Homeಮುಖಪುಟಅಧಿವೇಶನ ಕರೆಯಲು ವಿಳಂಬ: ಪ್ರಧಾನಿ ನಿವಾಸಕ್ಕೆ ಮುತ್ತಿಗೆ- ಗೆಹ್ಲೋಟ್ ಎಚ್ಚರಿಕೆ

ಅಧಿವೇಶನ ಕರೆಯಲು ವಿಳಂಬ: ಪ್ರಧಾನಿ ನಿವಾಸಕ್ಕೆ ಮುತ್ತಿಗೆ- ಗೆಹ್ಲೋಟ್ ಎಚ್ಚರಿಕೆ

ಸರ್ಕಾರವನ್ನು ಉರುಳಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದ್ದಾರೆ.

- Advertisement -
ಬಹುಮತ ಸಾಬೀತುಪಡಿಸಲು ಅಧಿವೇಶನ ಕರೆಯುವುದಕ್ಕೆ ರಾಜ್ಯಪಾಲರು ಹಿಂದೇಟು ಹಾಕಿರುವುದರಿಂದ ಕೂಡಲೇ ಮಧ್ಯಪ್ರವೇಶಿಸುವಂತೆ ರಾಷ್ಟ್ರಪತಿಗಳನ್ನು ಸಂಪರ್ಕಿಸಿ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಜೈಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ, ಅದಿವೇಶನ ಕರೆಯಲು ರಾಜ್ಯಪಾಲರಿಗೆ ಸೂಚಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು. ಅಗತ್ಯವಿದ್ದರೆ ಪ್ರಧಾನಿ ನರೇಂದ್ರ ಮೋದಿ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆಗಳನ್ನು ನಡೆಸಿದರು.
ರಾಜಧಾನಿ ಜೈಪುರದಲ್ಲಿ ಬೃಹತ್ ಸಂಖ್ಯೆಯಲ್ಲಿ ಸಮಾವೇಶಗೊಂಡ ಯುವ ಕಾಂಗ್ರೆಸ್ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯಪಾಲರು ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದರು. ಕಾಂಗ್ರೆಸ್ ಸರ್ಕಾರ ಸದನದಲ್ಲಿ ಬಹುಮತ ಸಾಬೀತುಪಡಿಸಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಜನರಿಂದ  ಆಯ್ಕೆಯಾದ ಸರ್ಕಾರವನ್ನು ಉರುಳಿಸಲು ಯತ್ನಿಸಿರುವ ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ಇಂತಹ ಪ್ರಯತ್ನಗಳು ಬಿಜೆಪಿ ನಿಲ್ಲಿಸಬೇಕು ಎಂದು ಆಗ್ರಹಿಸಿರುವ ಯುವ ಕಾಂಗ್ರೆಸ್ ಆಧ್ಯಕ್ಷರು ಗೆಹ್ಲೋಟ್ ಸರ್ಕಾರ ಅವಧಿ ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
- Advertisement -

ನಿನ್ನೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜಭವನಕ್ಕೆ ಮುತ್ತಿಗೆ ಹಾಕುವ ಬೆದರಿಕೆ ಹಾಕಿದ್ದರು. ಇದು ಭಾರತೀಯ ದಂಡ ಸಂಹಿತೆ 124 ಎ ಪ್ರಕಾರ ದೇಶದ್ರೋಹವಾಗುತ್ತದೆ ಎಂದು ರಾಜಸ್ಥಾನ ಬಿಜೆಪಿ ಆರೋಪಿಸಿದ್ದು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಕಾಲ್‌ರಾಜ್‌ ಮಿಶ್ರ ಅವರಿಗೆ ಮನವಿ ಸಲ್ಲಿಸಿದೆ.


ಓದಿ:

ರಾಜಸ್ಥಾನ ಬಿಕ್ಕಟ್ಟು: ಅಧಿವೇಶನ ಕರೆಯಲು ಆಗ್ರಹಿಸಿ ತಡರಾತ್ರಿವರೆಗೂ ಪ್ರತಿಭಟನೆ – 102 ಶಾಸಕರ ಪಟ್ಟಿ ರವಾನೆ


ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...