದ ಪ್ಯಾರಾ-2 ತೆಗೆಯಬೇಕು” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ದ ಮುಖಂಡರು ಆಗ್ರಹಿಸಿದರು.

“ಏಕೆಂದರೆ, ಆಯೋಗದ ವರದಿಯಲ್ಲಿನ ಪ್ರವರ್ಗ-ಇ ರಲ್ಲಿನ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಈ ಮೂರು ಸಮುದಾಯಗಳು ತಮ್ಮ ಮೂಲ ಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ ಮೂರು ಜಾತಿಗಳು ಅನುಬಂಧಗಳಲ್ಲಿರುವ ಪ್ರವರ್ಗ-ಎ ಅಥವಾ ಬಿ ಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದು ಎದು ಹೇಳಲಾಗಿದೆ. ಪ್ಯಾರಾ-2ನೇ ಶಿಫಾರಸ್ಸಿನಂತೆ ಒಳಮೀಸಲಾತಿ ಜಾರಿಯಾದರೆ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ನೆಪದಲ್ಲಿ ಪ್ರವರ್ಗ-ಬಿ ಮೆರಿಟ್ ಅಭ್ಯರ್ಥಿಗಳು ಪ್ರವರ್ಗ-ಎ ನಲ್ಲಿ ಅರ್ಜಿಗಳನ್ನು ಸಲ್ಲಿಸಿ ಕಡಿಮೆ ಮೆರಿಟ್ ಇರುವ ಮಾದಿಗ ಸಮುದಾಯಗಳೊಂದಿಗೆ ಸ್ಪರ್ಧಿಸಿ ಮೇಲುಗೈ ಪಡೆಯುವುದರಿಂದ ನಿಜವಾದ ಮಾದಿಗ ಸಮುದಾಯಗಳ ಅಭ್ಯರ್ಥಿಗಳಿಗೆ ಮತ್ತೊಮ್ಮೆ ನೇಮಕಾತಿಗಳಲ್ಲಿ ಹಿನ್ನಡೆಯಾಗುವ ಸಂಭವ ಹೆಚ್ಚಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಪ್ರವರ್ಗ-ಎ ಅಭ್ಯರ್ಥಿಗಳಾದ ಮಾದಿಗ ಸಮುದಾಯದ ಅಭ್ಯರ್ಥಿಗಳು, ಸಹಜವಾಗಿ ಕಡಿಮೆ ಮೆರಿಟ್‌ನವರಾಗಿದ್ದು, ಪ್ರವರ್ಗ-ಬಿ ಸಮುದಾಯಗಳು ಅಧಿಕ ಮೆರಿಟ್ ಹೊಂದಿರುವುದರಿಂದ ಪ್ರತ್ಯೇಕವಾಗಿ ಐತಿಹಾಸಿಕವಾಗಿ ಒಳಮೀಸಲಾತಿ ಹೋರಾಟ ನಡೆಯುತ್ತಿದೆ ಎನ್ನುವುದನ್ನು ಮರೆಯದಿರೋಣ. ಆದ್ದರಿಂದ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಜಾತಿ ಪ್ರಮಾಣ ಪತ್ರಗಳಿರುವ ಹೊಲೆಯರು, ಮಾದಿಗರು, ಇನ್ನಿತರರು ತಮ್ಮ ಮೂಲ ಜಾತಿ ಪ್ರಮಾಣ ಪತ್ರ ಅಧಾರದಲ್ಲಿ ಪ್ರವರ್ಗ-ಎ, ಪ್ರವರ್ಗ-ಬಿ ಯಲ್ಲಿ ಒಳಮೀಸಲಾತಿ ಪಡೆಯಲು ಸರ್ಕಾರ ಆದೇಶಿಸಬೇಕು” ಎಂದು ಒತ್ತಾಯಿಸಿದರು.

ಸಚಿವರು ಮತ್ತು ಅಧಿಕಾರಿಗಳಿಂದ ಒಳಮೀಸಲಾತಿ ಜಾರಿಗೆ ಅಡ್ಡಿ

“25-08-2025 ರಂದು ಸರ್ಕಾರ ಹೊರಡಿಸಿದ ಆದೇಶದ ಒಳಸಂಚನ್ನು ವಿಫಲಗೊಳಿಸಲು ಒಳಮೀಸಲಾತಿ ಹೋರಾಟಗಾರರು ಪ್ರಯತ್ನಗಳು ನಡೆಸುತ್ತಿರುವಾಗಲೇ, ಸಮಾಜ ಕಲ್ಯಾಣ ಇಲಾಖೆ ಸಚಿವರು, ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ಮಣಿವಣ್ಣನ್, ಆಯುಕ್ತರಾದ ರಾಕೇಶ್ ಕುಮಾರ್, ಸಲಹೆಗಾರರಾದ ವೆಂಕಟಯ್ಯ ಅವರು ಸರ್ಕಾರದಿಂದ ಬಂದ ಕಡತಕ್ಕೆ ಒಪ್ಪಿಗೆ ಸೂಚಿಸಲು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಒಳಮೀಸಲಾತಿ ಆದೇಶವು ಕೇವಲ ನೇರ ನೇಮಕಾತಿಗೆ ಮಾತ್ರ ಅನ್ವಯಿಸುತ್ತದೆ, ಬಡ್ತಿ ಮತ್ತು ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಗೆ ಅನ್ವಯಿಸುವುದಿಲ್ಲವೆಂದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ನೇರ ನೇಮಕಾತಿ, ಬಡ್ತಿ ನೇಮಕಾತಿ ರೋಸ್ಟರ್ ಬಿಂದುಗಳಿಗೆ ಸಂಬಂಧಿಸಿದ ಕರ್ನಾಟಕ ರಾಜ್ಯದ ಆದೇಶಗಳನ್ನು ಉಲ್ಲಂಘಿಸಿ ಸರ್ಕಾರವನ್ನು ದಾರಿತಪ್ಪಿಸುತ್ತಿದ್ದಾರೆ. ಸರ್ಕಾರ ಆದೇಶದ ಪ್ಯಾರಾ-2ನ್ನು ತಯಾರಿಸಿದವರೂ ಇವರೇ ಆಗಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

“ಒಳಮೀಸಲಾತಿ ವಿರೋಧಿ ಮನಸ್ಥಿತಿಯ ಅವರ ಮಾತು, ನಡುವಳಿಕೆಗಳು ಒಳಮೀಸಲಾತಿ ಹೋರಾಟಗಾರರ ಎದುರು ಗುಡುಗುತ್ತಿದ್ದಾರೆ ಎಂದು ಅರ್ಥೈಯಿಸಿಕೊಳ್ಳಬೇಕು. ಇವರ‍್ಯಾರು ಸಾರ್ವಜನಿಕ ಸೇವಕರಾಗಲು ಯೋಗ್ಯರಲ್ಲ. ಇಲಾಖೆಯಲ್ಲಿ ಇವರು ಇರುವ ತನಕ ಒಳಮೀಸಲಾತಿ ಕುತ್ತಿಗೆ ಕೊಯ್ಯುವುದಷ್ಟೆ ಅಲ್ಲ, ಮಾದಿಗ ಸಂಬಂಧಿತ ಸಮುದಾಯಗಳ ಅಭಿವೃದ್ಧಿಗೂ ಕಂಟಕ ಪ್ರಾಯವಾಗಿದ್ದಾರೆ. ಪರಿಶಿಷ್ಠ ಜಾತಿ ಉಪಯೋಜನೆಯ ಸಾವಿರಾರು ಕೋಟಿ ಹಣವನ್ನು ದುರಪಯೋಗ ಪಡಿಸಿಕೊಂಡು, ರೂ. 11,000/- ಕೋಟಿ ಹಣವನ್ನು ಕಾನೂನು ಬಾಹಿರವಾಗಿ ಗ್ಯಾರಂಟಿ ಯೋಜನೆಗೆ ನೀಡುವುದರ ಮೂಲಕ ಮುಖ್ಯಮಂತ್ರಿಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಂಡು ಪರಿಶಿಷ್ಠ ಜಾತಿಯ 101 ಜಾತಿಗಳಿಗೂ ದ್ರೋಹ ಬಗೆದಿದ್ದಾರೆ” ಎಂದು ಗಂಭಿರ ಆರೋಪ ಮಾಡಿದರು.

“ಆದ್ದರಿಂದ, ಪರಿಶಿಷ್ಠ ಜಾತಿಗಳ ಒಳಮೀಸಲಾತಿ ವಿರೋಧಿಗಳಾದ ಸಮಾಜ ಕಲ್ಯಾಣ ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲಾಖೆಯ ಮುಖ್ಯಸ್ಥರನ್ನು ಕೂಡಲೇ ವರ್ಗಾವಣೆ ಮಾಡಿ ನೇರ ನೇಮಕ, ಬಡ್ತಿ, ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಿ ಒಳಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ 10 ಅಕ್ಟೋಬರ್ 2025ರಂದು ಸಮಾಜ ಕಲ್ಯಾಣ ಸಚಿವರ ಮನೆಗೆ ಮುತ್ತಿಗೆ ಹಾಕುವ ಹೋರಾಟಕ್ಕೆ ಎಲ್ಲ ಜಿಲ್ಲೆಗಳಿಂದ ಒಳಮೀಸಲಾತಿ ಹೋರಾಟಗಾರರು ಭಾಗವಹಿಸಿ ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಒಳಮೀಸಲಾತಿ ಹೋರಾಟಗಾರರಾದ ಎಸ್‌.ಮಾರೆಪ್ಪ, ಬಸವರಾಜ್‌ ಕೌತಾಳ್‌, ಅಂಬಣ್ಣ ಅರೋಲಿಕರ್‌, ಚಂದ್ರು ತರಹುಣಿಸೆ, ವೇಣುಗೋಪಾಲ್‌ ಮೌರ್ಯ, ಮಂಜುನಾಥ್‌ ಮರಾಟ ಉಪಸ್ಥಿತರಿದ್ದರು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆ: ಶಾಲಾ ಸಮಯ ಬದಲಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...