Homeಮುಖಪುಟದೆಹಲಿ: ಸ್ನೇಹಿತ ಸೇರಿದಂತೆ ಮೂವರು ದುಷ್ಕರ್ಮಿಗಳಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ದೆಹಲಿ: ಸ್ನೇಹಿತ ಸೇರಿದಂತೆ ಮೂವರು ದುಷ್ಕರ್ಮಿಗಳಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ದೆಹಲಿಯಲ್ಲಿ 16 ವರ್ಷದ ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬಾತ ಸಂತ್ರಸ್ತ ಬಾಲಕಿಯ ಸ್ನೇಹಿತ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಜುಲೈ 6ರಂದು ಬಾಲಕಿಯು ಜಾಲಿರೈಡ್‌ಗೆ ತನ್ನ ಸ್ನೇಹಿತನ ಜೊತೆ ಹೋದಾಗ, ಆತನೊಂದಿಗೆ ಇನ್ನಿಬ್ಬರು ದುಷ್ಕರ್ಮಿಗಳು ಸೇರಿಕೊಂಡು ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಫ್‌ಐಆರ್ ದಾಖಲಾಗಿದ್ದು, ಖಾಸಗಿ ಟ್ಯಾಕ್ಸಿ ಚಾಲಕರಾಗಿರುವ ಮೂವರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಆರೋಪಿಗಳನ್ನು ಮೊಹಮ್ಮದ್ ಆರಿಫ್ (23), ಮನೋಜ್ ಕುಮಾರ್ (25) ಮತ್ತು ರೂಪೇಶ್ ಕುಮಾರ್ (35) ಎಂದು ಗುರುತಿಸಲಾಗಿದೆ. ನಾವು ಸಿಆರ್‌ಪಿಸಿಯ ಸೆಕ್ಷನ್ 164ರ ಅಡಿಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಡಿಸಿಪಿ (ನೈಋತ್ಯ ಜಿಲ್ಲೆ) ಸಿ.ಮನೋಜ್ ಹೇಳಿದ್ದಾರೆ.

ಜುಲೈ 8ರಂದು ಮುಂಜಾನೆ 4 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಬಾಲಕಿಯ ತಂದೆಯಿಂದ ಕರೆ ಬಂದಿತು. ತಮ್ಮ ಮಗಳಿಗೆ ಮೂವರು ಯುವಕರು ಕಿರುಕುಳ ನೀಡಿದ್ದಾರೆ ಎಂದು ಅವರು ನೋವು ತೋಡಿಕೊಂಡರು ಎಂದು ಮಾಹಿತಿ ನೀಡಿದ್ದಾರೆ.

“ಜುಲೈ 6ರಂದು ರಾತ್ರಿ 8.30ರ ಸುಮಾರಿಗೆ ಸಂತ್ರಸ್ತ ಬಾಲಕಿಯು ಕಾರಿನಲ್ಲಿ ಮೂವರು ವ್ಯಕ್ತಿಗಳೊಂದಿಗೆ ಜಾಲಿ ರೈಡ್‌ ಹೋಗಿದ್ದರು. ಜುಲೈ 7ರಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಬಾಲಕಿ ಹಿಂತಿರುಗಿದ್ದು ತನ್ನ ಮೇಲಾದ ದೌರ್ಜನ್ಯವನ್ನು ಪೋಷಕರಲ್ಲಿ ತಿಳಿಸಿದರು” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಹೈದ್ರಾಬಾದ್‌: ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಸರ್ಕಲ್‌ ಇನ್‌ಸ್ಪೆಕ್ಟರ್‌‌

“ಹುಡುಗಿಯನ್ನು ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಪ್ತಸಮಾಲೋಚಕರ ಮೂಲಕ ಪರೀಕ್ಷೆ ನಡೆಸಿದಾಗ ಅನೇಕ ಸಂಗತಿಗಳು ತಿಳಿದುಬಂದವು. ಜುಲೈ 6ರಂದು ಬಾಲಕಿಯನ್ನು ಭೇಟಿಯಾದ ಇಬ್ಬರು ಪರಿಚಿತ ವ್ಯಕ್ತಿಗಳು ತಮ್ಮ ವ್ಯಾಗನ್ಆರ್ ಕಾರಿನಲ್ಲಿ ಜಾಯ್‌ರೈಡ್ ಮಾಡಲು ಬಾಲಕಿಯನ್ನು ಆಹ್ವಾನಿಸಿದರು. ಆ ವ್ಯಕ್ತಿಗಳು ಮದ್ಯವನ್ನು ಖರೀದಿಸಿದರು. ನಾಲ್ವರೂ ಮದ್ಯ ಸೇವಿಸಿದರು. ನಂತರ ಆ ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದರು. ಅಲ್ಲಿ ಇಬ್ಬರು ಪುರುಷರು ಕಾರಿನೊಳಗೆ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದರು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಪೋಕ್ಸೊ ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...